ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡಬೇಕು: ಅಮಿತ್​ ಶಾ ಆಜ್ಞೆ!

ದೆಹಲಿ: ನೂರಾರು ಭಾಷೆಗಳಿಂದ ಕೂಡಿರುವ ಭಾರತದಂತಹ ದೇಶದಲ್ಲಿ ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಭಾಷೆಯ ಬಳಕೆಯನ್ನು ಹೇರುವ ಪ್ರಯತ್ನ ಮಾಡುತ್ತಿದ್ದು, ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಡಿರುವ ಮಾತುಗಳು ಉರಿಯುತ್ತಿರುವ ಕೆಂಡಕ್ಕೆ ತುಪ್ಪ ಸುರಿಯುವಂತಿದೆ. ಹಿಂದಿ ದಿವಸ್ ಆಚರಣೆ ಹಿನ್ನೆಲೆ ಮಾತಾನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶ ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳಷ್ಟಿದೆ ಹಾಗಾಗಿ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಹಿಂದಿ […]

ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡಬೇಕು: ಅಮಿತ್​ ಶಾ ಆಜ್ಞೆ!
ಸಾಧು ಶ್ರೀನಾಥ್​

Updated on: Sep 14, 2020 | 1:43 PM

ದೆಹಲಿ: ನೂರಾರು ಭಾಷೆಗಳಿಂದ ಕೂಡಿರುವ ಭಾರತದಂತಹ ದೇಶದಲ್ಲಿ ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಭಾಷೆಯ ಬಳಕೆಯನ್ನು ಹೇರುವ ಪ್ರಯತ್ನ ಮಾಡುತ್ತಿದ್ದು, ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಡಿರುವ ಮಾತುಗಳು ಉರಿಯುತ್ತಿರುವ ಕೆಂಡಕ್ಕೆ ತುಪ್ಪ ಸುರಿಯುವಂತಿದೆ.

ಹಿಂದಿ ದಿವಸ್ ಆಚರಣೆ ಹಿನ್ನೆಲೆ ಮಾತಾನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶ ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳಷ್ಟಿದೆ ಹಾಗಾಗಿ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಹಿಂದಿ ಭಾಷೆಯ ಬಳಕೆಯನ್ನು ಹೆಚ್ಚು ಮಾಡಬೇಕು ಎಂದಿದ್ದಾರೆ. ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಿಂದಿ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us