ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು: ಗುಲಾಂ ನಬಿ ಆಜಾದ್

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ.

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು: ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್Image Credit source: Bangalore Mirror
Follow us
ನಯನಾ ರಾಜೀವ್
|

Updated on: Aug 17, 2023 | 9:49 AM

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್(Ghulam Nabi Azad) ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ.

600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ, ನಂತರ ಜನರು ಮತಾಂತರಗೊಂಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದು ಹೇಳಿದರು.

ಮತ್ತಷ್ಟು ಓದಿ: Ghulam Nabi Azad: ಪ್ರಧಾನಿ ಮೋದಿ ‘ರಾಜ್ಯಾಧಿಕಾರಿ’, ಎಂದಿಗೂ ಸೇಡು ತೀರಿಸಿಕೊಳ್ಳದ ರಾಜಕಾರಣಿ: ಗುಲಾಂ ನಬಿ ಆಜಾದ್

ಹಿಂದೂ-ಮುಸ್ಲಿಂ ಎನ್ನುವ ಬೇಧಭಾವವೇಕೆ? ಭಾರತೀಯ ಮುಸ್ಲಿಮರ ಬಗ್ಗೆ ಮಾತನಾಡಿದ ಆಜಾದ್, ಹಿಂದೂಗಳಂತೆಯೇ ಮುಸ್ಲಿಮರು ಕೂಡ ಈ ನೆಲದೊಳಗೆ ಹೋಗುತ್ತಾರೆ, ಅವರ ದೇಹ ಹಾಗೂ ಎಲುಬುಗಳು ಕೂಡ ಭಾರತ ಮಾತೆಯ ಭಾಗವಾಗುತ್ತದೆ, ಹಾಗಿದ್ದಾಗ ಹಿಂದೂ-ಮುಸ್ಲಿಂ ಎನ್ನುವ ಭಾವನೆ ಏಕೆ ಎಂದು ಪ್ರಶ್ನಿಸಿದರು.

ಗುಲಾಂ ನಬಿ ಆಜಾದ್ ಕಳೆದ ವರ್ಷ ಕಾಂಗ್ರೆಸ್ ತೊರೆದು ತಮ್ಮದೇ ಆದ ಹೊಸ ಪಕ್ಷವನ್ನು ಕಟ್ಟಿದ್ದರು. ಇದು ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ಎಂದೇ ಹೇಳಬಹುದು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ್ದರು. ಸೆ.7 ರಿಂದ ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ ಶುರುವಾಗಲಿದೆ. ಅವರು ಪಕ್ಷವನ್ನು ಟೀಕಿಸುವ ಭರದಲ್ಲಿ ಕಟುವಾದ ಭಾಷೆ ಬಳಕೆ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್