ನಿತೀಶ್ ಕುಮಾರ್ ಜೊತೆಗಿನ ಮೈತ್ರಿ ಮುರಿಯಲ್ಲ, ಆ ಪರಿಸ್ಥಿತಿ ಎಂದಿಗೂ ಉದ್ಭವಿಸುವುದಿಲ್ಲ: ಜಿತನ್ ರಾಮ್ ಮಾಂಝಿ
ನಿತೀಶ್ ಕುಮಾರ್ ಜೊತೆಗಿನ ಮೈತ್ರಿ ಕುರಿತು ಮಾತನಾಡಿದ ಮಾಂಝಿ, ಮೈತ್ರಿ ಮುರಿದುಕೊಳ್ಳುವ ಪರಿಸ್ಥಿತಿ ಎಂದಿಗೂ ಉದ್ಭವಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ, ನಿತೀಶ್ ಕುಮಾರ್ ನನಗೆ ಸಾಕಷ್ಟು ಗೌರವವನ್ನು ನೀಡಿದ್ದಾರೆ ಮತ್ತು ಅವರು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (HAM) ಪಕ್ಷದ ಮುಖ್ಯಸ್ಥ ಜಿತನ್ ರಾಮ್ ಮಾಂಝಿ (Jitan Ram Manjhi) ಮಂಗಳವಾರ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ (Nitish Kumar) ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಅದೇ ವೇಳೆ 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಹಾಮೈತ್ರಿಕೂಟ ಅಥವಾ ಮಹಾಘಟಬಂಧನ್‌ನಲ್ಲಿ ಸಮನ್ವಯ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿದ್ದಾರೆ. ರಾಜಕೀಯದಲ್ಲಿ ಯಾವುದೇ ಭರವಸೆಗಳಿಲ್ಲದಿದ್ದರೂ, ನಾನು ನಿತೀಶ್ ಕುಮಾರ್ ಅವರನ್ನು ಬೆಂಬಲಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದೇನೆ. ಕಾಂಗ್ರೆಸ್ ಅಥವಾ ಸಿಪಿಐ (ಎಂ), ಮಹಾಘಟಬಂಧನ್‌ನಲ್ಲಿ ಸಮನ್ವಯ ಸಮಿತಿಯನ್ನು ರಚಿಸಬೇಕು ಎಂದು ಎಲ್ಲರೂ ಒತ್ತಾಯಿಸಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಮಾಂಝಿ ಹೇಳಿದ್ದಾರೆ
ಕುಮಾರ್ ಜೊತೆಗಿನ ಮೈತ್ರಿ ಕುರಿತು ಮಾತನಾಡಿದ ಮಾಂಝಿ, ಮೈತ್ರಿ ಮುರಿದುಕೊಳ್ಳುವ ಪರಿಸ್ಥಿತಿ ಎಂದಿಗೂ ಉದ್ಭವಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ, ನಿತೀಶ್ ಕುಮಾರ್ ನನಗೆ ಸಾಕಷ್ಟು ಗೌರವವನ್ನು ನೀಡಿದ್ದಾರೆ ಮತ್ತು ಅವರು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಪರಿಸ್ಥಿತಿ ಉದ್ಭವಿಸಿದರೆ ನಮ್ಮ ಪಕ್ಷದ ಕಾರ್ಯಕರ್ತರಿಗೆ ಭರವಸೆಯೇ ಇಲ್ಲದಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬಿಹಾರದಲ್ಲಿ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸುತ್ತಿರುವ ಜನತಾ ದಳ (ಯುನೈಟೆಡ್) ನಾಯಕ ಕಳೆದ ಹಲವು ತಿಂಗಳುಗಳಿಂದ ತಮ್ಮ ಪ್ರಚಾರದ ಭಾಗವಾಗಿ ವಿವಿಧ ಪಕ್ಷಗಳ ವಿವಿಧ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಕಳೆದ ತಿಂಗಳು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಕಳೆದ ವಾರ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಸವಾಲೊಡ್ಡಲು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಅವರು ಭುವನೇಶ್ವರದಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ರಾಂಚಿಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಮುಂಬೈನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಅವರನ್ನು ಭೇಟಿಯಾದರು.
ಇದನ್ನೂ ಓದಿ: New Parliament Building: ಮೇ 28 ರಂದು ನೂತನ ಸಂಸತ್ ಭವನ ಉದ್ಘಾಟನೆ ಸಾಧ್ಯತೆ
ಪವಾರ್ ಅವರೊಂದಿಗಿನ ಭೇಟಿಯ ನಂತರ ಕುಮಾರ್, ಎನ್‌ಸಿಪಿ ಮುಖ್ಯಸ್ಥರು ಬಿಜೆಪಿಗೆ ಸವಾಲು ಹಾಕಲು ವಿರೋಧ ಪಕ್ಷದ ಮುಖವಾಗುವುದನ್ನು ನೋಡಲು ಹೆಚ್ಚು ಸಂತೋಷವಾಗುತ್ತದೆ ಎಂದು ಹೇಳಿದರು.
ಕೇಂದ್ರದಿಂದ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ರಾಜ್ಯಾದ್ಯಂತ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಪ್ರತಿಪಕ್ಷ ರಚನೆಗೆ ಮುಂದಾಗಿವೆ. ಇತ್ತೀಚೆಗಷ್ಟೇ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ನಂತರ ಇದಕ್ಕೆ ಹೆಚ್ಚಿನ ಉತ್ತೇಜನ ಸಿಕ್ಕಿದೆ. ವಿಪಕ್ಷಗಳ ಒಗ್ಗಟ್ಟಿನ ಕುರಿತು ಮುಂದಿನ ಕ್ರಮವನ್ನು ನಿರ್ಧರಿಸಲು ಕನಿಷ್ಠ 12 ಪ್ರಮುಖ ವಿರೋಧ ಪಕ್ಷಗಳು ಪಾಟ್ನಾದಲ್ಲಿ ಸಭೆ ಸೇರುವ ನಿರೀಕ್ಷೆಯಿದೆ ಎಂದು ಜೆಡಿಯು ಮತ್ತು ಆರ್‌ಜೆಡಿ ನಾಯಕರು ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದ ಒಂದು ದಿನದ ನಂತರ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ