Gujarat: ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಧುಮುಕಿದ ಬಿಜೆಪಿ ಶಾಸಕ, ಜನರಿಂದ ಭಾರಿ ಪ್ರಶಂಸೆ

ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ಮೂವರು ಯುವಕರನ್ನು ರಕ್ಷಿಸಿದ್ದು, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ.

Gujarat: ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಧುಮುಕಿದ ಬಿಜೆಪಿ ಶಾಸಕ, ಜನರಿಂದ ಭಾರಿ ಪ್ರಶಂಸೆ
ಹೀರಾ ಸೋಲಂಕಿImage Credit source: Hindustan Times
Follow us
ನಯನಾ ರಾಜೀವ್
|

Updated on: Jun 01, 2023 | 11:45 AM

ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ಮೂವರು ಯುವಕರನ್ನು ರಕ್ಷಿಸಿದ್ದು, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ. ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದು ಓರ್ವ ಸಾವನ್ನಪ್ಪಿದ್ದಾರೆ. ಬುಧವಾರ ಮಧ್ಯಾಹ್ನ ನಾಲ್ವರು ಯುವಕರು ಸಮುದ್ರ ಕೊಲ್ಲಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ಸಮಯದಲ್ಲಿ, ಅವರು ಆಳವಾದ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕಡಲ ತೀರದಲ್ಲಿರುವ ರಾಜುಲಾ ಬಿಜೆಪಿ ಶಾಸಕ ಹೀರಾ ಸೋಲಂಕಿ ಅವರಿಗೆ ಮಾಹಿತಿ ನೀಡಿದ್ದಾರೆ.

ಇದಾದ ಬಳಿಕ ಶಾಸಕ ಬೋಟ್ ಸಹಾಯದಿಂದ ಸ್ಥಳಕ್ಕಾಗಮಿಸಿ ನೀರಿನಲ್ಲಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ್ದು, ಮೂವರು ಯುವಕರು ಸಕಾಲದಲ್ಲಿ ಹೊರಬಂದಿದ್ದಾರೆ. ಅದೇ ಸಮಯದಲ್ಲಿ, ಒಬ್ಬ ಯುವಕ ಪತ್ತೆಯಾಗಿಲ್ಲ, ಅವರ ಹುಡುಕಾಟದಲ್ಲಿ ಸುಮಾರು 2 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು. ಇದಾದ ಬಳಿಕ ನಾಲ್ಕನೇ ಯುವಕನ ಮೃತದೇಹ ಪತ್ತೆಯಾಗಿದೆ.

ಮಾಹಿತಿ ಪ್ರಕಾರ, ನಾಲ್ವರು ಸ್ನೇಹಿತರಾದ ಕಲ್ಪೇಶ್ ಶಿಯಾಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ ಮತ್ತು ಜೀವನ್ ಗುಜಾರಿಯಾ ಅವರು ಮಧ್ಯಾಹ್ನ ಪಟ್ವಾ ಗ್ರಾಮದ ಬಳಿ ಸ್ನಾನ ಮಾಡಲು ಹೋಗಿದ್ದರು.

ಮತ್ತಷ್ಟು ಓದಿ: ದೇವನಹಳ್ಳಿ: ಈಜಲು ಹೋಗಿ ನಾಲ್ವರು ನೀರುಪಾಲು, ಸ್ನೇಹಿತರ ಮೃತದೇಹಗಳು ಪತ್ತೆ

ಸಮುದ್ರದಲ್ಲಿ ಬಲವಾದ ಪ್ರವಾಹ ಮತ್ತು ಬಲವಾದ ಅಲೆಗಳ ಕಾರಣ, ಈ ನಾಲ್ವರು ಯುವಕರು ಆಳವಾದ ನೀರಿನ ಕಡೆಗೆ ತಿರುಗಿ ಮುಳುಗಲು ಪ್ರಾರಂಭಿಸಿದರು. ಇದಾದ ನಂತರ ಸ್ಥಳದಲ್ಲಿ ನೂಕುನುಗ್ಗಲು ಉಂಟಾಯಿತು. ಅದೇ ಸಮಯದಲ್ಲಿ ಜೀವನ್ ಗುಜ್ರಿಯಾ ಎಂಬ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಗುಜರಾತಿನ ಬೊಟಾಡ್ ಜಿಲ್ಲೆಯ ಐವರು ಮಕ್ಕಳು ಇತ್ತೀಚೆಗೆ ಕೃಷ್ಣ ಸಾಗರ ಸರೋವರದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ವರದಿಯ ಪ್ರಕಾರ, ಇಬ್ಬರು ಮಕ್ಕಳು ಸರೋವರದಲ್ಲಿ ಈಜುತ್ತಿದ್ದಾಗ ಅವರು ಮುಳುಗಲು ಪ್ರಾರಂಭಿಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸಲು ಇನ್ನೂ ಮೂವರು ಕೆರೆಗೆ ಹಾರಿದ್ದು, ಕೊನೆಗೆ ಅವರೂ ನೀರಿನಲ್ಲಿ ಮುಳುಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್