AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ. ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ. ಇನ್ನು ದೆಹಲಿಯ […]

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..
ಆಯೇಷಾ ಬಾನು
ಆಯೇಷಾ ಬಾನು|

Updated on: Jul 06, 2020 | 7:58 AM

Share

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ.

ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ.

ಇನ್ನು ದೆಹಲಿಯ ಕೆಂಪುಕೋಟೆ, ಕುತೂಬ್ ಮಿನಾರ್, ಸಾಂಚಿ ಸ್ತೂಪ, ಸಫ್ದರ್ ಜಂಗ್ ಗೋರಿ, ಪುರಾನಾ ಕಿಲಾ ಸ್ಮಾರಕಗಳು ಓಪನ್ ಆಗುತ್ತವೆ. ವಿಶ್ವವಿಖ್ಯಾತ ತಾಜ್​ ​​​ಮಹಲ್ ಬಾಗಿಲು ಮಾತ್ರ ಇಂದು ತೆರೆಯಲ್ಲ. ಉಳಿದ ಸ್ಮಾರಕ ತೆರೆಯಲು ಕೇಂದ್ರ ಸಂಸ್ಕೃತಿ ಇಲಾಖೆ ಅನುಮತಿ ನೀಡಿದೆ. ಎಂದಿನಂತೆ ಪ್ರವಾಸಿಗರು ತಮ್ಮ ನೆಚ್ಚಿನ ಸ್ಮಾರಕಗಳ ಸೌಂದರ್ಯವನ್ನು ಸವಿಯಬಹುದು. ಸ್ಮಾರಕಗಳ ಪ್ರವೇಶಕ್ಕೂ ಮುನ್ನ ಕೊರೊನಾ ಎಚ್ಚರಿಕೆಯ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್