AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆಡೆ ಹಿಟ್​ ಆ್ಯಂಡ್ ರನ್ ಕಾನೂನು ವಿರುದ್ಧ ಟ್ರಕ್​ ಚಾಲಕರ ಪ್ರತಿಭಟನೆ, ಇನ್ನೊಂದೆಡೆ ಪೆಟ್ರೋಲ್​ ಬಂಕ್​ನಲ್ಲಿ ಜನವೋ ಜನ

ಇತ್ತೀಚೆಗೆ ಸರ್ಕಾರ ಜಾರಿಗೆ ತಂದಿರುವ ಭಾರತೀಯ ನ್ಯಾಯ ಸಂಹಿತೆಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದೆ. ಹೊಸ ಕಾನೂನಿನಲ್ಲಿ 7 ಲಕ್ಷ ರೂಪಾಯಿ ದಂಡ ಮತ್ತು ಹಿಟ್ ಆ್ಯಂಡ್ ರನ್(Hit And Run)​ ರಸ್ತೆ ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ 10 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಒಂದೆಡೆ ಹಿಟ್​ ಆ್ಯಂಡ್ ರನ್ ಕಾನೂನು ವಿರುದ್ಧ ಟ್ರಕ್​ ಚಾಲಕರ ಪ್ರತಿಭಟನೆ, ಇನ್ನೊಂದೆಡೆ ಪೆಟ್ರೋಲ್​ ಬಂಕ್​ನಲ್ಲಿ ಜನವೋ ಜನ
ಪೆಟ್ರೋಲ್ ಬಂಕ್Image Credit source: The tribune
Follow us
ನಯನಾ ರಾಜೀವ್
|

Updated on: Jan 02, 2024 | 2:13 PM

ಇತ್ತೀಚೆಗೆ ಸರ್ಕಾರ ಜಾರಿಗೆ ತಂದಿರುವ ಭಾರತೀಯ ನ್ಯಾಯ ಸಂಹಿತೆಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದೆ. ಹೊಸ ಕಾನೂನಿನಲ್ಲಿ 7 ಲಕ್ಷ ರೂಪಾಯಿ ದಂಡ ಮತ್ತು ಹಿಟ್ ಆ್ಯಂಡ್ ರನ್(Hit And Run)​ ರಸ್ತೆ ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ 10 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಬಗ್ಗೆ ಲಾರಿ ಚಾಲಕರಲ್ಲಿ ತೀವ್ರ ಅಸಮಾಧಾನವಿದೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಕೆಲವೆಡೆ ಇಂಧನ ಕೊರತೆ ಎದುರಾಗುವ ಭೀತಿ ಎದುರಾಗಿದೆ. ಈ ನಿಬಂಧನೆಗಳಿಂದಾಗಿ ಟ್ರಕ್ ಚಾಲಕರು ಅನಗತ್ಯ ಕಿರುಕುಳವನ್ನು ಎದುರಿಸಬೇಕಾಗಬಹುದು ಎಂದು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಹೇಳಿದೆ.

ಆದ್ದರಿಂದ ಇವುಗಳನ್ನು ಹಿಂಪಡೆಯಬೇಕು. ಈ ನಿಬಂಧನೆಗಳು ಇನ್ನೂ ಜಾರಿಗೆ ಬಂದಿಲ್ಲ. ಆದರೂ ಮಹಾರಾಷ್ಟ್ರದಲ್ಲಿ ಟ್ರಕ್ ಚಾಲಕರ ಅತ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಕಂಡುಬರುತ್ತಿವೆ. ಮಹಾರಾಷ್ಟ್ರದ ಪೆಟ್ರೋಲಿಯಂ ವಿತರಕರ ಸಂಘದ ಕಾರ್ಯದರ್ಶಿ ಅಕಿಲ್ ಅಬ್ಬಾಸ್ ಮಾತನಾಡಿ, ಛತ್ರಪತಿ ಸಂಭಾಜಿನಗರದ ಕೆಲವು ಪೆಟ್ರೋಲ್ ಪಂಪ್‌ಗಳಲ್ಲಿ ಈಗಾಗಲೇ ಕೆಲಸ ಸ್ಥಗಿತಗೊಂಡಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: New Criminal Laws: ಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

ಸೊಲ್ಲಾಪುರ, ಕೊಲ್ಹಾಪುರ, ನಾಗ್ಪುರ ಮತ್ತು ಗೊಂಡಿಯಾ ಜಿಲ್ಲೆಗಳಲ್ಲಿಯೂ ರಾಸ್ತಾ ರೋಕೋ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ಸಮಯದಲ್ಲಿ, ನವಿ ಮುಂಬೈ ಮತ್ತು ಇತರ ಸ್ಥಳಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನ ಮತ್ತು ಬಿಹಾರಗಳಲ್ಲಿ ಭಾಗಶಃ ಪರಿಣಾಮ ಬೀರಿತು. ಮಧ್ಯಪ್ರದೇಶದ ಇಂದೋರ್, ಗುಜರಾತ್‌ನ ಸೂರತ್ ಮತ್ತು ಹರಿಯಾಣದ ಅಂಬಾಲಾದಲ್ಲಿ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.ಉನಾ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ಕಾನೂನು ತಿದ್ದುಪಡಿ ಮಾಡಿದೆ. ಈ ತಿದ್ದುಪಡಿಯನ್ನು ವಿರೋಧಿಸಿ ಟ್ರಕ್ ಚಾಲಕರು ಮುಷ್ಕರ ನಡೆಸಿದ್ದಾರೆ.

ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಜನರು ತಮ್ಮ ವಾಹನಗಳಿಗೆ ಅಗತ್ಯಕ್ಕಿಂತ ಹೆಚ್ಚು ಇಂಧನ ತುಂಬಿಸಿಕೊಳ್ಳುತ್ತಿರುವುದು ಕಂಡುಬಂದಿದ್ದು, ಹಲವು ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಂಪೂರ್ಣ ಖಾಲಿಯಾಗಿದೆ. ಒಂದೆಡೆ ಪೆಟ್ರೋಲ್‌ಗಾಗಿ ಗ್ರಾಹಕರ ನಡುವೆ ಜಗಳಗಳು ಕೂಡ ನಡೆಯುತ್ತಿವೆ.

ಈ ಮೂರು ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ- 1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್- 1898, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-1872 ಅನ್ನು ಬದಲಾಯಿಸುತ್ತದೆ. ಭಾರತೀಯ ನ್ಯಾಯ ಸಂಹಿತೆ ಜಾರಿಯಾದರೆ, ಭಾರತೀಯ ದಂಡ ಸಂಹಿತೆ (IPC)ರದ್ದಾಗಲಿದೆ.

ಚಾಲಕರ ಮುಷ್ಕರದಿಂದಾಗಿ ತೈಲ ಪೂರೈಕೆಗೆ ತೊಂದರೆಯಾಗಿದೆ ಎನ್ನುತ್ತಾರೆ ಪೆಟ್ರೋಲ್ ಪಂಪ್ ನಿರ್ವಾಹಕರು. ಈ ನಿಟ್ಟಿನಲ್ಲಿ ಸರ್ಕಾರ ಮುತುವರ್ಜಿ ವಹಿಸಿ ಲಾರಿ ಚಾಲಕರ ಜತೆ ಮಾತುಕತೆ ನಡೆಸಿ ಮುಷ್ಕರದ ಪರಿಸ್ಥಿತಿಯನ್ನು ಶೀಘ್ರವೇ ಬಗೆಹರಿಸಿ ಎಲ್ಲ ವ್ಯವಸ್ಥೆ ಸುಗಮವಾಗಬೇಕು ಎಂದು ತಿಳಿಸಿದ್ದಾರೆ.

ಒಂದು ವೇಳೆ ರಸ್ತೆಯಲ್ಲಿ ಸಂಪೂರ್ಣವಾಗಿ ಮಂಜು ಮುಸುಕಿದ ವಾತಾವರಣವಿದ್ದು ರಸ್ತೆ ಕಾಣದೆ ಅಪಘಾತ ಸಂಭವಿಸಿದರೆ, ಇದನ್ನೂ ಹಿಟ್‌ ಆ್ಯಂಡ್ ರನ್ ಎಂದು ಪರಿಗಣಿಸಬಹುದು. ಈ ಮೂಲಕ ಚಾಲಕರು 10 ವರ್ಷಗಳ ಕಾಲ ಜೈಲಲ್ಲಿ ಕೂರಬೇಕಾಗುತ್ತದೆ ಎಂದು ಚಾಲಕರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್