AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಹಾಕಿ ದಿಗ್ಗಜ ಪರ್ಗತ್ ಸಿಂಗ್ ನೇಮಕ; ರಾಜಾ ವಾರಿಂಗ್ ರಾಜೀನಾಮೆ ಬೆನ್ನಲ್ಲೇ ಹೈಕಮಾಂಡ್ ನಿರ್ಧಾರ

ಮುಂದಿನ ವರ್ಷ ಪಂಜಾಬ್‌ನಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನವೇ, ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಕಿ ಕ್ಷೇತ್ರದ ದಂತಕಥೆ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪರ್ಗತ್ ಸಿಂಗ್ ಅವರನ್ನು ನೇಮಕ ಮಾಡಿದೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಈ ಪ್ರಮುಖ ಬದಲಾವಣೆ ನಡೆದಿದೆ. ಪರ್ಗತ್ ಸಿಂಗ್ ಅವರು ಮಾಜಿ ಸಿಎಂ ಚರಣ್​ಜೀತ್ ಸಿಂಗ್ ಚನ್ನಿ ಹಾಗೂ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಅವರಿಗೆ ಅತ್ಯಂತ ಆಪ್ತರು ಎಂದು ಹೇಳಲಾಗಿದೆ.

ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಹಾಕಿ ದಿಗ್ಗಜ ಪರ್ಗತ್ ಸಿಂಗ್ ನೇಮಕ; ರಾಜಾ ವಾರಿಂಗ್ ರಾಜೀನಾಮೆ ಬೆನ್ನಲ್ಲೇ ಹೈಕಮಾಂಡ್ ನಿರ್ಧಾರ
ಪರ್ಗತ್ ಸಿಂಗ್Image Credit source: TV9
ಸುಷ್ಮಾ ಚಕ್ರೆ
|

Updated on: Oct 02, 2026 | 10:16 PM

Share

ಚಂಡೀಗಢ, ಅಕ್ಟೋಬರ್ 2: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ತಮ್ಮ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಮಾಜಿ ಹಾಕಿ ಪಟು ಹಾಗೂ ಶಾಸಕ ಪರ್ಗತ್ ಸಿಂಗ್ ಅವರನ್ನು ನೂತನ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಈ ನೇಮಕ ಮಾಡಲಾಗಿದ್ದು, ಮುಂಬರುವ ಪಂಜಾಬ್ ಶಾಸನಸಭಾ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆಯು ಪಂಜಾಬ್ ರಾಜಕೀಯದಲ್ಲಿ ಮಹತ್ವದ ತಿರುವು ಪಡೆದುಕೊಂಡಿದೆ.

ಭಾರತೀಯ ಹಾಕಿ ತಂಡದ ಮಾಜಿ ನಾಯಕರಾಗಿದ್ದ ಪರ್ಗತ್ ಸಿಂಗ್ ಅವರು ಪ್ರಸ್ತುತ ಜಲಂಧರ್ ಕಂಟ್ ಕ್ಷೇತ್ರದ ಶಾಸಕರಾಗಿದ್ದಾರೆ. ಇವರು ದಲಿತ ಹಾಗೂ ಯುವ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿರುವ ಪರ್ಗತ್ ಸಿಂಗ್ ಅವರಿಗೆ ಪಂಜಾಬ್ ಕಾಂಗ್ರೆಸ್‌ನಲ್ಲಿರುವ ಆಂತರಿಕ ಬಣಗಳ ಭೇದಭಾವವನ್ನು ಸರಿಪಡಿಸಿ, ರಾಜ್ಯದಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಾರ್ಟಿ (ಆಪ್) ಮತ್ತು ಪ್ರತಿಪಕ್ಷ ಬಿಜೆಪಿಯನ್ನು ಎದುರಿಸಲು ಪಕ್ಷವನ್ನು ಬಲಪಡಿಸುವ ಬೃಹತ್ ಜವಾಬ್ದಾರಿಯಿದೆ.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಕಾಂಗ್ರೆಸ್ ಅಧ್ಯಕ್ಷ ರಾಜಾ ವಾರಿಂಗ್ ರಾಜೀನಾಮೆ

ಮಾಜಿ ಸಿಎಂ ಚರಣ್​ಜೀತ್ ಚನ್ನಿ ಅವರೊಂದಿಗಿನ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30ರಂದು ರಾಜಾ ವಾರಿಂಗ್ ತಮ್ಮ ಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಹಸ್ತಾಂತರಿಸಿದ್ದ ಅವರು, ಪಂಜಾಬ್‌ನಲ್ಲಿ ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳು ಮತ್ತು ಸಾಮರ್ಥ್ಯಗಳ ಬಗ್ಗೆ ವರಿಷ್ಠರಿಗೆ ವಿವರಿಸಿದ್ದರು. ಇಂದು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಾ ವಾರಿಂಗ್, ಸಚಿನ್ ಪೈಲಟ್ ಅವರ ಹೆಸರು ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ದರು. ತಮ್ಮ ರಾಜೀನಾಮೆಗೆ ಸಚಿನ್ ಪೈಲಟ್ ಅವರೇ ಪ್ರಮುಖ ಕಾರಣ ಎಂದು ಟೀಕಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ