AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಚುನಾವಣೆ ನಡೆದು, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯವನ್ನೇ ಬಿಡುತ್ತೇನೆ; ಕೇಜ್ರಿವಾಲ್ ಶಪಥ

ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್​ಗೆ ಬಿಗ್ ರಿಲೀಫ್ ಸಿಕ್ಕಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿರುವ ಅರವಿಂದ್ ಕೇಜ್ರಿವಾಲ್, ‘ನಕಲಿ ಅಬಕಾರಿ ಪ್ರಕರಣ ನನ್ನ ಖ್ಯಾತಿಯನ್ನು ಟಾರ್ಗೆಟ್ ಮಾಡಿದೆ. ಈಗಲೂ ದೆಹಲಿಯಲ್ಲಿ ಚುನಾವಣೆ ನಡೆದರೆ, ಅದರಲ್ಲಿ ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗಳಿಸಿದರೆ ನಾನು ರಾಜಕೀಯವನ್ನೇ ಬಿಡುತ್ತೇನೆ’ ಎಂದು ಹೇಳಿದ್ದಾರೆ. ಈಗಾಗಲೇ ಸಿಬಿಐ ದೆಹಲಿ ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ದೆಹಲಿಯಲ್ಲಿ ಚುನಾವಣೆ ನಡೆದು, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯವನ್ನೇ ಬಿಡುತ್ತೇನೆ; ಕೇಜ್ರಿವಾಲ್ ಶಪಥ
Arvind Kejriwal And Sisodia
ಸುಷ್ಮಾ ಚಕ್ರೆ
|

Updated on: Feb 27, 2026 | 7:50 PM

Share

ನವದೆಹಲಿ, ಫೆಬ್ರವರಿ 27: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರಿಗೆ ದೆಹಲಿ ನ್ಯಾಯಾಲಯವು ಕ್ಲೀನ್ ಚಿಟ್ ನೀಡಿದೆ.

ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಪ್ರಧಾನಿ ಮೋದಿ, ಅಮಿತ್ ಶಾ ದೇಶದ ಕ್ಷಮೆ ಯಾಚಿಸಬೇಕು. ನ್ಯಾಯಾಲಯವು ಈ ಪ್ರಕರಣವನ್ನು ಸಂಪೂರ್ಣವಾಗಿ ನಕಲಿ, ವಿಚಾರಣೆಗೆ ಅನರ್ಹ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನಮ್ಮ ವಿರುದ್ಧ ಪಿತೂರಿ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಅಬಕಾರಿ ಹಗರಣ; ಕೇಜ್ರಿವಾಲ್ ಬಿಡುಗಡೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ದೆಹಲಿಯಲ್ಲಿ ಚುನಾವಣೆ ನಡೆಸಿ ಏನಾಗುತ್ತದೆ ಎಂದು ನೋಡೋಣ ಎಂದು ಸವಾಲು ಹಾಕಿದ್ದಾರೆ. “ಬಿಜೆಪಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯವನ್ನೇ ತ್ಯಜಿಸುತ್ತೇನೆ” ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆಗೊಳಿಸಲಾಯಿತು. ರೌಸ್ ಅವೆನ್ಯೂ ಸಿಬಿಐಗೆ ತೀಕ್ಷ್ಣವಾದ ಛೀಮಾರಿ ಹಾಕಿತ್ತು. ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಎಂದು ತೀರ್ಪು ನೀಡಿತು. 2021-22ರಲ್ಲಿ ಆಗಿನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿಗೆ ಹೊಸ ಅಬಕಾರಿ ನೀತಿ ರೂಪಿಸುವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಸಿಬಿಐ ಆರೋಪಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ