ಕೊರೊನಾ 3ನೇ ಅಲೆ ಅಪಾಯದ ನಡುವೆ ಹಬ್ಬಗಳ ಸಾಮೂಹಿಕ ಆಚರಣೆ ಮಾಡುವುದು ಸೂಕ್ತವಲ್ಲ: ಐಎಮ್​ಎ ಮುಖ್ಯಸ್ಥ

ಒಡಿಶಾದ ಪುರಿ ಜಗನ್ನಾಥ ಹಾಗೂ ಗುಜರಾತ್​ನ ಅಹಮದಾಬಾದ್​ನಲ್ಲಿ ವಾರ್ಷಿಕ ರಥೋತ್ಸವ ಕಾರ್ಯಕ್ರಮ ನಡೆದ ಬೆನ್ನಲ್ಲೇ ಜಯಲಾಲ್ ಈ ಹೇಳಿಕೆ ನೀಡಿದ್ದಾರೆ. ಇಲ್ಲಿ ರಥೋತ್ಸವವು ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆಯೇ ನಡೆದಿತ್ತು.

ಕೊರೊನಾ 3ನೇ ಅಲೆ ಅಪಾಯದ ನಡುವೆ ಹಬ್ಬಗಳ ಸಾಮೂಹಿಕ ಆಚರಣೆ ಮಾಡುವುದು ಸೂಕ್ತವಲ್ಲ: ಐಎಮ್​ಎ ಮುಖ್ಯಸ್ಥ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Jul 12, 2021 | 4:14 PM

ದೆಹಲಿ: ಕೊರೊನಾ ಎರಡನೇ ಅಲೆಯಿಂದ ಈಗಷ್ಟೇ ದೇಶ ಚೇತರಿಸಿಕೊಳ್ಳುತ್ತಿದೆ. ಹಂತಹಂತವಾಗಿ ಅನ್​ಲಾಕ್ ಪ್ರಕ್ರಿಯೆ ಸಾಗುತ್ತಿದ್ದು, ಕೆಲವೆಡೆ ಲಾಕ್​ಡೌನ್ ನಿಯಮಾವಳಿಗಳು ಇನ್ನೂ ಸಂಪೂರ್ಣ ಸಡಿಲಿಕೆ ಆಗಿಲ್ಲ. ಅಷ್ಟರಲ್ಲಾಗಲೇ ಕೊರೊನಾ ಮೂರನೇ ಅಲೆಯ ಬಗ್ಗೆ ಮಾತುಗಳು ಕೇಳಿಬಂದಿದೆ. ಈ ಬಗ್ಗೆ ಐಎಮ್​ಎ ಮುಖ್ಯಸ್ಥರು ಜನರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಕೊರೊನಾ ಮೂರನೇ ಅಲೆ ಸಂಭವದ ಕಾರಣದಿಂದ ಉತ್ಸವ, ಜಾತ್ರೆ, ಹಬ್ಬ ಹರಿದಿನಗಳು ಇಂತಹ ಸಮಾರಂಭಗಳನ್ನು ಆಯೋಜಿಸುವುದು ಅಪಾಯ ತಂದೊಡ್ಡಬಹುದು ಎಂದು ಹೇಳಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಜೆ.ಎ. ಜಯಲಾಲ್ ಉತ್ಸವ, ಹಬ್ಬ- ಹರಿದಿನಗಳ ಆಚರಣೆಯಿಂದ ಕೊರೊನಾ ಹೆಚ್ಚುವ ಅಪಾಯವಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರು ಸೇರಿ ನಡೆಸುವಂತಹ ಯಾವುದೇ ಸಭೆ, ಸಮಾರಂಭದ ಬಗ್ಗೆ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಜಯಲಾಲ್ ಹೇಳಿದ್ದಾರೆ.

ಒಡಿಶಾದ ಪುರಿ ಜಗನ್ನಾಥ ಹಾಗೂ ಗುಜರಾತ್​ನ ಅಹಮದಾಬಾದ್​ನಲ್ಲಿ ವಾರ್ಷಿಕ ರಥೋತ್ಸವ ಕಾರ್ಯಕ್ರಮ ನಡೆದ ಬೆನ್ನಲ್ಲೇ ಜಯಲಾಲ್ ಈ ಹೇಳಿಕೆ ನೀಡಿದ್ದಾರೆ. ಇಲ್ಲಿ ರಥೋತ್ಸವವು ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆಯೇ ನಡೆದಿತ್ತು.

ಶಿವನ ಕನ್ವರ್ ಯಾತ್ರೆ ನಡೆಸುವುದನ್ನು ಕೊರೊನಾ ಮೂರನೇ ಅಲೆ ಸಾಧ್ಯತೆಯ ಕಾರಣದಿಂದ ನಿಲ್ಲಿಸುವಂತೆ ಸೂಚಿಸಲಾಗಿದೆ. ಕಳೆದ ಬಾರಿಯ ಕನ್ವರ್ ಯಾತ್ರೆ ಕೊರೊನಾ ಕಾರಣದಿಂದ ನಡೆದಿರಲಿಲ್ಲ. ಶಿವನ ಭಕ್ತರು, ಕನ್ವರಿಯಾ ಎಂದು ಕರೆಯಲ್ಪಡುವವರು ಈ ಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಉತ್ತರ ಪ್ರದೇಶ, ದೆಹಲಿ, ಪಂಜಾಬ್, ಹರ್ಯಾಣ ಹಾಗೂ ಹಿಮಾಚಲ ಪ್ರದೇಶದ ಜನರು ಬಹುಸಂಖ್ಯೆಯಲ್ಲಿ ಇಲ್ಲಿ ಪಾಲ್ಗೊಳ್ಳುತ್ತಾರೆ.

ಪ್ರತಿ ವರ್ಷ ಸುಮಾರು ಮೂರು ಕೋಟಿ ಕನ್ವರಿಯಾ ಭಕ್ತರು, 15 ದಿನದ ಅವಧಿಯಲ್ಲಿ ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಹರಿದ್ವಾರ, ಗೋಮುಖ್, ಗಂಗೋತ್ರಿ ಮುಂತಾದ ಕಡೆಗಳಲ್ಲಿ ನದಿಯ ಪವಿತ್ರ ಜಲ ಸಂಗ್ರಹಿಸಿ ಸಮೀಪದ ಶಿವ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗುತ್ತದೆ.

ಈ ಯಾತ್ರೆಯ ಆಯೋಜಿಸುವ ಬಗ್ಗೆ ಉತ್ತರಾಖಂಡ್ ಮುಖ್ಯಮಂತ್ರಿ ಪುಶ್ಕರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಜೀವಕ್ಕೆ ಅಪಾಯ ಆಗದಂತೆ ನೋಡಿಕೊಳ್ಳುವುದು ನಮ್ಮ ಪ್ರಥಮ ಆದ್ಯತೆ ಆಗಿದೆ. ಕನ್ವರ್ ಯಾತ್ರೆಯ ಕಾರಣದಿಂದ ಕೊರೊನಾ ಹೆಚ್ಚಳವಾಗಿ ಜನರು ಸಾಯುವುದನ್ನು ದೇವರೂ ಇಷ್ಟಪಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Sabarimala Temple: ಜು.17ರಿಂದ 5 ದಿನ ಬಾಗಿಲು ತೆರೆಯಲಿರುವ ಶಬರಿಮಲೆ ದೇಗುಲ; ಕೊರೊನಾ ನೆಗೆಟಿವ್​ ರಿಪೋರ್ಟ್ ಕಡ್ಡಾಯ

ಸಚಿವ ಸಂಪುಟದಲ್ಲಿ ಮಂತ್ರಿಗಳ ಸಂಖ್ಯೆ ಹೆಚ್ಚಾಗಿದೆ; ಕೊರೊನಾ ಲಸಿಕೆ ಸಂಖ್ಯೆ ಏರಿಕೆಯಾಗಿಲ್ಲ: ರಾಹುಲ್ ಗಾಂಧಿ ಟೀಕೆ

Published On - 4:10 pm, Mon, 12 July 21

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ