ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ. ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ […]

ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ

Updated on: Dec 03, 2019 | 8:01 AM

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ.

ಮೋದಿ ಆಫರ್ ಕೊಟ್ಟಿದ್ರು:
ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ ವೈಯಕ್ತಿಕ ಸಂಬಂಧ ಚೆನ್ನಾಗಿದೆ. ಹಾಗೇ ಮುಂದುವರಿಯೋಣ. ಆದ್ರೆ, ಜತೆಯಾಗಿ ಕೆಲಸ ಅಸಾಧ್ಯವೆಂದೆ ಅಂದಿದ್ದಾರೆ.

ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಜಮಾತ್‌:
ಅಯೋಧ್ಯಾ ಭೂವಿವಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಮರು ಪರಿಶೀಲನೆ ಕೋರಿ ಜಮಾತ್ ಉಲೇಮಾ ಇ ಹಿಂದ್ ಸಂಘಟನೆ ಅರ್ಜಿ ಸಲ್ಲಿಸಿದೆ. ಅಲ್ಲದೆ ರಾಮ ಮಂದಿರ ನಿರ್ಮಿಸಲು 3 ತಿಂಗಳ ಒಳಗೆ ಟ್ರಸ್ಟ್ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿರುವ ತೀರ್ಪಿನ ಜಾರಿಗೂ ಮಧ್ಯಂತರ ತಡೆ ಕೋರಿದೆ.

ಸೇನೆಯಿಂದ ಪೂರ್ವಾಭ್ಯಾಸ:
ನೌಕಾಪಡೆ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಯಾಚರಣಾ ಪ್ರದರ್ಶನಗಳ ಪೂರ್ವಾಭ್ಯಾಸವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಸಲಾಯಿತು. ಡಿಸೆಂಬರ್ 4 ಅಂದ್ರೆ ನಾಳೆ ನೌಕಾಪಡೆ ದಿನಾಚರಣೆ ಹಿನ್ನೆಲೆ ಸೇನೆಯಿಂದ ಪೂರ್ವಾಭ್ಯಾಸ ನಡೆಯಿತು.

ನಗದು ರಹಿತ ವಹಿವಾಟಿಗೆ ಉತ್ತೇಜನ:
ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡುವ ಸಲುವಾಗಿ ಎಲ್‌ಐಸಿ ಕ್ರಿಡೆಟ್ ಕಾರ್ಡ್‌ ಮೂಲಕ ಹಣ ಪಾವತಿಸುವುದಕ್ಕೆ ವಿಧಿಸುತ್ತಿದ್ದ ಶುಲ್ಕವನ್ನ ರದ್ದುಪಡಿಸಿದೆ. ಕ್ರೆಡಿಟ್ ಕಾರ್ಡ್ ಮೂಲಕ ಮುಂಗಡ ಕಂತು, ಕಂತು ನವೀಕರಣ, ಸಾಲ ಮರುಪಾವತಿ, ಸಾಲದ ಬಡ್ಡಿಗೆ ವಿಧಿಸುತ್ತಿದ್ದ ಶುಲ್ಕವನ್ನ ಎಲ್‌ಐಸಿ ರದ್ದುಪಡಿಸಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us