ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು, ಮಣಿಪಾಲ್ ಆಸ್ಪತ್ರೆಗೆ ದಾಖಲು

ದೆಹಲಿ: ಕೊರೊನಾ ಮಹಾಮಾರಿ ಯಾರನ್ನೂ ಬಿಡಲ್ಲ ಅನ್ನೋದಕ್ಕೆ ರಾಜ್ಯದ ಸಿಎಂ ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಾಕ್ಷಿ. ಯಾಕಂದ್ರೆ, ಇವರಿಬ್ಬರಿಗೂ ಈಗ ಕೊರೊನಾ ಪಾಸಿಟಿವ್ ಆಗಿದೆ. ಈ ಕುರಿತು ಇಬ್ಬರೂ ನಾಯಕರು ಟ್ವೀಟ್ ಮಾಡಿ ತಮಗೆ ಕೊರೊನಾ ಪಾಸಿಟಿವ್ ಆಗಿದೆ ಅಂತಾ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ರೆ, ಅಮಿತ್ ಶಾ ಏಮ್ಸ್​ಗೆ ದಾಖಲಾಗಿದ್ದಾರೆ. ಕೊರೊನಾ.. ಇದೊಂದು ಡೆಡ್ಲಿ ವೈರಸ್ ವಿಶ್ವದಲ್ಲಿ ಆಡ್ತಿರೋ ಆಟಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. ಕಣ್ಣಿಗೆ ಕಾಣದ […]

ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು, ಮಣಿಪಾಲ್ ಆಸ್ಪತ್ರೆಗೆ ದಾಖಲು
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 03, 2020 | 8:40 AM

ದೆಹಲಿ: ಕೊರೊನಾ ಮಹಾಮಾರಿ ಯಾರನ್ನೂ ಬಿಡಲ್ಲ ಅನ್ನೋದಕ್ಕೆ ರಾಜ್ಯದ ಸಿಎಂ ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಾಕ್ಷಿ. ಯಾಕಂದ್ರೆ, ಇವರಿಬ್ಬರಿಗೂ ಈಗ ಕೊರೊನಾ ಪಾಸಿಟಿವ್ ಆಗಿದೆ. ಈ ಕುರಿತು ಇಬ್ಬರೂ ನಾಯಕರು ಟ್ವೀಟ್ ಮಾಡಿ ತಮಗೆ ಕೊರೊನಾ ಪಾಸಿಟಿವ್ ಆಗಿದೆ ಅಂತಾ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ರೆ, ಅಮಿತ್ ಶಾ ಏಮ್ಸ್​ಗೆ ದಾಖಲಾಗಿದ್ದಾರೆ.

ಕೊರೊನಾ.. ಇದೊಂದು ಡೆಡ್ಲಿ ವೈರಸ್ ವಿಶ್ವದಲ್ಲಿ ಆಡ್ತಿರೋ ಆಟಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. ಕಣ್ಣಿಗೆ ಕಾಣದ ಇದೊಂದು ಸೂಕ್ಷ್ಮಾಣು ಜೀವಿ ಜಗತ್ತನ್ನೇ ನಿಲ್ಲಿಸುವ ಮಟ್ಟಿಗೆ ಅಬ್ಬರಿಸಿದೆ. ಇಂತಾ ಹೆಮ್ಮಾರಿಗೆ ಬಡವ-ಬಲ್ಲಿದ ಅನ್ನೋ ಭೇದಭಾವವಿಲ್ಲ. ಅಧಿಕಾರ ಇದೆಯಾ.. ಇಲ್ವಾ ಅನ್ನೋದು ಮುಖ್ಯವಾಗ್ತಿಲ್ಲ. ಅಷ್ಟರ ಮಟ್ಟಿಗೆ ಸಿಕ್ಕಸಿಕ್ಕವರಿಗೆ ವಕ್ಕರಿಸ್ತಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ಆರಂಭವಾದಾಗಿನಿಂದಲೂ ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪ, ಅದನ್ನ ಸಮರ್ಥವಾಗಿ ಎದುರಿಸಲು ಬೇಕಿರೋ ಕ್ರಮಗಳನ್ನ ಕೈಗೊಂಡಿದ್ರು. ಇಂತಾ ಯಡಿಯೂರಪ್ಪನವರಿಗೇ ಈಗ ಡೆಡ್ಲಿ ವೈರಸ್ ಅಟ್ಯಾಕ್ ಮಾಡಿದೆ.

ಸಿಎಂ ಯಡಿಯೂರಪ್ಪಗೂ ವಕ್ಕರಿಸಿದ ಮಹಾಮಾರಿ ಕೊರೊನಾ! ರಾಜ್ಯದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ವೈರಸ್ ಅಂಟಿಕೊಂಡಿದೆ. ಈ ಕುರಿತು ಸಿಎಂ ತಮ್ಮ ಟ್ವಿಟ್ಟರ್ ಅಕೌಂಟ್​ನಲ್ಲಿ ಬರೆದುಕೊಂಡಿದ್ದಾರೆ. ತಮಗೆ ಕೊರೊನಾ ಪಾಸಿಟಿವ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗ್ತಿರೋದಾಗಿ ಹೇಳಿಕೊಂಡಿದ್ದಾರೆ. ಸಿಎಂ ಯಡಿಯೂರಪ್ಪ ಈಗಾಗಲೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ದೆ, ತಮಗೆ ಕೊರೊನಾ ಗುಣಲಕ್ಷಣಗಳು ಇಲ್ಲ ಅಂತಾ ಹೇಳಿದ್ದಾರೆ. ಜೊತೆಗೆ ತಮ್ಮ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ಆಗಿ ಅಂತಾ ಮನವಿ ಮಾಡಿದ್ದಾರೆ.

ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಆಗಿದೆ ಅಂತಾ ಗೊತ್ತಾದ ತಕ್ಷಣ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್​ ಮಾಡಿ, ಯಡಿಯೂರಪ್ಪ ಶೀಘ್ರ ಚೇತರಿಸಿಕೊಳ್ಳಲಿ ಅಂತಾ ಹಾರೈಸಿದ್ದಾರೆ. ಇದೇ ರೀತಿ ವಿಪಕ್ಷ ನಾಯಕ ಸಿದ್ದರಾಮಯ್ಯನವರೂ ಟ್ವೀಟ್ ಮಾಡಿದ್ದು, ಯಡಿಯೂರಪ್ಪ ಬೇಗ ಚೇತರಿಸಿಕೊಳ್ಳಲಿ. ಬೇಗ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗಿಸಿಕೊಳ್ಳಲಿ ಅಂತಾ ಹಾರೈಸಿದ್ದಾರೆ.

ಇದೇ ರೀತಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೂಡ ಕೊರೊನಾ ವೈರಸ್ ವಕ್ಕರಿಸಿದೆ. ಈ ಕುರಿತು ಅಮಿತ್ ಶಾ ಟ್ವೀಟ್ ಮಾಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗ್ತಿರೋದಾಗಿ ಹೇಳಿದ್ದಾರೆ. ಅಮಿತ್ ಶಾಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಅಮಿತ್ ಶಾಗೆ ಕೊರೊನಾ ಪಾಸಿಟಿವ್ ಆಗಿದೆ ಅಂತಾ ಗೊತ್ತಾದ ಕೂಡಲೇ ಹಲವು ನಾಯಕರು ಅವರು ಗುಣಮುಖರಾಗಲಿ ಅಂತಾ ಹಾರೈಸಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನಜಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಜನಸೇನೆ ಮುಖ್ಯಸ್ಥ ಪವನ್ ಕಲ್ಯಾಣ್ ಸೇರಿ ನಾನಾ ರಾಜಕೀಯ ಪಕ್ಷಗಳ ಮುಖಂಡರು ಅಮಿತ್ ಶಾ ಶೀಘ್ರ ಗುಣಮುಖರಾಗಲಿ ಅಂತಾ ಟ್ವೀಟ್ ಮಾಡಿದ್ದಾರೆ.

ಕೊರೊನಾ ಅನ್ನೋ ಮಹಾಮಾರಿಗೆ ಬಡವರು-ಶ್ರೀಮಂತರು, ಅಧಿಕಾರದಲ್ಲಿರೋರು, ಇಲ್ಲದಿರೋರು ಯಾರು ಅನ್ನೋದು ಲೆಕ್ಕಕ್ಕೇ ಇಲ್ಲ. ಸಿಕ್ಕ ಸಿಕ್ಕವರಿಗೆ ಸಿಕ್ಕ ಸಿಕ್ಕ ರೀತಿ ಅಟ್ಯಾಕ್ ಮಾಡ್ತಿದೆ. ಹೀಗಾಗಿ ಸಿಎಂ ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರ ಕೊರೊನಾದಿಂದ ಮುಕ್ತರಾಗಲಿ ಅಂತಾ ನಾವೂ ಹಾರೈಸೋಣ.

Published On - 6:46 am, Mon, 3 August 20

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್