Ladakh: ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳ ರಚನೆ; ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳನ್ನು ರಚಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಘೋಷಿಸಿದ್ದಾರೆ. ಲಡಾಖ್‌ನ ಜನರಿಗೆ ಹೇರಳವಾದ ಅವಕಾಶಗಳನ್ನು ಸೃಷ್ಟಿಸಲು ಮೋದಿ ಸರ್ಕಾರ ಬದ್ಧವಾಗಿದೆ ಎಂದು ಅಮಿತ್ ಶಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

Ladakh: ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳ ರಚನೆ; ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ
ಅಮಿತ್ ಶಾ
Follow us
ಸುಷ್ಮಾ ಚಕ್ರೆ
|

Updated on:Aug 26, 2024 | 10:06 PM

ಲಡಾಖ್: ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಲಡಾಖ್ ಅನ್ನು ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಗೃಹ ವ್ಯವಹಾರಗಳ ಸಚಿವಾಲಯ (MHA) ಲಡಾಖ್​ನಲ್ಲಿ 5 ಹೊಸ ಜಿಲ್ಲೆಗಳನ್ನು ರಚಿಸಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. “ಹೊಸ ಜಿಲ್ಲೆಗಳಾದ ಝನ್ಸ್ಕಾರ್, ದ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್​ನಲ್ಲಿ ಪ್ರತಿ ಮೂಲೆ ಮತ್ತು ಮೂಲೆಯಲ್ಲಿ ಆಡಳಿತವನ್ನು ಹೆಚ್ಚಿಸುವ ಮೂಲಕ ಜನರಿಗೆ ಮೀಸಲಾದ ಪ್ರಯೋಜನಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುತ್ತದೆ” ಎಂದು ಅಮಿತ್ ಶಾ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧರಿಸಿದೆ. ಲಡಾಖ್ ಪ್ರದೇಶದ ದೃಷ್ಟಿಯಿಂದ ಬಹಳ ದೊಡ್ಡ ಕೇಂದ್ರಾಡಳಿತ ಪ್ರದೇಶವಾಗಿದೆ. ಪ್ರಸ್ತುತ, ಲಡಾಖ್ ಲೇಹ್ ಮತ್ತು ಕಾರ್ಗಿಲ್ ಎಂಬ ಎರಡು ಜಿಲ್ಲೆಗಳನ್ನು ಹೊಂದಿದೆ. ಇದು ಭಾರತದ ಕಡಿಮೆ ಜನಸಂಖ್ಯೆಯ ಪ್ರದೇಶಗಳಲ್ಲಿ ಒಂದಾಗಿದೆ. ಈ ಪ್ರದೇಶಗಳು ಅತ್ಯಂತ ಕಷ್ಟಕರ ಮತ್ತು ದುಸ್ತರವಾಗಿರುವ ಕಾರಣ ಪ್ರಸ್ತುತ ಜಿಲ್ಲಾಡಳಿತ ತಳಮಟ್ಟಕ್ಕೆ ತಲುಪಲು ಹಲವು ತೊಂದರೆಗಳನ್ನು ಎದುರಿಸುತ್ತಿದೆ. ಹೊಸ ಜಿಲ್ಲೆಗಳ ರಚನೆಯ ನಂತರ ಕೇಂದ್ರ ಸರ್ಕಾರ ಮತ್ತು ಲಡಾಖ್ ಆಡಳಿತದ ಎಲ್ಲಾ ಸಾರ್ವಜನಿಕ ಕಲ್ಯಾಣ ಯೋಜನೆಗಳು ಜನರಿಗೆ ಸುಲಭವಾಗಿ ತಲುಪಲು ಸಾಧ್ಯವಾಗುತ್ತದೆ ಮತ್ತು ಹೆಚ್ಚು ಹೆಚ್ಚು ಜನರು ಅವುಗಳ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆ. ಗೃಹ ಸಚಿವಾಲಯದ ಈ ಮಹತ್ವದ ನಿರ್ಧಾರವು ಲಡಾಖ್‌ನ ಸರ್ವತೋಮುಖ ಅಭಿವೃದ್ಧಿಗೆ ತುಂಬಾ ಉಪಯುಕ್ತವಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Unified Pension Scheme: ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಪ್ರಧಾನಿ ಮೋದಿ ಸಂಪುಟ ಅನುಮೋದನೆ

ಹೊಸ ಜಿಲ್ಲೆಗಳ ರಚನೆಯು ಪ್ರತಿಯೊಂದು ಮೂಲೆ ಮೂಲೆಯಲ್ಲೂ ಆಡಳಿತವನ್ನು ಹೆಚ್ಚಿಸುವ ಮೂಲಕ ಜನರಿಗೆ ಸಿಗುವ ಪ್ರಯೋಜನಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುತ್ತದೆ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಅಮಿತ್ ಶಾ ಹೇಳಿದ್ದಾರೆ.

2019ರವರೆಗೆ ಲಡಾಖ್ ಹಿಂದಿನ ಜಮ್ಮು ಮತ್ತು ಕಾಶ್ಮೀರದ ಒಂದು ಭಾಗವಾಗಿತ್ತು. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆ ವರ್ಷ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ಅದಾದ ನಂತರ ಸರ್ಕಾರವು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದೆ. ಅವುಗಳಂದರೆ ಜಮ್ಮು- ಕಾಶ್ಮೀರ ಹಾಗೂ ಲಡಾಖ್.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Mon, 26 August 24

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ