Tirupati Balaji Temple: ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ

ಜಮ್ಮುವಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಿರುಪತಿ ಬಾಲಾಜಿ ದೇವಸ್ಥಾನವನ್ನು ಗೃಹ ಸಚಿವ ಅಮಿತ್ ಶಾ ಇಂದು ಉದ್ಘಾಟಿಸಿದ್ದಾರೆ.

Tirupati Balaji Temple: ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ
ತಿರುಪತಿ ಬಾಲಾಜಿ ದೇವಸ್ಥಾನ

Updated on: Jun 08, 2023 | 11:26 AM

ಜಮ್ಮುವಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಿರುಪತಿ ಬಾಲಾಜಿ ದೇವಸ್ಥಾನವನ್ನು ಗೃಹ ಸಚಿವ ಅಮಿತ್ ಶಾ ಇಂದು ಉದ್ಘಾಟಿಸಿದ್ದಾರೆ. ಜಮ್ಮು ದೇವಾಲಯವು ಆಂಧ್ರಪ್ರದೇಶದ ಹೊರಗೆ ನಿರ್ಮಿಸಲಾದ ಆರನೇ ಬಾಲಾಜಿ ದೇವಾಲಯವಾಗಿದೆ, ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಈ ಹಿಂದೆ ಹೈದರಾಬಾದ್, ಚೆನ್ನೈ, ಕನ್ಯಾಕುಮಾರಿ, ದೆಹಲಿ ಮತ್ತು ಭುವನೇಶ್ವರದಲ್ಲಿ ನಿರ್ಮಿಸಲಾಗಿದೆ.

ಜಮ್ಮುವಿನ ತಿರುಪತಿ ಬಾಲಾಜಿ ದೇವಸ್ಥಾನ ದರ್ಶನಕ್ಕೆ ತೆರೆದುಕೊಳ್ಳುವುದರಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಧಾರ್ಮಿಕ ಮತ್ತು ತೀರ್ಥಯಾತ್ರೆಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಟಿಟಿಡಿ ದೇಶಾದ್ಯಂತ ಬಾಲಾಜಿ ದೇವಾಲಯಗಳನ್ನು ನಿರ್ಮಿಸುತ್ತಿದೆ, ಇದರಿಂದಾಗಿ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗದವರು ಇತರ ನಗರಗಳಲ್ಲಿನ ಈ ದೇವಾಲಯಗಳಿಗೆ ಭೇಟಿ ನೀಡಬಹುದು.

ಜಮ್ಮುವಿನ ತಿರುಪತಿ ಬಾಲಾಜಿ ದೇವಸ್ಥಾನವನ್ನು 62 ಎಕರೆ ಜಾಗದಲ್ಲಿ ನಿರ್ಮಿಸಲಾಗಿದೆ. ದೇವಾಲಯದ ಆವರಣದಲ್ಲಿ ವೇದ ಪಾಠಶಾಲೆ, ಹಾಸ್ಟೆಲ್​, ಕೊಠಡಿಗಳು, ಕಲ್ಯಾಣಮಂಟಪವನ್ನು ನಿರ್ಮಿಸಲಾಗಿದೆ. ಅಷ್ಟೇ ಅಲ್ಲ, ಗರ್ಭಗುಡಿಯಲ್ಲಿ 8 ಅಡಿ ಎತ್ತರದ ವೆಂಕಟೇಶ್ವರನ ವಿಗ್ರಹವನ್ನು ಸಹ ಸ್ಥಾಪಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರ ಈ ಭೂಮಿಯನ್ನು ಟಿಟಿಡಿ ಮಂಡಳಿಗೆ 40 ವರ್ಷಗಳ ಕಾಲ ಭೋಗ್ಯಕ್ಕೆ ನೀಡಿದೆ. ಅದರ ನಂತರ ತಿರುಪತಿ ದೇವಸ್ಥಾನವು ಇಲ್ಲಿ ದೇವಾಲಯ ನಿರ್ಮಾಣ ಕಾರ್ಯವನ್ನು ಆರಂಭಿಸಿತ್ತು. ಈ ದೇವಾಲಯದ ಭೂಮಿ ಪೂಜೆಯನ್ನು 2021ರ ಜೂನ್ 13ರಂದು ಮಾಡಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:15 am, Thu, 8 June 23

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us