ಭಾರತದಿಂದ ಪಾಕಿಸ್ತಾನಿಯರ ವೀಸಾ ರದ್ದು; ಪಾಕ್ ಪ್ರಜೆಗಳನ್ನು ಗುರುತಿಸಲು ಎಲ್ಲಾ ರಾಜ್ಯಗಳ ಸಿಎಂಗಳಿಗೆ ಅಮಿತ್ ಶಾ ಸೂಚನೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ರದ್ದುಗೊಳಿಸಲಾಗಿದೆ. ಹೀಗಾಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಮ್ಮ ರಾಜ್ಯಗಳಲ್ಲಿ ವಾಸಿಸುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸುವಂತೆ ನಿರ್ದೇಶನ ನೀಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಲಾಗಿದೆ. ಭಾರತಕ್ಕೆ ಪಾಕ್ ಪ್ರಜೆಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ಭಾರತದಿಂದ ಪಾಕಿಸ್ತಾನಿಯರ ವೀಸಾ ರದ್ದು; ಪಾಕ್ ಪ್ರಜೆಗಳನ್ನು ಗುರುತಿಸಲು ಎಲ್ಲಾ ರಾಜ್ಯಗಳ ಸಿಎಂಗಳಿಗೆ ಅಮಿತ್ ಶಾ ಸೂಚನೆ
Amit Shah

Updated on: Apr 25, 2025 | 3:18 PM

ನವದೆಹಲಿ, ಏಪ್ರಿಲ್ 25: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terror Attack) ನಂತರ, ಏಪ್ರಿಲ್ 27ರಿಂದ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸುವುದಾಗಿ ಭಾರತ ಘೋಷಿಸಿದೆ. ಅದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದರು. ಮೂಲಗಳ ಪ್ರಕಾರ, ಅಮಿತ್ ಶಾ ಅವರು ಎಲ್ಲ ಮುಖ್ಯಮಂತ್ರಿಗಳಿಗೆ ತಮ್ಮ ರಾಜ್ಯಗಳಲ್ಲಿ ವಾಸಿಸುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರನ್ನು ತಮ್ಮ ದೇಶಕ್ಕೆ ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಲಾಗಿದೆ.

ಭಾರತವು ಏಪ್ರಿಲ್ 27ರಿಂದ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾದ ಕಾರಣ, ಪಾಕಿಸ್ತಾನದಲ್ಲಿ ವಾಸಿಸುವ ಭಾರತೀಯ ಪ್ರಜೆಗಳು ಆದಷ್ಟು ಬೇಗ ಮನೆಗೆ ಮರಳುವಂತೆ ಸಲಹೆ ನೀಡಲಾಗಿದೆ. ವೀಸಾ ರದ್ದತಿಯು ಈಗಾಗಲೇ ಹಿಂದೂ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ದೀರ್ಘಾವಧಿಯ ವೀಸಾಗಳಿಗೆ ಅನ್ವಯಿಸುವುದಿಲ್ಲ. ಅದು “ಮಾನ್ಯವಾಗಿಯೇ ಉಳಿಯಲಿದೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಪಾಕ್​ಗೆ ಭಾರತ ತಿರುಗೇಟು; ಪಾಕಿಸ್ತಾನಿಯರಿಗೆ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು!

ಇದನ್ನೂ ಓದಿ
ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಪಾಕಿಸ್ತಾನ ವಿರುದ್ಧ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಯಿತು. ಪಾಕಿಸ್ತಾನದ ಮಿಲಿಟರಿ ಅಟ್ಯಾಚ್‌ಗಳನ್ನು ಹೊರಹಾಕುವುದು, 1960ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು ಮತ್ತು ಅಟ್ಟಾರಿ ಭೂ-ಸಾರಿಗೆ ಪೋಸ್ಟ್ ಅನ್ನು ತಕ್ಷಣವೇ ಮುಚ್ಚುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಹಲವಾರು ಕ್ರಮಗಳನ್ನು ಘೋಷಿಸಿದೆ. ಏಪ್ರಿಲ್ 27ರಿಂದ ಜಾರಿಗೆ ಬರುವಂತೆ ಭಾರತವು ಪಾಕಿಸ್ತಾನಿ ಪ್ರಜೆಗಳಿಗೆ ನೀಡಿರುವ ಎಲ್ಲಾ ಮಾನ್ಯ ವೀಸಾಗಳನ್ನು ರದ್ದುಗೊಳಿಸಿದೆ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ.

ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ಪಾಕಿಸ್ತಾನದ ವಾಯುಮಾರ್ಗ ಬಂದ್, ಭಾರತದೊಂದಿಗಿನ ವ್ಯಾಪಾರವೂ ಸ್ಥಗಿತ

ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುವ ವೈದ್ಯಕೀಯ ವೀಸಾಗಳು ಏಪ್ರಿಲ್ 29ರವರೆಗೆ ಮಾತ್ರ ಮಾನ್ಯವಾಗಿರುತ್ತವೆ ಎಂದು ಭಾರತ ಹೇಳಿದೆ. ಪ್ರಸ್ತುತ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ತಮ್ಮ ವೀಸಾ ಅವಧಿ ಮುಗಿಯುವ ಮೊದಲು ದೇಶವನ್ನು ತೊರೆಯಬೇಕು ಎಂದು ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ