AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮರನಾಥ ಯಾತ್ರೆ ಭದ್ರತೆ ಪರಿಶೀಲನೆ; ಯಾತ್ರಾರ್ಥಿಗಳಿಗೆ ಹೆಚ್ಚಿನ ರಕ್ಷಣೆ ನೀಡಲು ಅಮಿತ್ ಶಾ ಆದೇಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂಬರುವ ಅಮರನಾಥ ಯಾತ್ರೆಯ ಭದ್ರತಾ ವ್ಯವಸ್ಥೆಯ ಕುರಿತು ನವದೆಹಲಿಯಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಭಾಗವಹಿಸಿದ್ದರು. ಯಾತ್ರಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಭದ್ರತೆಯನ್ನು ಒದಗಿಸುವಂತೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಈ ಪ್ರಮುಖ ಸಭೆಯ ಸಂಪೂರ್ಣ ವಿವರಗಳು ಇಲ್ಲಿವೆ...

ಅಮರನಾಥ ಯಾತ್ರೆ ಭದ್ರತೆ ಪರಿಶೀಲನೆ; ಯಾತ್ರಾರ್ಥಿಗಳಿಗೆ ಹೆಚ್ಚಿನ ರಕ್ಷಣೆ ನೀಡಲು ಅಮಿತ್ ಶಾ ಆದೇಶ
Amit Shah MeetingImage Credit source: PTI
ಸುಷ್ಮಾ ಚಕ್ರೆ
|

Updated on: Jun 12, 2026 | 10:24 PM

Share

ನವದೆಹಲಿ, ಜೂನ್ 12: ಅಮರನಾಥ ಯಾತ್ರೆಯ ಭದ್ರತೆ ಕುರಿತು ಗೃಹ ಸಚಿವ ಅಮಿತ್ ಶಾ (Amit Shah) ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಇದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನಾ ಮುಖ್ಯಸ್ಥರಂತಹ ಅಧಿಕಾರಿಗಳು ಭಾಗವಹಿಸಿದ್ದರು. ಈ ಯಾತ್ರೆಯ ಮಾರ್ಗದಲ್ಲಿ ಬಹು-ಪದರದ ಭದ್ರತಾ ಗ್ರಿಡ್ ಸ್ಥಾಪನೆ, ಡ್ರೋನ್‌ಗಳು ಮತ್ತು ಸಿಸಿಟಿವಿಗಳಂತಹ ಆಧುನಿಕ ತಂತ್ರಜ್ಞಾನಗಳ ವ್ಯಾಪಕ ಬಳಕೆ ಮತ್ತು ಎಲ್ಲಾ ಭದ್ರತಾ ಸಂಸ್ಥೆಗಳ ನಡುವೆ ಸಮನ್ವಯವನ್ನು ಸುಧಾರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಯಾತ್ರಿಕರಿಗೆ ಅತ್ಯಂತ ಭದ್ರತೆ ಮತ್ತು ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಸೂಚನೆಗಳನ್ನು ನೀಡಲಾಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಗೃಹ ಸಚಿವಾಲಯವು ಭದ್ರತಾ ತಂತ್ರಗಳನ್ನು ರೂಪಿಸಿದೆ. ಅಮರನಾಥ ಯಾತ್ರೆಯ ಮಾರ್ಗದಲ್ಲಿ ಕಣ್ಗಾವಲು ಹೆಚ್ಚಿಸಲು ಮತ್ತು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಅಮಿತ್ ಶಾ ಸೂಚಿಸಿದ್ದಾರೆ. ಅವಗಳೆಂದರೆ,

RFID ಟ್ಯಾಗ್‌ಗಳ ಕಡ್ಡಾಯ ಬಳಕೆ:

ಪ್ರತಿಯೊಬ್ಬ ಯಾತ್ರಾರ್ಥಿ ಮತ್ತು ಅವರ ವಾಹನಗಳ ಚಲನವಲನವನ್ನು ನಿಖರವಾಗಿ ಪತ್ತೆಹಚ್ಚಲು ‘ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್’ (RFID) ಟ್ಯಾಗ್‌ಗಳನ್ನು ಬಳಸಲಾಗುತ್ತದೆ. ಇದರಿಂದ ಯಾರಾದರೂ ದಾರಿ ತಪ್ಪಿದರೆ ಅಥವಾ ಸಂಕಷ್ಟಕ್ಕೆ ಸಿಲುಕಿದರೆ ತಕ್ಷಣ ಪತ್ತೆಹಚ್ಚಬಹುದು.

ಇದನ್ನೂ ಓದಿ: ಅಮರನಾಥ ಯಾತ್ರೆಗೆ ಹೋಗಬೇಕಾ? ಏಪ್ರಿಲ್ 15ರಿಂದ ನೋಂದಣಿ ಆರಂಭ

ಡ್ರೋನ್ ಮತ್ತು ಸಿಸಿಟಿವಿ ಕಣ್ಗಾವಲು:

ಯಾತ್ರಾ ಮಾರ್ಗಗಳು, ತಂಗುದಾಣಗಳು ಮತ್ತು ಸೂಕ್ಷ್ಮ ಪ್ರದೇಶಗಳ ಮೇಲೆ ದಿನದ 24 ಗಂಟೆಯೂ ನಿಗಾ ಇಡಲು ಅತ್ಯಾಧುನಿಕ ಡ್ರೋನ್‌ಗಳು ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು.

ಆ್ಯಂಟಿ-ಡ್ರೋನ್ ವ್ಯವಸ್ಥೆ:

ಗಡಿ ನಿಯಂತ್ರಣ ರೇಖೆಯ (LoC) ಸಮೀಪದಿಂದ ಎದುರಾಗಬಹುದಾದ ಡ್ರೋನ್ ದಾಳಿಗಳ ಭೀತಿಯನ್ನು ಎದುರಿಸಲು ಪ್ರಮುಖ ಸ್ಥಳಗಳಲ್ಲಿ ಆ್ಯಂಟಿ-ಡ್ರೋನ್ ತಂತ್ರಜ್ಞಾನವನ್ನು ನಿಯೋಜಿಸಲಾಗುವುದು.

ಇದನ್ನೂ ಓದಿ: ಅಮರನಾಥ ಯಾತ್ರೆ ಮಾರ್ಗವನ್ನು ಹಾರಾಟ ನಿಷೇಧಿತ ವಲಯವೆಂದು ಘೋಷಣೆ

ಇದರ ಜೊತೆಗೆ ಯಾತ್ರಾ ಮಾರ್ಗದಲ್ಲಿ ಆಮ್ಲಜನಕದ ಕೊರತೆಯಾಗದಂತೆ ಅಗತ್ಯ ಸಿಲಿಂಡರ್‌ಗಳು ಹಾಗೂ ವೈದ್ಯಕೀಯ ಶಿಬಿರಗಳನ್ನು ಸ್ಥಾಪಿಸಲಾಗುವುದು. ಹವಾಮಾನ ವೈಪರೀತ್ಯ ಅಥವಾ ಭೂಕುಸಿತ ಸಂಭವಿಸಿದರೆ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಲು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF) ಯನ್ನು ಸನ್ನದ್ಧ ಸ್ಥಿತಿಯಲ್ಲಿಡುವುದು. ಯಾತ್ರಾರ್ಥಿಗಳಿಗೆ ನಿರಂತರ ವಿದ್ಯುತ್, ಕುಡಿಯುವ ನೀರು ಮತ್ತು ಸುಸಜ್ಜಿತ ರಸ್ತೆ ಸಂಪರ್ಕವನ್ನು ಕಲ್ಪಿಸುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಇಂದಿನ ಸಭೆಯಲ್ಲಿ ಸೂಚನೆ ನೀಡಲಾಯಿತು. 2 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ, ಗೃಹ ಸಚಿವ ಅಮಿತ್ ಶಾ ಎಲ್ಲಾ ಭದ್ರತಾ ಸಂಸ್ಥೆಗಳಿಗೆ ಭದ್ರತಾ ಗ್ರಿಡ್ ಅನ್ನು ಬಲಪಡಿಸಲು ಮತ್ತು ಉತ್ತಮ ಸಮನ್ವಯದ ಮೂಲಕ ಬಾಬಾ ಬರ್ಫಾನಿ ಭೇಟಿಗೆ ಪ್ರಯಾಣಿಸುವ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದರು. ಈ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಮರನಾಥ ಯಾತ್ರೆಯಲ್ಲಿ ಯಾತ್ರಾರ್ಥಿಗಳಿಗೆ ಅತ್ಯುನ್ನತ ಭದ್ರತೆ ಮತ್ತು ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್