AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗತ್ಯ ಬಿದ್ದಾಗ ನನ್ನನ್ನು ಸಂಪರ್ಕಿಸಿ: ಜಮ್ಮು ವ್ಯಕ್ತಿಯ ಫೋನ್ ನಂಬರ್​ ಪಡೆದು ತನ್ನ ನಂಬರ್ ಕೊಟ್ಟ ಅಮಿತ್ ಶಾ

ಅಗತ್ಯ ಬಿದ್ದಾಗ ನೇರವಾಗಿ ನನ್ನನ್ನು ಸಂಪರ್ಕಿಸಬಹುದು ಎಂದು ಅಮಿತ್ ಶಾ ಜಮ್ಮುವಿನ ವ್ಯಕ್ತಿಗೆ ಭರವಸೆ ಕೊಟ್ಟರು.

ಅಗತ್ಯ ಬಿದ್ದಾಗ ನನ್ನನ್ನು ಸಂಪರ್ಕಿಸಿ: ಜಮ್ಮು ವ್ಯಕ್ತಿಯ ಫೋನ್ ನಂಬರ್​ ಪಡೆದು ತನ್ನ ನಂಬರ್ ಕೊಟ್ಟ ಅಮಿತ್ ಶಾ
ಜಮ್ಮು ಪ್ರವಾಸದ ವೇಳೆ ಅಮಿತ್ ಶಾ ಸ್ಥಳೀಯ ವ್ಯಕ್ತಿಗೆ ತಮ್ಮ ಫೋನ್ ನಂಬರ್​ ಕೊಟ್ಟರು
TV9 Web
| Edited By: |

Updated on: Oct 28, 2021 | 7:57 PM

Share

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಪ್ರಾಂತ್ಯದ ಮಕ್ವಾನ್ ಗಡಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ಇಂಥದ್ದೊಂದು ಮಾತುಕತೆಯ ವೇಳೆ ಅಮಿತ್ ಶಾ ಒಬ್ಬ ವ್ಯಕ್ತಿಯ ಸಂಪರ್ಕ ಸಂಖ್ಯೆ ಪಡೆದು ತಮ್ಮ ಸಂಖ್ಯೆಯನ್ನೂ ಕೊಟ್ಟರು. ಅಗತ್ಯ ಬಿದ್ದಾಗ ನೇರವಾಗಿ ನನ್ನನ್ನು ಸಂಪರ್ಕಿಸಬಹುದು ಎಂದು ಶಾ ಅವರಿಗೆ ಭರವಸೆ ಕೊಟ್ಟರು.

ವೈರಲ್ ಆಗಿರುವ ಚಿತ್ರದಲ್ಲಿ ಆ ವ್ಯಕ್ತಿಯು ಅಮಿತ್ ಶಾ ಪಕ್ಕದಲ್ಲಿಯೇ ಕುಳಿತಿದ್ದಾರೆ. ಆ ವ್ಯಕ್ತಿಯ ಮೊಬೈಲ್ ಪಡೆದ ಅಮಿತ್ ಶಾ ತಮ್ಮ ಮೊಬೈಲ್ ನಂಬರ್ ಟೈಪ್ ಮಾಡಿಕೊಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಹ ಚಿತ್ರದಲ್ಲಿದ್ದಾರೆ. ಮಕ್ವಾಲ್ ಗಡಿಯ ಭೇಟಿ ವೇಳೆ ಅಮಿತ್ ಶಾ ಕೆಲ ಸೈನಿಕರೊಡನೆ ಸಂವಾದವನ್ನೂ ನಡೆಸಿದರು.

ಜಮ್ಮುವಿನಲ್ಲಿ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಸೈನ್ಸ್​ (ಐಐಟಿ) ಹೊಸ ಕ್ಯಾಂಪಸ್​ ಅನ್ನೂ ಅಮಿತ್ ಶಾ ಉದ್ಘಾಟಿಸಿದರು. ಭಗವತಿ ನಗರದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಅಮಿತ್ ಶಾ ಭಾಗವಹಿಸಿದರು. ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆಯಾಗುವ ಮೊದಲು ರಾಜ್ಯದ ಬಗ್ಗೆ ತಾರತಮ್ಯ ನೀತಿ ಅನುಸರಿಸಲಾಗುತ್ತಿತ್ತು. ಈಗ ಎಲ್ಲ ಪ್ರಾಂತ್ಯಗಳ ಅಭಿವೃದ್ಧಿಗೆ ಸರ್ಕಾರ ಸಮಾನ ರೀತಿಯಲ್ಲಿ ಪ್ರಯತ್ನಿಸುತ್ತಿದೆ ಎಂದರು. ಕೆಲವರು ಅಭಿವೃದ್ಧಿಯ ಓಟವನ್ನು ಹಳಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ಇದಕ್ಕೆ ಅವಕಾಶಕೊಡುವುದಿಲ್ಲ. ಇಲ್ಲಿನ ಅಭಿವೃದ್ಧಿಯ ವೇಗ ತಗ್ಗದಂತೆ ಗಮನ ಕೊಡುತ್ತೇವೆ ಎಂದು ಶಾ ಭರವಸೆ ನೀಡಿದರು.

ಆಗಸ್ಟ್ 5, 2019ನೇ ದಿನಾಂಕವನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು ಎಂದು 370ನೇ ವಿಧಿ ರದ್ದತಿ ನಿರ್ಧಾರವನ್ನು ಅಮಿತ್ ಶಾ ಸಮರ್ಥಿಸಿಕೊಂಡರು. ಈ ಪ್ರಾಂತ್ಯದಲ್ಲಿ ಭಯೋತ್ಪಾದನೆ, ವಂಶಪಾರಂಪರ್ಯದ ಆಡಳಿತ ಮತ್ತು ಭ್ರಷ್ಟಾಚಾರಕ್ಕೆ ಇದರಿಂದ ಕಡಿವಾಣ ಬಿತ್ತು. ಜಮ್ಮು ಕಾಶ್ಮೀರದ ಯುವಕರು ಸಹ ಅಭಿವೃದ್ಧಿ ಪ್ರಯತ್ನಗಳಿಗೆ ಸಹಯೋಗ ನೀಡಬೇಕು. ಇದು ಅವರ ಜವಾಬ್ದಾರಿಯೂ ಆಗಿದೆ ಎಂದರು.

ರಾಜ್ಯದಲ್ಲಿ ಪ್ರಸ್ತುತ ನೆಲೆಸಿರುವ ಶಾಂತಿ ಕಾಪಾಡಲು ಕೇಂದ್ರ ಸರ್ಕಾರವು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಶಾಂತಿ ಮತ್ತು ಅಭಿವೃದ್ಧಿ ಪ್ರಯತ್ನಗಳನ್ನು ಹಾಳು ಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು. ಜಮ್ಮು ಕಾಶ್ಮೀರ ಪ್ರವಾಸದ ವೇಳೆ ಉಗ್ರಗಾಮಿಗಳ ದಾಳಿಯಿಂತ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಮನೆಗಳಿಗೂ ಭೇಟಿ ನೀಡಿ ಸಾಂತ್ವನ ಹೇಳಿದರು.

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್