ಬಿಜೆಪಿಯ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಅಭಿಯಾನ; ನ. 5ರಂದು ಕರ್ನಾಲ್ ಪಾದಯಾತ್ರೆಗೆ ಅಮಿತ್ ಶಾ ನೇತೃತ್ವ

ಕೇಂದ್ರ ಗೃಹ ಸಚಿವ ಅಮಿತ್ ಶಾ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ' ಅಭಿಯಾನದ ಭಾಗವಾಗಿ ನವೆಂಬರ್ 5ರಂದು ಹರಿಯಾಣದ ಕರ್ನಾಲ್‌ಗೆ ಆಗಮಿಸಲಿದ್ದು, ಅಲ್ಲಿ ಆಯೋಜಿಸಲಾಗಿರುವ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದೆಹಲಿಯಲ್ಲಿ ನವೆಂಬರ್ 1ರಂದು ಕಾಂಗ್ರೆಸ್ ಹಮ್ಮಿಕೊಂಡಿರುವ ಬೃಹತ್ ರ‍್ಯಾಲಿಯ ಬೆನ್ನಲ್ಲೇ, ನವೆಂಬರ್ 2ರಂದು ಹೈದರಾಬಾದ್‌ನಲ್ಲಿ ಮತ್ತು ನವೆಂಬರ್ 5ರಂದು ಹರಿಯಾಣದ ಕರ್ನಾಲ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆಗಳನ್ನು ಆಯೋಜಿಸಲಾಗಿದೆ.

ಬಿಜೆಪಿಯ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ ಅಭಿಯಾನ; ನ. 5ರಂದು ಕರ್ನಾಲ್ ಪಾದಯಾತ್ರೆಗೆ ಅಮಿತ್ ಶಾ ನೇತೃತ್ವ
ಅಮಿತ್ ಶಾ
Image Credit source: PTI

Updated on: Oct 26, 2026 | 6:05 PM

ಕರ್ನಾಲ್, ಅಕ್ಟೋಬರ್ 26: ವಿರೋಧ ಪಕ್ಷಗಳ ಆರೋಪಗಳಿಗೆ ಪ್ರತ್ಯುತ್ತರ ನೀಡಲು ಬಿಜೆಪಿ ದೇಶಾದ್ಯಂತ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಎಂಬ ಬೃಹತ್ ಅಭಿಯಾನವನ್ನು ಪೂರ್ಣ ಪ್ರಮಾಣದಲ್ಲಿ ಕೈಗೆತ್ತಿಕೊಂಡಿದೆ. ಈ ಅಭಿಯಾನದ ಭಾಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾವೇ ಖುದ್ದಾಗಿ ಅಖಾಡಕ್ಕಿಳಿಯಲಿದ್ದು, ದೇಶಾದ್ಯಂತ ಪಾದಯಾತ್ರೆಗಳಲ್ಲಿ ಭಾಗವಹಿಸಲಿದ್ದಾರೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲಿ ಆಯೋಜಿಸಲಾಗುವ ಪಾದಯಾತ್ರೆಯಲ್ಲಿ ಕನಿಷ್ಠ 10,000 ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಸಾರ್ವಜನಿಕರು ಹಾಗೂ ಕಾರ್ಯಕರ್ತರನ್ನು ಸಜ್ಜುಗೊಳಿಸಲಾಗುತ್ತಿದೆ.

ಕರ್ನಾಲ್ ಪಾದಯಾತ್ರೆಯಲ್ಲಿ ಅಮಿತ್ ಶಾ:

ನವೆಂಬರ್ 5ರಂದು ಹರಿಯಾಣದ ಕರ್ನಾಲ್‌ನಲ್ಲಿ ನಡೆಯಲಿರುವ ಬೃಹತ್ ಪಾದಯಾತ್ರೆಯಲ್ಲಿ ಗೃಹ ಸಚಿವ ಅಮಿತ್ ಶಾ ಭಾಗವಹಿಸಿ ಅಭಿಯಾನಕ್ಕೆ ನಾಯಕತ್ವ ನೀಡಲಿದ್ದಾರೆ. ಈ ದೇಶವ್ಯಾಪಿ ಅಭಿಯಾನದ ಮೊದಲ ಹಂತವು ನವೆಂಬರ್ 5ರಂದು (ಅಮಿತ್ ಶಾ ಅವರ ಕರ್ನಾಲ್ ಭೇಟಿಯೊಂದಿಗೆ) ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ: ಡಿಸೆಂಬರ್ 2029ರೊಳಗೆ ಭಾರತ ‘ಡ್ರಗ್ಸ್ ಮುಕ್ತ’ ದೇಶ: ಗೃಹ ಸಚಿವ ಅಮಿತ್ ಶಾ ಘೋಷಣೆ

ತಳಮಟ್ಟದಲ್ಲಿ ಸಾರ್ವಜನಿಕ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲು ನವೆಂಬರ್ 11ರಿಂದ ನವೆಂಬರ್ 30ರವರೆಗೆ ಎರಡನೇ ಹಂತದ ಪಾದಯಾತ್ರೆ ಹಾಗೂ ಜಾಗೃತಿ ಕಾರ್ಯಕ್ರಮಗಳು ದೇಶಾದ್ಯಂತ ನಡೆಯಲಿವೆ. ಎಸ್​ಐಆರ್​ ಕುರಿತು ವಿರೋಧ ಪಕ್ಷಗಳು ಹರಡುತ್ತಿರುವ ಅಪಪ್ರಚಾರಕ್ಕೆ ತಿರುಗೇಟು ನೀಡಲು ಹಾಗೂ ನೈಜ ಸತ್ಯಾಂಶಗಳನ್ನು ಸಾರ್ವಜನಿಕರಿಗೆ ತಲುಪಿಸಲು ಬಿಜೆಪಿ ಈ ಬೃಹತ್ ಜಾಗೃತಿ ಅಭಿಯಾನವನ್ನು ಆಯೋಜಿಸಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಅಮಿತ್ ಶಾ ವಿರುದ್ಧದ ಹೇಳಿಕೆ, ಮಾನನಷ್ಟ ಮೊಕದ್ದಮೆ ವಜಾಗೊಳಿಸಿದ ಕೋರ್ಟ್

ನವೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ಅಮಿತ್ ಶಾ ಕರ್ನಾಲ್‌ಗೆ ಆಗಮಿಸಲಿದ್ದು, ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಈ ಪಾದಯಾತ್ರೆಯಲ್ಲಿ ಹರಿಯಾಣದ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕೇಂದ್ರ ಸಚಿವ ಮನೋಹರ್ ಲಾಲ್ ಕಟ್ಟರ್ ಹಾಗೂ ರಾಜ್ಯದ ಹಿರಿಯ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us