AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shadow Killing: ಭೀತಿ ಹುಟ್ಟಿಸುತ್ತಿರುವ ಹತ್ಯೆ, ಕಾಶ್ಮೀರ ತೊರೆಯುತ್ತಿರುವ ಹಿಂದೂಗಳು, ನಾಳೆ ಅಮಿತ್ ಶಾ ಭೇಟಿ

ಕಾಶ್ಮೀರದಿಂದ ಪಂಡಿತ ಸಮುದಾಯಕ್ಕೆ ಸೇರಿದವರು ಜಮ್ಮುವಿನತ್ತ ವಲಸೆ ಹೋಗುತ್ತಿದ್ದಾರೆ.

Shadow Killing: ಭೀತಿ ಹುಟ್ಟಿಸುತ್ತಿರುವ ಹತ್ಯೆ, ಕಾಶ್ಮೀರ ತೊರೆಯುತ್ತಿರುವ ಹಿಂದೂಗಳು, ನಾಳೆ ಅಮಿತ್ ಶಾ ಭೇಟಿ
ಕೇಂದ್ರ ಗೃಹ ಸಚಿವ ಅಮಿತ್ ಶಾ
TV9 Web
| Edited By: |

Updated on:Jun 02, 2022 | 3:30 PM

Share

ದೆಹಲಿ: ಭಯೋತ್ಪಾದಕರು ಹಿಂದೂಗಳನ್ನು ಪ್ರತ್ಯೇಕಿಸಿ, ಬೆನ್ನಟ್ಟಿ ಹತ್ಯೆ ಮಾಡುವ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಶ್ಮೀರದಿಂದ (Jammu Kashmir) ಪಂಡಿತ ಸಮುದಾಯಕ್ಕೆ ಸೇರಿದವರು ಜಮ್ಮುವಿನತ್ತ ವಲಸೆ ಹೋಗುತ್ತಿದ್ದಾರೆ. ಕಳೆದ ಒಂದು ವಾರದಲ್ಲಿಯೇ 100ಕ್ಕೂ ಹೆಚ್ಚು ಕುಟುಂಬಗಳು ಕಾಶ್ಮೀರ ಕಣಿವೆ ತೊರೆದು, ಜಮ್ಮುವಿಗೆ ವಲಸೆ ಬಂದಿವೆ. ಕುಲ್ಗಾಮ್​ನಲ್ಲಿ ಶಿಕ್ಷಕಿ ರಜನಿ ಬಾಲಾ ಹತ್ಯೆಯ ನಂತರ ಪಂಡಿತ ಸಮುದಾಯದಲ್ಲಿ ಭೀತಿ ಆವರಿಸಿದ್ದು, ಭದ್ರತೆ ಹೆಚ್ಚಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.

ಬಾರಾಮುಲ್ಲಾದ ಕಾಶ್ಮೀರಿ ಪಂಡಿತ್ ಕಾಲೊನಿಯಲ್ಲಿ ನೆಲೆಸಿದ್ದ 300 ಹಿಂದೂ ಕುಟುಂಬಗಳ ಪೈಕಿ ಅರ್ಧದಷ್ಟು ಜನರು ಈಗಾಗಲೇ ಕಾಶ್ಮೀರ ತೊರೆದಿದ್ದಾರೆ. ಕಳೆದ 26 ದಿನಗಳಲ್ಲಿ 8 ಮಂದಿಯನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ.

ಗುರಿಯಾಗಿಸಿ ಕೊಲ್ಲುವ ಸಂಚು ವಿಫಲಗೊಳಿಸುವುದು ಮತ್ತು ಕಾಶ್ಮೀರಿ ಪಂಡಿತ ಸಮುದಾಯದಲ್ಲಿ ಧೈರ್ಯ ತುಂಬಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ನಾಳೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್​ ಗವರ್ನರ್​ ಮನೋಜ್ ಸಿನ್ಹಾ ಜೊತೆಗೆ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಜಮ್ಮು-ಕಾಶ್ಮೀರದ ಡಿಜಿಪಿ, ಗೃಹ ಇಲಾಖೆ ಅಧಿಕಾರಿಗಳು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಸಹ ಭಾಗವಹಿಸಲಿದ್ದಾರೆ.

ಬ್ಯಾಂಕ್ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ

ಕುಲ್ಗಾಂ ಜಿಲ್ಲೆಯ ಶಾಲೆಯ ಹೊರಗೆ ಮಹಿಳಾ ಶಿಕ್ಷಕಿಯೊಬ್ಬರನ್ನು ಕೊಲೆ ಮಾಡಿದ ಬೆನ್ನಲ್ಲೇ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಶಂಕಿತ ಉಗ್ರಗಾಮಿಗಳು ರಾಜಸ್ಥಾನದ (Rajasthan) ಬ್ಯಾಂಕ್ ಮ್ಯಾನೇಜರ್ ಅನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆ ದೇಶಾದ್ಯಂತ ಮತ್ತೆ ಸಂಚಲನ ಮೂಡಿಸಿದೆ. ಕುಲ್ಗಾಮ್‌ನ ಅರೆಹ್ ಮೋಹನ್‌ಪೋರಾ ಗ್ರಾಮದಲ್ಲಿ ಎಲ್ಲಕಿ ದೇಹತಿ ಬ್ಯಾಂಕ್‌ನ (ಇಡಿಬಿ) ಹನುಮಾನ್‌ಗಢದ ವಿಜಯ್ ಕುಮಾರ್ ಎಂದು ಗುರುತಿಸಲಾದ ಬ್ಯಾಂಕ್ ಮ್ಯಾನೇಜರ್ ಮೇಲೆ ಉಗ್ರರು ಗುಂಡಿನ (Terrorist Attack) ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಕುಮಾರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Published On - 3:29 pm, Thu, 2 June 22

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ