Amit Shah: ಜಮ್ಮು ಕಾಶ್ಮೀರಕ್ಕೆ ಅಮಿತ್ ಶಾ ಭೇಟಿ; ಇಂದು ಪಹಾರಿ ಸಮುದಾಯದ ಜೊತೆ ಸಂವಾದ

ಅಮಿತ್ ಶಾ ಇಂದು ರಾಜೌರಿಯಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಹಾಗೇ, ಆ ಪ್ರದೇಶದ ಪಹಾರಿ ಸಮುದಾಯದೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.

Amit Shah: ಜಮ್ಮು ಕಾಶ್ಮೀರಕ್ಕೆ ಅಮಿತ್ ಶಾ ಭೇಟಿ; ಇಂದು ಪಹಾರಿ ಸಮುದಾಯದ ಜೊತೆ ಸಂವಾದ
ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ ಗೃಹ ಸಚಿವ ಅಮಿತ್ ಶಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 04, 2022 | 9:43 AM

ಶ್ರೀನಗರ: 2 ದಿನಗಳ ಜಮ್ಮು ಕಾಶ್ಮೀರದ (Jammu Kashmir) ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Home Minister Amit Shah) ಸೋಮವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರ ತಲುಪಿದ್ದಾರೆ. ಅಕ್ಟೋಬರ್ 5ರಂದು ಅವರ ಭೇಟಿ ಕೊನೆಗೊಳ್ಳಲಿದೆ. ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮೀರದ ಅನೇಕ ಸ್ಥಳಗಳಿಗೆ ಭೇಟಿ ನೀಡಲು ಮತ್ತು ಹಲವಾರು ಸಮುದಾಯಗಳೊಂದಿಗೆ ಸಂವಹನ ನಡೆಸಲು ಸಿದ್ಧರಾಗಿದ್ದಾರೆ. ಸೋಮವಾರ ರಾತ್ರಿ ಜಮ್ಮು ಕಾಶ್ಮೀರಕ್ಕೆ ಆಗಮಿಸಿದ ಅಮಿತ್ ಷಾ ಅವರನ್ನು ವಿಮಾನ ನಿಲ್ದಾಣದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೇರಿದಂತೆ ಇತರರು ಬರಮಾಡಿಕೊಂಡರು.

ಗೃಹ ಸಚಿವ ಅಮಿತ್ ಶಾ ತಮ್ಮ ಭೇಟಿಯ ವೇಳೆ ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳನ್ನು ಪ್ರತಿನಿಧಿಸುವ ವಿವಿಧ ನಿಯೋಗಗಳನ್ನು ಭೇಟಿ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶದ ರಾಜಕೀಯ ಬೆಳವಣಿಗೆಗಳು ಮತ್ತು 2023ರಲ್ಲಿ ನಡೆಯಲಿರುವ ಜಮ್ಮು ಮತ್ತು ಕಾಶ್ಮೀರ ಚುನಾವಣೆಗಳ ಬಗ್ಗೆ ಚರ್ಚಿಸಲು ಅಮಿತ್ ಷಾ ಅವರು ತಮ್ಮ ಪ್ರವಾಸದ ಸಮಯದಲ್ಲಿ ಜಮ್ಮು ಕಾಶ್ಮೀರದ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: Breaking News ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರ ದಾಳಿ; ಓರ್ವ ಪೊಲೀಸ್ ಹುತಾತ್ಮ, ಯೋಧನಿಗೆ ಗಾಯ

ಈ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಗೃಹ ಸಚಿವ ಅಮಿತ್ ಶಾ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಹಾಗೇ, ಉನ್ನತ ಮಟ್ಟದ ಪರಿಶೀಲನಾ ಸಭೆ, ಕೇಂದ್ರಾಡಳಿತ ಪ್ರದೇಶದಲ್ಲಿ 2 ಮೆಗಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ.

ಅಮಿತ್ ಶಾ ಇಂದು ರಾಜೌರಿಯಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಹಾಗೇ, ಆ ಪ್ರದೇಶದ ಪಹಾರಿ ಸಮುದಾಯದೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ. ಅವರು ಜಮ್ಮು-ಪೂಂಚ್ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ಜಮ್ಮು-ಅಖ್ನೂರ್ ಮೇಲ್ಸೇತುವೆಯನ್ನು ಇತರ ಯೋಜನೆಗಳೊಂದಿಗೆ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಕತ್ತು ಸೀಳಿ ಹಿರಿಯ ಐಪಿಎಸ್​ ಅಧಿಕಾರಿಯ ಬರ್ಬರ ಹತ್ಯೆ; ಮನೆ ಕೆಲಸದವನು ನಾಪತ್ತೆ

ಅಕ್ಟೋಬರ್ 5ರಂದು ಶ್ರೀನಗರದ ರಾಜಭವನದಲ್ಲಿ ನಡೆಯಲಿರುವ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಅಮಿತ್ ಶಾ ಪರಿಶೀಲಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆಯ ಉನ್ನತ ಅಧಿಕಾರಿಗಳು, ಅರೆಸೇನಾ ಪಡೆಗಳು, ರಾಜ್ಯ ಪೊಲೀಸ್ ಮತ್ತು ನಾಗರಿಕ ಆಡಳಿತ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅಮಿತ್ ಶಾ ಅವರು ಶ್ರೀನಗರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ನಾಳೆ ಬರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ