ದೀದಿ-ಶಾ ಗುದ್ದಾಟ, ಪಶ್ಚಿಮ ಬಂಗಾಳದಲ್ಲಿ ಎರಡನೇ ದಿನ ಅಮಿತ್ ಶಾ ಪ್ರವಾಸ

ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಅಮಿತ್ ಶಾ, ಇಂದು ಬೋಲ್ಪುರ್​ನ ವಿಶ್ವಭಾರತಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಾಳಿ ಜಾನಪದ ಗಾಯಕರೊಬ್ಬರ ಮನೆಯಲ್ಲಿ ಮಧ್ಯಾಹ್ನದ ಭೋಜನ ಸ್ವೀಕರಿಸಲಿದ್ದಾರೆ. ಬಳಿಕ ರೋಡ್​ಶೋ ಮತ್ತು ಮಾಧ್ಯಮಗೋಷ್ಠಿಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

ದೀದಿ-ಶಾ ಗುದ್ದಾಟ, ಪಶ್ಚಿಮ ಬಂಗಾಳದಲ್ಲಿ ಎರಡನೇ ದಿನ ಅಮಿತ್ ಶಾ ಪ್ರವಾಸ
ಅಮಿತ್ ಶಾ
Follow us
TV9 Web
| Updated By: ganapathi bhat

Updated on:Apr 06, 2022 | 11:31 PM

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿದ್ದಾರೆ. ಮೊದಲ ದಿನದ ಕಾರ್ಯಕ್ರಮಗಳನ್ನು ಪೂರೈಸಿರುವ ಅಮಿತ್ ಶಾ, ಇಂದು ಎರಡನೇ ದಿನದ ಪ್ರಚಾರ ನಡೆಸಲಿದ್ದಾರೆ.

ಪಶ್ಚಿಮ ಬಂಗಾಳದ ಬಿರ್​ಭೂಮ್​ಗೆ ಆಗಮಿಸಿರುವ ಅಮಿತ್ ಶಾ, ಬೋಲ್​ಪುರ್​ನ ವಿಶ್ವಭಾರತಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಾಳಿ ಜಾನಪದ ಹಾಡುಗಾರರೊಬ್ಬರ ಮನೆಯಲ್ಲಿ ಮಧ್ಯಾಹ್ನದ ಭೋಜನ ಸ್ವೀಕರಿಸಲಿದ್ದಾರೆ. ಬಳಿಕ, ರೋಡ್​ಶೋ ಮತ್ತು ಮಾಧ್ಯಮಗೋಷ್ಠಿಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಶಾಂತಿನಿಕೇತನದ ರವೀಂದ್ರ ಭವನಕ್ಕೆ ಭೇಟಿ ನೀಡಿರುವ ಶಾ, ರವೀಂದ್ರನಾಥ ಠಾಗೋರರಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.

ನಿನ್ನೆ ನಡೆದ ಬಿಜೆಪಿ ಪ್ರಚಾರದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 12 ಶಾಸಕರು, ಒಬ್ಬರು ಎಂಪಿ ಮತ್ತು ಒಬ್ಬ ಮಾಜಿ ಎಂಪಿ ಬಿಜೆಪಿ ಸೇರಿದ್ದರು. ಟಿಎಂಸಿ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ಕೂಡ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಹತ್ತಕ್ಕೂ ಹೆಚ್ಚು ಶಾಸಕರನ್ನು ಕಳೆದುಕೊಂಡಿರುವ ಟಿಎಂಸಿ ಇದೀಗ ಬಿಜೆಪಿ ನಡೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದೆ.

ಟಿಎಂಸಿ ನಾಯಕಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಟಿಎಂಸಿ ಪಕ್ಷವನ್ನು ತೊರೆಯುವಂತೆ ನಮ್ಮ ನಾಯಕರಿಗೆ ಬಿಜೆಪಿ ಪ್ರೇರೇಪಿಸುತ್ತಿದೆ. ಬಿಜೆಪಿ ಟಿಎಂಸಿಯನ್ನು ಹಾಳುಗೆಡಹುತ್ತಿದೆ ಎಂದು ಆರೋಪಿಸಿದ್ದಾರೆ. ಮಮತಾ ಬ್ಯಾನರ್ಜಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅಮಿತ್ ಶಾ, ದೀದಿ (ಮಮತಾ ಬ್ಯಾನರ್ಜಿ) ಕಾಂಗ್ರೆಸ್ ತೊರೆದಾಗ, ಅದು ಪಕ್ಷದ್ರೋಹದ ಕೆಲಸ ಆಗಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ನಿನ್ನೆ ಪಶ್ಚಿಮ ಮಿಡ್ನಾಪುರದ ಕಾಲೇಜು ಮೈದಾನದಲ್ಲಿ ಮಾತನಾಡಿದ ಅಮಿತ್ ಶಾ, ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರಕ್ಕೇರಲಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ: ಪಶ್ಚಿಮ ಬಂಗಾಳದಲ್ಲಿ ಗುಡುಗಿದ ಅಮಿತ್ ಶಾ

Published On - 12:47 pm, Sun, 20 December 20

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM