AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2029ರೊಳಗೆ ಪಂಜಾಬ್ ‘ಮಾದಕವಸ್ತು ಮುಕ್ತ’ಗೊಳ್ಳಲಿದೆ; ಅಮಿತ್ ಶಾ ಭರವಸೆ

ಪಂಜಾಬ್ ರಾಜಕೀಯದಲ್ಲಿ ಇಂದು ಒಂದು ಪ್ರಮುಖ ರಾಜಕೀಯ ಬೆಳವಣಿಗೆ ನಡೆದಿದೆ. ಸುಮಾರು 6 ವರ್ಷಗಳ ಕಾಲ ಬೇರೆಯಾಗಿದ್ದ ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿ ಮತ್ತೆ ಕೈಜೋಡಿಸಿವೆ. ಎರಡೂ ಪಕ್ಷಗಳು 2027ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿವೆ. 1996ರಲ್ಲಿ ಅಕಾಲಿ ದಳ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದವು. ಇದರ ನಂತರ, ಎರಡೂ ಪಕ್ಷಗಳು 1997, 2007 ಮತ್ತು 2012ರಲ್ಲಿ ಪಂಜಾಬ್‌ನಲ್ಲಿ ಒಟ್ಟಾಗಿ ಸರ್ಕಾರ ರಚಿಸಿದ್ದವು. ಆದರೆ, 2020ರಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳವು ಬಿಜೆಪಿಯೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಂಡಿತು. ಇದರ ನಂತರ, ಎರಡೂ ಪಕ್ಷಗಳು 2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಹೋರಾಡಿದವು. ಈಗ, ಸುಮಾರು 6 ವರ್ಷಗಳ ನಂತರ ಈಗ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

2029ರೊಳಗೆ ಪಂಜಾಬ್ ‘ಮಾದಕವಸ್ತು ಮುಕ್ತ’ಗೊಳ್ಳಲಿದೆ; ಅಮಿತ್ ಶಾ ಭರವಸೆ
ಅಮಿತ್ ಶಾ Image Credit source: PTI
ಸುಷ್ಮಾ ಚಕ್ರೆ
|

Updated on: Nov 24, 2026 | 3:12 PM

Share

ನವದೆಹಲಿ, ನವೆಂಬರ್ 24: 6 ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಇಂದು ಮತ್ತೆ ಒಂದಾಗಿದ್ದು, ಮುಂಬರುವ 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಅಧಿಕೃತವಾಗಿ ಮೈತ್ರಿ ಘೋಷಿಸಿವೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಅಕಾಲಿ ದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಮೈತ್ರಿಯನ್ನು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ 2029ರ ಡಿಸೆಂಬರ್ 31ರ ವೇಳೆಗೆ ರಾಜ್ಯವನ್ನು ಸಂಪೂರ್ಣವಾಗಿ ಮಾದಕವಸ್ತು ಮುಕ್ತ ಹಾಗೂ ಭ್ರಷ್ಟಾಚಾರ ಮುಕ್ತಗೊಳಿಸುವುದಾಗಿ ಭರವಸೆ ನೀಡಿದರು.

ರೈತ ಕಾಯ್ದೆಗಳ ವಿವಾದದ ಹಿನ್ನೆಲೆಯಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ಬಿಜೆಪಿಯೊಂದಿಗಿನ 24 ವರ್ಷಗಳ ಹಳೆಯ ಮೈತ್ರಿಯನ್ನು ಅಕಾಲಿ ದಳ ಕಡಿದುಕೊಂಡಿತ್ತು. ಇದೀಗ ಗುರುಪುರಬ್ ಶುಭ ದಿನದಂದೇ ಅಕಾಲಿ ದಳವು ಇದೀಗ ಮತ್ತೆ ಎನ್‌ಡಿಎ ಮೈತ್ರಿಕೂಟಕ್ಕೆ ಮರಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸುಖ್‌ಬೀರ್ ಬಾದಲ್ ಅವರಿಗೆ ಕರೆ ಮಾಡಿ ಈಗ ಎನ್​ಡಿಎ ಪೂರ್ಣಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಇದನ್ನೂ ಓದಿ: ಲತೀಫ್ ಭಟ್ ಹತ್ಯೆ ಬಳಿಕ ಕಾಶ್ಮೀರ ಸ್ಥಳೀಯ ಭಯೋತ್ಪಾದಕರಿಂದ ಮುಕ್ತ: ಅಮಿತ್ ಶಾ ಹೇಳಿಕೆ

ಪಂಜಾಬ್ ಯುವಜನತೆಯನ್ನು ಕಾಡುತ್ತಿರುವ ಡ್ರಗ್ಸ್ ಪಿಡುಗು ಮತ್ತು ಭ್ರಷ್ಟಾಚಾರವನ್ನು 2029ರ ಅಂತ್ಯದೊಳಗೆ ಬೇರುಸಹಿತ ಕಿತ್ತೊಗೆಯುವುದು ಮೈತ್ರಿಕೂಟದ ಮೊದಲ ಆದ್ಯತೆಯಾಗಿದೆ ಎಂದು ಅಮಿತ್ ಶಾ ಘೋಷಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದರ ಜೊತೆಗೆ, ಭದ್ರತಾ ಕಾರಣಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅನ್ನು ಪರಿಸ್ಥಿತಿ ಸುಧಾರಿಸಿದ ತಕ್ಷಣವೇ ಪುನರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಪಂಜಾಬ್ ಮೈತ್ರಿಯಲ್ಲಿ ಶಿರೋಮಣಿ ಅಕಾಲಿ ದಳವೇ ಹಿರಿಯ ಪಾಲುದಾರ ಪಕ್ಷವಾಗಿರಲಿದ್ದು, ಮೈತ್ರಿಕೂಟ ಬಹುಮತ ಪಡೆದರೆ ಅಕಾಲಿ ದಳದ ನಾಯಕರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದರು. ಒಟ್ಟು 117 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಸುಮಾರು 40 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಓದಿ: 2027ರ ಪಂಜಾಬ್ ವಿಧಾನಸಭಾ ಚುನಾವಣೆ: ಬಿಜೆಪಿ–ಅಕಾಲಿ ದಳ ಮೈತ್ರಿ ಘೋಷಿಸಿದ ಅಮಿತ್ ಶಾ

ಈ ಮೈತ್ರಿಯು ಹಿಂದೂ-ಸಿಖ್ ಭ್ರಾತೃತ್ವದ ಸಂಕೇತವಾಗಿದೆ ಎಂದು ಬಣ್ಣಿಸಿದ ಉಭಯ ನಾಯಕರು, ಪಂಜಾಬ್‌ನ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಆಪ್) ಮತ್ತು ಕಾಂಗ್ರೆಸ್ ವಿರುದ್ಧ ಒಗ್ಗಟ್ಟಾಗಿ ಹೋರಾಡಿ ‘ಡಬಲ್ ಎಂಜಿನ್ ಸರ್ಕಾರ’ ಸ್ಥಾಪಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ