ಟಿಎಂಸಿ ತೊರೆದ ಸುವೇಂದು ಅಧಿಕಾರಿಗೆ Z ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರದ ನಿರ್ಧಾರ

ಕಳೆದ ನವೆಂಬರ್​ನಲ್ಲಿಯೇ ಸಚಿವ ಸ್ಥಾನ ತೊರೆದಿದ್ದ ಸುವೇಂದು ಅಧಿಕಾರಿ, ಎರಡು ದಿನಗಳ ಹಿಂದೆ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಿನ್ನೆ ತಮ್ಮ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ಟಿಎಂಸಿ ತೊರೆದ ಸುವೇಂದು ಅಧಿಕಾರಿಗೆ Z ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರದ ನಿರ್ಧಾರ
ಸುವೇಂದು ಅಧಿಕಾರಿ
Follow us
Lakshmi Hegde
|

Updated on:Dec 18, 2020 | 4:16 PM

ದೆಹಲಿ: ತೃಣಮೂಲ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಲು ಸಿದ್ಧರಾಗಿರುವ ಸುವೇಂದು ಅಧಿಕಾರಿ ಅವರಿಗೆ Z ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಗೃಹ ಇಲಾಖೆ ನಿರ್ಧಾರ ಮಾಡಿದೆ.

ಸುವೇಂದು ಅಧಿಕಾರಿಯವರಿಗೆ ನೀಡಬೇಕಾದ ಭದ್ರತಾ ವ್ಯವಸ್ಥೆ ಬಗ್ಗೆ ಕೇಂದ್ರ ಭದ್ರತಾ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ, ಅವರಿಗೆ ಪಶ್ಚಿಮ ಬಂಗಾಳದಲ್ಲಿ Z ಶ್ರೇಣಿಯ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಇದರ ಅನ್ವಯ ಸುವೇಂದು ಅಧಿಕಾರಿಯವರಿಗೆ ಸಿಆರ್​ಪಿಎಫ್​ ಭದ್ರತೆ ಮತ್ತು ಗುಂಡು ನಿರೋಧಕ ವಾಹನ ನೀಡಲಾಗುವುದು. ಹಾಗೇ, ಸುವೇಂದು ಬೇರೆ ರಾಜ್ಯಗಳಿಗೆ ಹೋದರೆ ಅಲ್ಲಿ ಅವರಿಗೆ Y+ ಶ್ರೇಣಿಯ ಭದ್ರತೆ ನೀಡಲಾಗುವುದು ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಕಳೆದ ನವೆಂಬರ್​ನಲ್ಲಿಯೇ ಸಚಿವ ಸ್ಥಾನ ತೊರೆದಿದ್ದ ಸುವೇಂದು ಅಧಿಕಾರಿ, ಎರಡು ದಿನಗಳ ಹಿಂದೆ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಿನ್ನೆ ತಮ್ಮ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಟಿಎಂಸಿಯಲ್ಲಿ ಇದ್ದು ಜನಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜೀನಾಮೆ ತಿರಸ್ಕಾರ ಆದರೆ ಇತ್ತ ಇನ್ನೊಂದು ಟ್ವಿಸ್ಟ್ ಸಿಕ್ಕಿದ್ದು, ಸುವೇಂದು ರಾಜೀನಾಮೆಯನ್ನು ವಿಧಾನಸಭೆ ಸ್ಪೀಕರ್​ ಬಿಮನ್​ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಬಿಜೆಪಿ ಸೇರಲು ತುದಿಗಾಲಿನಲ್ಲಿ ನಿಂತಿರುವ ಸುವೇಂದು ಇನ್ನು ಮುಂದೆ ಏನು ಮಾಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೆ ಆಘಾತ; ಇನ್ನಿಬ್ಬರು ಪ್ರಭಾವಿ ನಾಯಕರ ರಾಜೀನಾಮೆ

Published On - 3:31 pm, Fri, 18 December 20

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್