AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟ: ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟಗೊಂಡು ನವವಿವಾಹಿತ ಹಾಗೂ ಅವರ ಸಹೋದರ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ.

ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟ: ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ
ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ( ಸಾಂದರ್ಭಿಕ ಚಿತ್ರ)Image Credit source: NDTV
ನಯನಾ ರಾಜೀವ್
|

Updated on: Apr 04, 2023 | 2:32 PM

Share

ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟಗೊಂಡು ನವವಿವಾಹಿತ ಹಾಗೂ ಅವರ ಸಹೋದರ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಮದುವೆಯಲ್ಲಿ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್​ ಸಿಸ್ಟಂ ಸ್ಫೋಟಗೊಂಡಿದೆ.  ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ವ್ಯವಸ್ಥೆಯನ್ನು ಇರಿಸಲಾಗಿದ್ದ ಕೋಣೆಯ ಗೋಡೆಗಳು ಮತ್ತು ಮೇಲ್ಛಾವಣಿ ಕುಸಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶವು ರಾಯ್‌ಪುರದಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಛತ್ತೀಸ್‌ಗಢ-ಮಧ್ಯಪ್ರದೇಶ ಗಡಿಯಲ್ಲಿರುವ ಮಾವೋವಾದಿ ಪೀಡಿತ ಪ್ರದೇಶದಲ್ಲಿ ಬರುತ್ತದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, 22 ವರ್ಷದ ಹೇಮೇಂದ್ರ ಮೆರಾವಿ ಏಪ್ರಿಲ್ 1 ರಂದು ವಿವಾಹವಾಗಿದ್ದರು. ನವ ವಧು-ವರರು ಬೇರೊಂದು ಕೋಣೆಯಲ್ಲಿ ಮದುವೆಯ ಉಡುಗೊರೆಗಳನ್ನು ತೆರೆದು ನೋಡುತ್ತಿದ್ದರು. ತಂತಿಯನ್ನು ಎಲೆಕ್ಟ್ರಿಕ್ ಬೋರ್ಡ್‌ಗೆ ಜೋಡಿಸಿದ ನಂತರ ಮೆರಾವಿ ಹೋಮ್ ಥಿಯೇಟರ್ ಸಿಸ್ಟಮ್ ಅನ್ನು ಆನ್ ಮಾಡಿದಾಗ, ಭಾರಿ ಸ್ಫೋಟ ಸಂಭವಿಸಿದೆ. ಮೇರಾವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕಾಶ್ಮೀರ: ಆತ್ಮಹತ್ಯೆ ತಡೆದ ಪುಟ್ಟ ಮಗಳ ಕತ್ತು ಹಿಸುಕಿ, ಚಾಕುನಿಂದ ಸೀಳಿ ಬರ್ಬರ ಹತ್ಯೆಗೈದ ಅಪ್ಪ

ಅವರ ಸಹೋದರ ರಾಜ್‌ಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ಇತರ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಕೌರಾದದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಚಿಕಿತ್ಸೆ ವೇಳೆ ಮೆರಾವಿ ಅವರ ಸಹೋದರ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ವಿಧಿವಿಜ್ಞಾನ ತಜ್ಞರೊಂದಿಗೆ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. ಕೊಠಡಿಯನ್ನು ಪರಿಶೀಲಿಸಿದಾಗ ಸ್ಫೋಟಕ್ಕೆ ಕಾರಣವಾಗುವ ಯಾವುದೇ ದಹನಕಾರಿ ವಸ್ತು ಪತ್ತೆಯಾಗಿಲ್ಲ ಎಂದು ರೆಂಗಾಖರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ದುರ್ಗೇಶ್ ರಾವ್ಟೆ ತಿಳಿಸಿದ್ದಾರೆ.

ಮ್ಯೂಸಿಕ್ ಸಿಸ್ಟಂ ಮಾತ್ರ ಕೋಣೆಯಲ್ಲಿ ಸ್ಫೋಟಗೊಂಡಿದ್ದು, ಸ್ಫೋಟಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!