ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟಗೊಂಡು ನವವಿವಾಹಿತ ಹಾಗೂ ಅವರ ಸಹೋದರ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಮದುವೆಯಲ್ಲಿ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್ ಸಿಸ್ಟಂ ಸ್ಫೋಟಗೊಂಡಿದೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ವ್ಯವಸ್ಥೆಯನ್ನು ಇರಿಸಲಾಗಿದ್ದ ಕೋಣೆಯ ಗೋಡೆಗಳು ಮತ್ತು ಮೇಲ್ಛಾವಣಿ ಕುಸಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರದೇಶವು ರಾಯ್‌ಪುರದಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಛತ್ತೀಸ್‌ಗಢ-ಮಧ್ಯಪ್ರದೇಶ ಗಡಿಯಲ್ಲಿರುವ ಮಾವೋವಾದಿ ಪೀಡಿತ ಪ್ರದೇಶದಲ್ಲಿ ಬರುತ್ತದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, 22 ವರ್ಷದ ಹೇಮೇಂದ್ರ ಮೆರಾವಿ ಏಪ್ರಿಲ್ 1 ರಂದು ವಿವಾಹವಾಗಿದ್ದರು. ನವ ವಧು-ವರರು ಬೇರೊಂದು ಕೋಣೆಯಲ್ಲಿ ಮದುವೆಯ ಉಡುಗೊರೆಗಳನ್ನು ತೆರೆದು ನೋಡುತ್ತಿದ್ದರು. ತಂತಿಯನ್ನು ಎಲೆಕ್ಟ್ರಿಕ್ ಬೋರ್ಡ್‌ಗೆ ಜೋಡಿಸಿದ ನಂತರ ಮೆರಾವಿ ಹೋಮ್ ಥಿಯೇಟರ್ ಸಿಸ್ಟಮ್ ಅನ್ನು ಆನ್ ಮಾಡಿದಾಗ, ಭಾರಿ ಸ್ಫೋಟ ಸಂಭವಿಸಿದೆ. ಮೇರಾವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.
ಮತ್ತಷ್ಟು ಓದಿ: ಕಾಶ್ಮೀರ: ಆತ್ಮಹತ್ಯೆ ತಡೆದ ಪುಟ್ಟ ಮಗಳ ಕತ್ತು ಹಿಸುಕಿ, ಚಾಕುನಿಂದ ಸೀಳಿ ಬರ್ಬರ ಹತ್ಯೆಗೈದ ಅಪ್ಪ
ಅವರ ಸಹೋದರ ರಾಜ್‌ಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ಇತರ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಕೌರಾದದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಚಿಕಿತ್ಸೆ ವೇಳೆ ಮೆರಾವಿ ಅವರ ಸಹೋದರ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿದ ಕೂಡಲೇ ವಿಧಿವಿಜ್ಞಾನ ತಜ್ಞರೊಂದಿಗೆ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. ಕೊಠಡಿಯನ್ನು ಪರಿಶೀಲಿಸಿದಾಗ ಸ್ಫೋಟಕ್ಕೆ ಕಾರಣವಾಗುವ ಯಾವುದೇ ದಹನಕಾರಿ ವಸ್ತು ಪತ್ತೆಯಾಗಿಲ್ಲ ಎಂದು ರೆಂಗಾಖರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ದುರ್ಗೇಶ್ ರಾವ್ಟೆ ತಿಳಿಸಿದ್ದಾರೆ.
ಮ್ಯೂಸಿಕ್ ಸಿಸ್ಟಂ ಮಾತ್ರ ಕೋಣೆಯಲ್ಲಿ ಸ್ಫೋಟಗೊಂಡಿದ್ದು, ಸ್ಫೋಟಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ