ಹನಿಟ್ರ್ಯಾಪ್​ಗೆ ಬಿದ್ದ ನಾವಿಕ; ಪಾಕಿಸ್ತಾನಕ್ಕೆ ಭಾರತೀಯ ಸೇನಾ ರಹಸ್ಯ ರವಾನಿಸುತ್ತಿದ್ದ ಆಂಧ್ರಪ್ರದೇಶ ಮೂಲದ ರಾಜೇಶ್ ಬಂಧನ!

ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ (PIO) ನೌಕಾಪಡೆಯ ರಹಸ್ಯ ಮಾಹಿತಿಗಳನ್ನು ರವಾನಿಸುತ್ತಿದ್ದ ಭಾರತೀಯ ನೌಕಾಪಡೆಯ ನಾವಿಕನನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಂಧಿಸಲಾಗಿದೆ. ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದ ಆಂಧ್ರಪ್ರದೇಶ ಮೂಲದ ರಾಜೇಶ್ ಎಂಬಾತನಿಂದ ಮೊಬೈಲ್ ಹಾಗೂ ಡಿಜಿಟಲ್ ಉಪಕರಣಗಳನ್ನು ಜಪ್ತಿ ಮಾಡಲಾಗಿದ್ದು, ಕೇಂದ್ರ ಗುಪ್ತಚರ ಸಂಸ್ಥೆಗಳು ಮತ್ತು ತಮಿಳುನಾಡು ಪೊಲೀಸರು ಜಂಟಿ ತನಿಖೆ ನಡೆಸುತ್ತಿದ್ದಾರೆ.

ಹನಿಟ್ರ್ಯಾಪ್​ಗೆ ಬಿದ್ದ ನಾವಿಕ; ಪಾಕಿಸ್ತಾನಕ್ಕೆ ಭಾರತೀಯ ಸೇನಾ ರಹಸ್ಯ ರವಾನಿಸುತ್ತಿದ್ದ ಆಂಧ್ರಪ್ರದೇಶ ಮೂಲದ ರಾಜೇಶ್ ಬಂಧನ!
ಸಾಂದರ್ಭಿಕ ಚಿತ್ರ
Image Credit source: gettyimages.com

Updated on: Oct 04, 2026 | 12:14 PM

ಮುಖ್ಯಾಂಶಗಳು

  • ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಮಾಹಿತಿನೀಡುತ್ತಿದ್ದ ಭಾರತೀಯ ನಾವಿಕ ಕೊಯಮತ್ತೂರಿನಲ್ಲಿ ಬಂಧನ.
  • ಸಾಮಾಜಿಕ ಜಾಲತಾಣದ ಹನಿಟ್ರ್ಯಾಪ್ ಬಲೆಗೆ ಬಿದ್ದು ರಕ್ಷಣಾ ರಹಸ್ಯ ಸೋರಿಕೆ.
  • ಆಂಧ್ರ ಮೂಲದ ರಾಜೇಶ್‌ ಎಂಬಾತನಿಂದ ಮೊಬೈಲ್, ಲ್ಯಾಪ್‌ಟಾಪ್ ವಶಕ್ಕೆ ಪಡೆಯಲಾಗಿದೆ.

ಕೊಯಮತ್ತೂರು, ಅಕ್ಟೋಬರ್ 04: ಭಾರತೀಯ ನೌಕಾಪಡೆಯ ರಕ್ಷಣಾ ಇಲಾಖೆಯ ಅತ್ಯಂತ ಸೂಕ್ಷ್ಮ ಹಾಗೂ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಗೆ (PIO) ಸೋರಿಕೆ ಮಾಡುತ್ತಿದ್ದ ನೌಕಾಪಡೆಯ ನಾವಿಕನೊಬ್ಬನನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಂಧಿಸಲಾಗಿದೆ. ಹನಿಟ್ರ್ಯಾಪ್ ಬಲೆಗೆ ಬಿದ್ದು ಈ ದೇಶದ್ರೋಹಿ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದ ನಾವಿಕ

ಬಂಧಿತ ನಾವಿಕನನ್ನು ಆಂಧ್ರಪ್ರದೇಶ ಮೂಲದ ರಾಜೇಶ್ ಎಂದು ಗುರುತಿಸಲಾಗಿದೆ. ಈತ ನೌಕಾಪಡೆಯಲ್ಲಿ ತಾಂತ್ರಿಕ ಹುದ್ದೆಯಲ್ಲಿದ್ದುಕೊಂಡು ಸೇವಾ ಸಲ್ಲಿಸುತ್ತಿದ್ದ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ಪಾಕಿಸ್ತಾನಿ ಮಹಿಳಾ ಏಜೆಂಟರೊಬ್ಬರ ಜೊತೆ ನಿಕಟ ಸಂಪರ್ಕ ಹೊಂದಿದ್ದ ಈತ, ಆಕೆಯ ಮೋಹಕ ಮಾತುಗಳಿಗೆ ಮರುಳಾಗಿದ್ದ.

ಸಾಮಾಜಿಕ ಜಾಲತಾಣಗಳ ಮೂಲಕ ನೌಕಾಪಡೆಯ ಯುದ್ಧನೌಕೆಗಳ ಚಲನವಲನ, ನೌಕಾನೆಲೆಗಳ ನಕ್ಷೆ ಹಾಗೂ ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ರಹಸ್ಯ ದಾಖಲೆಗಳು ಮತ್ತು ಫೋಟೋಗಳನ್ನು ಆಕೆಗೆ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಪೋಲಿಸ್ ಕಾರ್ಯಾಚರಣೆ ಮತ್ತು ತನಿಖೆ

ಕೇಂದ್ರ ಬೇಹುಗಾರಿಕಾ ಸಂಸ್ಥೆಗಳು ನೀಡಿದ ರಹಸ್ಯ ಮಾಹಿತಿಯ ಆಧಾರದ ಮೇಲೆ ತಮಿಳುನಾಡು ಪೊಲೀಸರು ಹಾಗೂ ನೌಕಾಪಡೆಯ ಗುಪ್ತಚರ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕೊಯಮತ್ತೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನ ಬಳಿಯಿದ್ದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಹಾಗೂ ಡಿಜಿಟಲ್ ಸಾಧನಗಳನ್ನು ಜಪ್ತಿ ಮಾಡಲಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಲಾಗಿದೆ.

ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಆರ್ಥಿಕ ವ್ಯವಹಾರಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ. ರಕ್ಷಣಾ ಪಡೆಗಳ ಸಿಬ್ಬಂದಿ ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಎಚ್ಚರದಿಂದಿರಬೇಕೆಂದು ರಕ್ಷಣಾ ಇಲಾಖೆ ಮತ್ತೊಮ್ಮೆ ಸೂಚನೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us