AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಅಪ್ರಾಪ್ತ ಬಾಲಕಿ

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನರ್ಸಿಂಗ್ ಹೋಂನಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಶೌಚಾಲಯದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಹೊರಗೆ ಎಸೆದಿದ್ದಾಳೆ. ಪರಿಣಾಮ ಮಗು ಮೃತಪಟ್ಟಿದೆ. ಹೊಟ್ಟೆ ನೋವಿನಿಂದ ದಾಖಲಾಗಿದ್ದ ಬಾಲಕಿಯ ಗರ್ಭಧಾರಣೆ ಬಗ್ಗೆ ಕುಟುಂಬಕ್ಕೆ ತಿಳಿದಿರಲಿಲ್ಲ ಎಂದು ವರದಿಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ನರ್ಸಿಂಗ್ ಹೋಂ ಸಿಬ್ಬಂದಿ, ಕುಟುಂಬದವರ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ.

ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಅಪ್ರಾಪ್ತ ಬಾಲಕಿ
ಶಿಶು Image Credit source: Getty Images
ನಯನಾ ರಾಜೀವ್
|

Updated on: Nov 08, 2026 | 10:39 AM

Share

ಹೂಗ್ಲಿ, ನವೆಂಬರ್ 08: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹೊಟ್ಟೆ ನೋವಿನ ಕಾರಣಕ್ಕೆ ನರ್ಸಿಂಗ್ ಹೋಂಗೆ ದಾಖಲಾಗಿದ್ದ 16 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದ ಪರಿಣಾಮ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಹೊಟ್ಟೆ ನೋವೆಂದು ನರ್ಸಿಂಗ್ ಹೋಂಗೆ ಬಂದಿದ್ದ ಬಾಲಕಿ ಶುಕ್ರವಾರ ತಡರಾತ್ರಿ ಬಾಲಕಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಳೆ. ಹೀಗಾಗಿ ಕುಟುಂಬದವರು ಆಕೆಯನ್ನು ಉತ್ತರಪಾರ ಪುರಸಭೆ ವ್ಯಾಪ್ತಿಯ ನರ್ಸಿಂಗ್ ಹೋಂಗೆ ಕರೆತಂದಿದ್ದಾರೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಕುಟುಂಬದವರಿಗೆ ತಿಳಿದಿರಲಿಲ್ಲ ಎಂದು ಆಕೆಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಹೊಟ್ಟೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಬಾಲಕಿ ಶೌಚಾಲಯಕ್ಕೆ ತೆರಳಿದ್ದಾಳೆ. ಅಲ್ಲಿ ಯಾರ ಸಹಾಯವೂ ಇಲ್ಲದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ನವಜಾತ ಶಿಶುವನ್ನು ಶೌಚಾಲಯದ ಕಿಟಕಿಯಿಂದ ಹೊರಗೆ ಎಸೆದಿದ್ದಾಳೆ ಎಂದು ನರ್ಸಿಂಗ್ ಹೋಂ ಆಡಳಿತ ಮಂಡಳಿ ತಿಳಿಸಿದೆ.

ಇದನ್ನೂ ಓದಿ: ಪಾರ್ಕ್​ನಲ್ಲಿ ರುಂಡವಿಲ್ಲದ ನವಜಾತ ಶಿಶುವನ್ನು ಎಳೆದೊಯ್ಯುತ್ತಿತ್ತು ನಾಯಿ

ರಕ್ತದ ಮಡುವಿನಲ್ಲಿ ಬಿದ್ದಿದ್ದ ನವಜಾತ ಶಿಶು ಶೌಚಾಲಯದ ಹೊರಗೆ ನವಜಾತ ಶಿಶು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ದಾರಿಹೋಕರೊಬ್ಬರು ಗಮನಿಸಿದ್ದಾರೆ. ತಕ್ಷಣವೇ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ನರ್ಸಿಂಗ್ ಹೋಂನ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಗುವನ್ನು ಒಳಗೆ ಕರೆತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮಗು ಮೃತಪಟ್ಟಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬದವರಿಗೆ ಗರ್ಭಧಾರಣೆಯ ಬಗ್ಗೆ ತಿಳಿದಿರಲಿಲ್ಲವೇ? ತಮ್ಮ ಮಗಳು ಗರ್ಭಿಣಿಯಾಗಿರುವ ವಿಚಾರ ತಮಗೆ ಗೊತ್ತಿರಲಿಲ್ಲ ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಸಾಮಾನ್ಯ ಆರೋಗ್ಯ ಸಮಸ್ಯೆ ಎಂದು ಭಾವಿಸಿ ನರ್ಸಿಂಗ್ ಹೋಂಗೆ ಕರೆತಂದಿದ್ದಾಗಿ ತಿಳಿಸಿದ್ದಾರೆ. ನರ್ಸಿಂಗ್ ಹೋಂ ಸಿಬ್ಬಂದಿ ಕೂಡ ಬಾಲಕಿಯ ಗರ್ಭಧಾರಣೆಯ ಬಗ್ಗೆ ವಿಚಾರಿಸಿದ್ದರು. ಆದರೆ ಆಕೆ ಈ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಸಂಸ್ಥೆಯ ಮಾಲಕಿ ಸುಚೇತಾ ಮುಖರ್ಜಿ ಹೇಳಿದ್ದಾರೆ.

ಸಿಸಿಟಿವಿ ದೃಶ್ಯ ಪರಿಶೀಲನೆಗೆ ಮುಂದಾದ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನರ್ಸಿಂಗ್ ಹೋಂನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಮುಂದಾಗಿದ್ದಾರೆ. ಬಾಲಕಿ, ಆಕೆಯ ಪೋಷಕರು, ಕುಟುಂಬದವರು ಹಾಗೂ ನರ್ಸಿಂಗ್ ಹೋಂ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ನವಜಾತ ಶಿಶುವಿನ ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆಯೂ ಇದೆ.

ಇದೇ ನರ್ಸಿಂಗ್ ಹೋಂ ಆವರಣದಲ್ಲಿ ಈ ಹಿಂದೆಯೂ ಭ್ರೂಣ ಪತ್ತೆಯಾಗಿತ್ತು ಎಂದು ಸ್ಥಳೀಯರೊಬ್ಬರು ಆರೋಪಿಸಿದ್ದಾರೆ. ಹೀಗಾಗಿ ಹಿಂದಿನ ಘಟನೆಗಳ ಬಗ್ಗೆಯೂ ತನಿಖೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಸುರಕ್ಷತೆಯ ಬಗ್ಗೆಯೂ ಪ್ರಶ್ನೆ ಈ ಘಟನೆ ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಪ್ರಾಪ್ತ ಬಾಲಕಿಯ ಗರ್ಭಧಾರಣೆಯ ಹಿಂದೆ ಏನಾದರೂ ಒತ್ತಡ ಅಥವಾ ದೌರ್ಜನ್ಯ ಇತ್ತೇ? ಕುಟುಂಬದವರಿಗೆ ಈ ವಿಚಾರ ತಿಳಿಯದಿರಲು ಕಾರಣವೇನು? ನರ್ಸಿಂಗ್ ಹೋಂನಲ್ಲಿ ಸೂಕ್ತ ವೈದ್ಯಕೀಯ ನೆರವು ಮತ್ತು ಮೇಲ್ವಿಚಾರಣೆ ಲಭ್ಯವಿತ್ತೇ? ಎಂಬ ಅಂಶಗಳನ್ನು ಪೊಲೀಸರು ಪರಿಶೀಲಿಸಬೇಕಿದೆ.

ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಆಕೆಯ ಗುರುತನ್ನು ಬಹಿರಂಗಪಡಿಸದೆ, ಆಕೆಯ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವುದು ಮುಖ್ಯ. ಮಗುವಿನ ಸಾವಿನ ಜೊತೆಗೆ ಬಾಲಕಿಯ ಪರಿಸ್ಥಿತಿಯ ಬಗ್ಗೆಯೂ ಸೂಕ್ತ ತನಿಖೆ ನಡೆಯಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ