ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣರ ಮತ ಬಿಜೆಪಿಗೆ ಖಂಡಿತ ಬೀಳುವುದಿಲ್ಲ..: ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ

ಬಿಜೆಪಿ ಹಾಗೂ ಕಾಂಗ್ರೆಸ್​ ಪಕ್ಷಗಳು ದಲಿತರನ್ನು ತಮ್ಮ ತೆಕ್ಕೆಗೆ ಎಳೆದುಕೊಳ್ಳಲು ಸದಾ ಪ್ರಯತ್ನಿಸುತ್ತಿರುತ್ತವೆ. ಅದಕ್ಕಾಗಿ ಹಣ, ಜನ ಬಲ ಪ್ರಯೋಗ ಮಾಡುತ್ತವೆ. ಸುಳ್ಳು ಭರವಸೆಗಳನ್ನು ನೀಡುತ್ತಾರೆ ಎಂದೂ ಮಾಯಾವತಿ ಹೇಳಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣರ ಮತ ಬಿಜೆಪಿಗೆ ಖಂಡಿತ ಬೀಳುವುದಿಲ್ಲ..: ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ
ಮಾಯಾವತಿ
Follow us
TV9 Web
| Updated By: Lakshmi Hegde

Updated on: Jul 18, 2021 | 3:27 PM

ಲಖನೌ: ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ(BJP Government) ಜನರ ದಿಕ್ಕುತಪ್ಪಿಸುತ್ತಿದೆ ಎಂದು ಬಹುಜನ ಸಮಾಜ ಪಾರ್ಟಿ (BSP) ಮುಖ್ಯಸ್ಥೆ ಮಾಯಾವತಿ(Mayawati)ಹೇಳಿದರು. ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ( Uttar Pradesh Assembly polls) ಪ್ರಚಾರ ಸಿದ್ಧತೆ ಆರಂಭಿಸಿರುವ ಮಾಯಾವತಿ, ಇದೀಗ ಉತ್ತರ ಪ್ರದೇಶದಲ್ಲಿ ಬ್ರಾಹ್ಮಣ ಸಮುದಾಯವನ್ನು ಓಲೈಸುವ ದಾರಿ ಹಿಡಿದಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಇಂದು ಮಾತನಾಡಿದ ಮಾಯಾವತಿ, ನಮ್ಮ ಪಕ್ಷ ಮುಂದಿನ ವರ್ಷ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಹಿತಾಸಕ್ತಿಗಳನ್ನು ಕಾಪಾಡುತ್ತೇವೆ ಎಂದೂ ಭರವಸೆ ನೀಡಿದರು. ಈ ಮೂಲಕ ಬಿಜೆಪಿಯ ಸಾಂಪ್ರದಾಯಿಕ ಮತದಾರರು ಎಂದೇ ಹೇಳಲಾದ ಬ್ರಾಹ್ಮಣ ಸಮುದಾಯದ ಬಳಿ ಮತಯಾಚನೆ ಮಾಡಿದ್ದಾರೆ.

ಬ್ರಾಹ್ಮಣ ಸಮುದಾಯದವರು ಹೆಚ್ಚಾಗಿರುವ ಅಯೋಧ್ಯೆಯಿಂದ ಮುಂದಿನ ವಾರ ಚುನಾವಣಾ ಪ್ರಚಾರ ಶುರುಮಾಡುವುದಾಗಿ ಹೇಳಿಕೊಂಡಿರುವ ಮಾಯಾವತಿ, ಉತ್ತರ ಪ್ರದೇಶದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣರು ಯಾರೂ ಬಿಜೆಪಿಗೆ ಮತ ಹಾಕುವುದಿಲ್ಲ ಎಂಬ ಭರವಸೆ ನನಗೆ ಖಂಡಿತ ಇದೆ. ನಾವು ಬ್ರಾಹ್ಮಣ ಸಮುದಾಯದವರೊಂದಿಗೆ ಹೆಚ್ಚೆಚ್ಚು ಸಂಪರ್ಕ ಸಾಧಿಸುವ ಸಲುವಾಗಿ ಜು.23ರಂದು ಬಿಎಸ್​ಪಿಯ ಪ್ರಧಾನ ಕಾರ್ಯದರ್ಶಿ ಎಸ್​ಸಿ ಮಿಶ್ರಾ ನೇತೃತ್ವದಲ್ಲಿ ಅಯೋಧ್ಯೆಯಿಂದ ಚುನಾವಣಾ ಪ್ರಚಾರ ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ದಲಿತ ಸಮುದಾಯದ ಮೇಲೆ ಬಿಜೆಪಿ ಹಣ ಬಲ ಸೇರಿ ಹಲವು ರೀತಿಯ ಪ್ರಭಾವ ಬೀರಲು ಪ್ರಯತ್ನಿಸಿತು. ಆದಾಗ್ಯೂ ದಲಿತರು ನಮ್ಮ ಪಕ್ಷಕ್ಕೇ ನಿಷ್ಠರಾಗಿದ್ದಾರೆ. ಹಾಗೇ ಬ್ರಾಹ್ಮಣರೂ ಸಹ ಬಿಜೆಪಿಯ ಯಾವುದೇ ಪ್ರಭಾವಕ್ಕೂ ಒಳಗಾಗದೆ ಬಿಎಸ್​ಪಿಗೆ ಮತ ಹಾಕಿ ಗೆಲ್ಲಿಸಬೇಕು ಎಂದು ಮಾಯಾವತಿ ಹೇಳಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್​ ಪಕ್ಷಗಳು ದಲಿತರನ್ನು ತಮ್ಮ ತೆಕ್ಕೆಗೆ ಎಳೆದುಕೊಳ್ಳಲು ಸದಾ ಪ್ರಯತ್ನಿಸುತ್ತಿರುತ್ತವೆ. ಅದಕ್ಕಾಗಿ ಹಣ, ಜನ ಬಲ ಪ್ರಯೋಗ ಮಾಡುತ್ತವೆ. ಸುಳ್ಳು ಭರವಸೆಗಳನ್ನು ನೀಡುತ್ತಾರೆ. ಅಷ್ಟೇ ಏಕೆ ದಲಿತರ ಮೇಲೆ ಪ್ರಭಾವ ಬೀರಲು ಮಾಧ್ಯಮಗಳನ್ನೂ ಬಳಸಿಕೊಳ್ಳುತ್ತಾರೆ. ಆದರೆ ಆ ಸಮುದಾಯ ನಮ್ಮ ಪಕ್ಷಕ್ಕೇ ಬದ್ಧವಾಗಿದೆ ಎಂದೂ ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ ಬಿಜೆಪಿ ಸದಾ ಜನರನ್ನು ದಿಕ್ಕುತಪ್ಪಿಸುತ್ತಿದೆ. ಆದರೆ ಬ್ರಾಹ್ಮಣ ಸಮುದಾಯದವರು ಬಿಜೆಪಿಗೆ ಈ ಬಾರಿ ಖಂಡಿತ ಮತ ಹಾಕುವುದಿಲ್ಲ. 2007ರಂತೆ ಈ ಸಲವೂ ನಮ್ಮ ಪಕ್ಷವನ್ನೇ ಬೆಂಬಲಿಸುತ್ತಾರೆಂಬ ನಂಬಿಕೆ ನನಗೆ ಇದೆ ಎಂದಿದ್ದಾರೆ.

ಉತ್ತರಪ್ರದೇಶದ ಯೋಗಿ ಆದಿತ್ಯನಾಥ್​ ಸರ್ಕಾರದಲ್ಲಿ ಬ್ರಾಹ್ಮಣ ಸಮುದಾಯ ಮೂಲೆಗುಂಪಾಗಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮಾಯಾವತಿ ಇಂಥದ್ದೊಂದು ಹೇಳಿಕೆ ನೀಡಿದ್ದಾರೆ. ಇವರು 2007ರಲ್ಲಿ ಅಧಿಕಾರಕ್ಕೆ ಬಂದಾಗಿ ಹೆಚ್ಚಾಗಿ ಬಿದ್ದಿದ್ದು ದಲಿತರ ಮತಗಳೇ ಆಗಿದ್ದವು. ಶೇ.11ರಷ್ಟು ಮಾತ್ರ ಬ್ರಾಹ್ಮಣರ ಮತಗಳು ಬಿದ್ದಿದ್ದವು.

ಇದನ್ನೂ ಓದಿ: Bakrid 2021: ಬಕ್ರೀದ್ ಹಬ್ಬದ ಖರೀದಿ; ಹಣೆ ಮೇಲೆ ನಕ್ಷತ್ರ ಹಾಗೂ ಚಂದ್ರನ ಗುರುತಿನ ಮೇಕೆಗಳಿಗೆ ಭರ್ಜರಿ ಬೇಡಿಕೆ

Hopeful that Brahmins will not vote for the BJP in the next Assembly polls Said BSP Chief Mayawati

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ