ಗುಜರಾತ್​​- ರಾಜಸ್ಥಾನ ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು, ಒಬ್ಬನಿಗೆ ಗಂಭೀರ ಗಾಯ

|

Updated on: Nov 04, 2023 | 11:25 AM

ಗುಜರಾತ್​​ ಮತ್ತು ರಾಜಸ್ಥಾನದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರತನ್‌ಪುರ ಚೆಕ್‌ಪೋಸ್ಟ್​​​ನ ವಿಂಚಿವಾಡದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಗುಜರಾತ್​​- ರಾಜಸ್ಥಾನ ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು, ಒಬ್ಬನಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
Follow us on

ಗುಜರಾತ್​​ ಮತ್ತು ರಾಜಸ್ಥಾನ(Gujarat-Rajasthan) ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರತನ್‌ಪುರ ಚೆಕ್‌ಪೋಸ್ಟ್​​​ನ ವಿಂಚಿವಾಡದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಮಧ್ಯರಾತ್ರಿ ರಾಜಸ್ಥಾನದಿಂದ ಗುಜರಾತ್​​ಗೆ ಬರುತ್ತಿದ್ದ ಈ ಅಪಘಾತ ನಡೆದಿದ್ದು, ಕಾರಿನಲ್ಲಿ ಒಟ್ಟು ಐದು ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು, ಯುವಕರನ್ನು ಕಾಪಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ಅಪಘಾತಕ್ಕೆ ಕಾರಣವನ್ನು ಕೂಡ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಯುವಕರು ಗುಜರಾತ್​​ ಮತ್ತು ರಾಜಸ್ಥಾನದ ಹೆದ್ದಾರಿಗೆ ಬರಲು ರಾಂಗ್ ಸೈಡ್​​​ನಲ್ಲಿ ಕಾರು ತಂದಿದ್ದಾರೆ. ಇದೇ ಸಮಯದಲ್ಲಿ ಎದುರಿನಿಂದ ಬರುತ್ತಿದ್ದ ಬಸ್​​ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ನಾಲ್ಕು ಜನ ಕಾರಿನಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬ ಗಾಯಗೊಂಡಿದ್ದಾನೆ.

ಇದನ್ನೂ ಓದಿ:ಯಾದಗಿರಿಯಲ್ಲಿ ಭೀಕರ ಅಪಘಾತ ಐವರು ದುರ್ಮರಣ, ಹಾಸನದಲ್ಲಿ ಬೈಕ್​ಗೆ ಕಾರು ಡಿಕ್ಕಿ ಮೂವರ ಸಾವು

ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಬಂದು ಕಾರಿನ ಒಳಗೆ ಇದ್ದ ಗಾಯಳುಗಳನ್ನು ಹೊರೆಗೆ ತರಲು ಒಂದು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿದ್ದಾರೆ. ಆದರೆ ಇದರಲ್ಲಿ ನಾಲ್ವರು ಯುವಕರು ಕಾರಿನಲ್ಲೇ ಕೊನೆಯುಸಿರು ಎಳೆದಿದ್ದು, ಒಬ್ಬನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಇನ್ನು ಬಸ್​​​​ನ್ನು ವಶಪಡೆದಿದ್ದು, ಬಸ್​​ ಚಾಲಕನ್ನು ಬಂಧಿಸಲಾಗಿದೆ. ಯುವಕರ ಮೃತದೇಹವನ್ನು ಮನೆಯವರಿಗೆ ಒಪ್ಪಿಸಲು ಮನೆಯವರನ್ನು ಸಂಪರ್ಕಿಸಲಾಗಿದೆ, ಮೃತದೇಹವನ್ನು ಈಗಾಗಲೇ ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮೃತ ನಾಲ್ವರನ್ನು ಕೂಡ ಅರಾವಳಿ ಜಿಲ್ಲೆಯವರು ಎಂದು ಹೇಳಲಾಗಿದೆ. ಇವರ ಹೆಸರು ಏನು ಎಂದು ಇನ್ನು ಪತ್ತೆಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ