AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, 5 ಮಂದಿ ಸಜೀವ ದಹನ

ಉತ್ತರ ಪ್ರದೇಶದ ಮುಜಫ್ಫರ್‌ನಗರದಲ್ಲಿ ಹರಿಯಾಣದಿಂದ ಹರಿದ್ವಾರಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಹೊತ್ತಿ ಉರಿದು 5 ಮಂದಿ ಸಜೀವ ದಹನವಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸಾಕಷ್ಟು ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಕಾರಿನೊಳಗೆ ಸಿಲುಕಿದ್ದ ಆರು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ, ಮೃತದೇಹಗಳೆಲ್ಲವೂ ಸಂಪೂರ್ಣ ಸುಟ್ಟು ಕರಕಲಾಗಿದ್ದವು.

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, 5 ಮಂದಿ ಸಜೀವ ದಹನ
ಸುಟ್ಟು ಕರಕಲಾಗಿರುವ ಕಾರು
ಪ್ರಸನ್ನ ಹೆಗಡೆ
|

Updated on:Nov 09, 2026 | 10:38 AM

Share

ಲಕ್ನೋ, ನವೆಂಬರ್​​ 09: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಈ ವೇಳೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ 5 ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಹರಿಯಾಣದಿಂದ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಜಿಲ್ಲೆಯ ತಿತಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಮಾಹಿತಿಯ ಪ್ರಕಾರ, ಕಾರಿನಲ್ಲಿದ್ದ ಎಲ್ಲರೂ ಹರಿಯಾಣದ ಜಿಂದ್ ಜಿಲ್ಲೆಯ ನಿವಾಸಿಗಳು. ಇವರೆಲ್ಲರೂ ಜಿಂದ್‌ನಿಂದ ಹರಿದ್ವಾರದ ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಕ್ಷಣಾರ್ಧದಲ್ಲೇ ಕಾರಿಗೆ ವ್ಯಾಪಿಸಿದ ಬೆಂಕಿ

ಜಗಾಹೇಡಿ ಗ್ರಾಮದ ಸಮೀಪ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ವಾಹನವನ್ನು ಬೆಂಕಿಯ ಜ್ವಾಲೆಗಳು ಆವರಿಸಿವೆ. ಕಾರಿನಲ್ಲಿದ್ದವರಿಗೆ ಹೊರಬರಲು ಯಾವುದೇ ಅವಕಾಶ ಸಿಗಲಿಲ್ಲ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರೂ ಬೆಂಕಿಯ ತೀವ್ರತೆಗೆ ಅಸಹಾಯಕರಾಗಿದ್ದರು. ಹೀಗಾಗಿ ಯಾರ ಜೀವವನ್ನೂ ಉಳಿಸಲು ಸಾಧ್ಯವಾಗಿಲ್ಲ. ಮಾಹಿತಿ ತಿಳಿದ ತಕ್ಷಣ ತಿತಾವಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಇದನ್ನೂ ಓದಿ: ಅಂಗಾಂಗಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲು 4 ವರ್ಷದ ಬಾಲಕನ ಹತ್ಯೆ: ಆರೋಪಿಯ ಬಂಧನ

ಅಗ್ನಿಶಾಮಕ ಸಿಬ್ಬಂದಿ ಸಾಕಷ್ಟು ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಕಾರಿನೊಳಗೆ ಸಿಲುಕಿದ್ದ ಆರು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ, ಮೃತದೇಹಗಳೆಲ್ಲವೂ ಸಂಪೂರ್ಣ ಸುಟ್ಟು ಕರಕಲಾಗಿದ್ದವು. ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಮಹಾಡಿಕ್ ಹಾಗೂ ಫುಗಾನಾ ವಿಭಾಗದ ಪೊಲೀಸ್ ಉಪ ಅಧೀಕ್ಷಕರೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:38 am, Mon, 9 November 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್