AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ಕೇವಲ 20 ರೂಪಾಯಿಗಾಗಿ ಹೆತ್ತ ತಾಯಿಯನ್ನೇ ಕಡಿದು ಹತ್ಯೆಗೈದ ಮಗ

ಬಿಡಿಗಾಸಿಗಾಗಿ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ರಕ್ತ ಸಿಕ್ತ ಸ್ಥಿತಿಯಲ್ಲಿದ್ದ ತಾಯಿ ಜತೆಯೇ ಒಂದೇ ಮನೆಯಲ್ಲಿ ಆತ ಇಡೀ ರಾತ್ರಿ ಕಳೆದಿದ್ದಾನೆ. ಶನಿವಾರ ರಾತ್ರಿ ಜೆಮ್ಶೆಡ್ ಎಂಬಾತ ತಾಯಿ ರಜಿಯಾ ಬಳಿ 20 ರೂ. ಕೊಡುವಂತೆ ಕೇಳಿದ್ದ. ಆದರೆ ಅವರು ನಿರಾಕರಿಸಿದ್ದರು. ಅದಕ್ಕೆ ಕೋಪಗೊಂಡ ಮಗ ತಾಯಿಯನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಿದ್ದಾನೆ.

Haryana: ಕೇವಲ 20 ರೂಪಾಯಿಗಾಗಿ ಹೆತ್ತ ತಾಯಿಯನ್ನೇ ಕಡಿದು ಹತ್ಯೆಗೈದ ಮಗ
ಕ್ರೈಂ
ನಯನಾ ರಾಜೀವ್
|

Updated on: Jul 21, 2025 | 9:03 AM

Share

ನೂಹ್, ಜುಲೈ 21: ಹಣ ಕೊಡಲಿಲ್ಲ ಎನ್ನವು ಕೋಪದಲ್ಲಿ ಮಗನೊಬ್ಬ ಹೆತ್ತ ತಾಯಿಯನ್ನೇ ಕಡಿದು ಕೊಲೆ(Murder) ಮಾಡಿರುವ ಘಟನೆ ಹರ್ಯಾಣದ ನೂಹ್​ನಲ್ಲಿ ನಡೆದಿದೆ. ಕೇವಲ 20 ರೂಪಾಯಿಗಾಗಿ 56 ವರ್ಷದ ತಾಯಿಯನ್ನು ಮಗ ಹತ್ಯೆ ಮಾಡಿದ್ದಾನೆ. ಜೈಸಿಂಗ್‌ಪುರ ಗ್ರಾಮದಲ್ಲಿ ಶನಿವಾರ ಈ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಗ ಮಾದಕ ವ್ಯಸನಿಯಾಗಿದ್ದು, ಬಹಳ ದಿನಗಳಿಂದ ಗಾಂಜಾ ಮತ್ತು ಅಫೀಮು ಸೇವಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ಕೊಲೆ ಮಾಡಿದ ಬಳಿಕ ರಕ್ತ ಸಿಕ್ತ ಸ್ಥಿತಿಯಲ್ಲಿದ್ದ ತಾಯಿ ಜತೆಯೇ ಒಂದೇ ಮನೆಯಲ್ಲಿ ಆತ ಇಡೀ ರಾತ್ರಿ ಕಳೆದಿದ್ದಾನೆ. ಶನಿವಾರ ರಾತ್ರಿ ಜೆಮ್ಶೆಡ್ ಎಂಬಾತ ತಾಯಿ ರಜಿಯಾ ಬಳಿ 20 ರೂ. ಕೊಡುವಂತೆ ಕೇಳಿದ್ದ. ಆದರೆ ಅವರು ನಿರಾಕರಿಸಿದ್ದರು. ಅದಕ್ಕೆ ಕೋಪಗೊಂಡ ಮಗ ತಾಯಿಯನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಿದ್ದಾನೆ.

ಎಫ್​ಐಆರ್ ದಾಖಲಿಸಲಾಗಿದೆ, ಮರಣೋತ್ತರ ಪರೀಕ್ಷೆಯ ನಂತರ ರಾಜಿಯಾ ಅವರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ರಾಜಿಯಾ ಅವರ ಪತಿ ಮುಬಾರಕ್ ಕೇವಲ ನಾಲ್ಕು ತಿಂಗಳ ಹಿಂದೆ ನಿಧನರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ತಮಿಳುನಾಡು: ಪೊಲೀಸ್​ ಠಾಣೆ ಬಳಿ ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿಯ ಬರ್ಬರ ಹತ್ಯೆ

ಮತ್ತೊಂದು ಘಟನೆ ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್​ಕೇಸ್​ನಲ್ಲಿ ಶವ ಪತ್ತೆ ತಾಯಿಯ ಪ್ರಿಯಕರನೇ 10 ವರ್ಷದ ಬಾಲಕನನ್ನು ಕೊಲೆ(Murder) ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಬಾಲಕನನ್ನು ಪೊದೆಯ ಬಳಿಕ ಕೊಂದು ಸೂಟ್​ಕೇಸ್​ನಲ್ಲಿ ಮುಚ್ಚಿಟ್ಟಿದ್ದ ಎನ್ನಲಾಗಿದೆ. ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು.

ತನಿಖೆಯ ಸಮಯದಲ್ಲಿ, ಪತಿಯಿಂದ ಬೇರ್ಪಟ್ಟ ಮಹಿಳೆ ಜಿತುಮೋನಿ ಹಲೋಯ್ ಎಂಬ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಪೊಲೀಸರಿಗೆ ತಿಳಿದುಬಂದಿದೆ. ಪೊಲೀಸರು ಆತನನ್ನು ವಿಚಾರಿಸಿ ಸೂಟ್‌ಕೇಸ್ ಇರುವ ಸ್ಥಳಕ್ಕೆ ಕರೆದೊಯ್ದಾಗ ಆತ ಅಪರಾಧ ಒಪ್ಪಿಕೊಂಡಿದ್ದಾನೆ.

ನಂತರ ನಗರದ ಹೊರವಲಯದಲ್ಲಿರುವ ಪೊದೆಯೊಂದರಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆಯನ್ನು ಸಹ ವಶಕ್ಕೆ ಪಡೆಯಲಾಗಿದ್ದು, ಕೊಲೆಯಲ್ಲಿ ಆಕೆಯ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಹಿಳೆಯಿಂದ ಬೇರ್ಪಟ್ಟಿರುವ ಮಗುವಿನ ತಂದೆ ಕೂಡ ಪೊಲೀಸರಲ್ಲಿ ಹೇಳಿಕೆ ದಾಖಲಿಸಿದ್ದಾರೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!