AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಬಸ್–ಟ್ರಕ್ ಡಿಕ್ಕಿ ವೇಳೆ ಬೆಂಕಿ ಹೊತ್ತಿಕೊಂಡು 8 ಮಂದಿ ಸಾವು, 22ಕ್ಕೂ ಹೆಚ್ಚು ಮಂದಿಗೆ ಗಾಯ

Bus-Truck Accident: ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದುರಂತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 22ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಸ್ ಚಾಲಕ ನಿದ್ರೆಗೆ ಜಾರಿರುವ ಸಾಧ್ಯತೆ ಹಾಗೂ ಅತಿವೇಗವೂ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಬಸ್–ಟ್ರಕ್ ಡಿಕ್ಕಿ ವೇಳೆ ಬೆಂಕಿ ಹೊತ್ತಿಕೊಂಡು 8 ಮಂದಿ ಸಾವು, 22ಕ್ಕೂ ಹೆಚ್ಚು ಮಂದಿಗೆ ಗಾಯ
ಸಾಂದರ್ಭಿಕ ಚಿತ್ರImage Credit source: tvnz.co.nz
ಪ್ರಸನ್ನ ಹೆಗಡೆ
|

Updated on:Jul 01, 2026 | 11:26 AM

Share

ಮುಖ್ಯಾಂಶಗಳು

  • ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ
  • ಟ್ರಕ್​​ಗೆ ಬಸ್​​ ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ, 8 ಜನ ಸಾವು
  • ಅಪಘಾತದಲ್ಲಿ 22ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ

ಜೈಪುರ, ಜುಲೈ 01: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಋಷಿಕೇಶ್‌ನಿಂದ ಮಧ್ಯಪ್ರದೇಶದ ಇಂದೋರ್‌ಗೆ ತೆರಳುತ್ತಿದ್ದ ಬಸ್ ಬೆಳಗ್ಗಿನ ಜಾವ ಸುಮಾರು 3.30ರ ವೇಳೆಗೆ ಟ್ರಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು ಎರಡೂ ವಾಹನಗಳು ಸುಟ್ಟು ಕರಕಲಾಗಿವೆ. ಅವಘಡದಲ್ಲಿ 8 ಮಂದಿ ಮೃತಪಟ್ಟಿದ್ದು, 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಮಾಹಿತಿ ಇದೆ.

ಅಧಿಕಾರಿಗಳ ಪ್ರಕಾರ, ಮೇಲಿನ ಸೀಟ್​​ಗಳಲ್ಲಿ ಮಲಗಿದ್ದ ಕೆಲವರು ಕೆಳಗೆ ಬಿದ್ದಿದ್ದಾರೆ. ಸುಟ್ಟ ಗಾಯಗಳಿಂದ ಐವರು ಹಾಗೂ ತಲೆಗೆ ಗಂಭೀರ ಗಾಯಗಳಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಪೈಕಿ ಹೆಚ್ಚಿನವರು ಅಪಘಾತ ಸಂಭವಿಸಿದ ವೇಳೆ ನಿದ್ರೆಯಲ್ಲಿದ್ದವರು ಎಂಬುದು ಗೊತ್ತಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಮುಂಬೈನಲ್ಲಿ ಭೀಕರ ದುರಂತ; ಶಾಲಾ ಬಸ್ ಮೇಲೆ ದೊಡ್ಡ ಮರ ಬಿದ್ದು 11 ವರ್ಷದ ವಿದ್ಯಾರ್ಥಿ ಸಾವು

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಸ್ ಚಾಲಕ ನಿದ್ರೆಗೆ ಜಾರಿರುವ ಸಾಧ್ಯತೆ ಹಾಗೂ ಅತಿವೇಗವೂ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ಸುಮಾರು ಒಂದು ಗಂಟೆಯ ಬಳಿಕ ಬಸ್‌ನಲ್ಲಿ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾದ ಕಾರಣವೇ ಸಾವು ನೋವುಗಳ ಸಮಖ್ಯೆ ಹೆಚ್ಚಾಗಿದೆ ಎನ್ನಲಾಗಿದೆ.

ಅಶೋಕ್​​ ಗೆಹ್ಲೋಟ್​​ ಸಂತಾಪ

ಇನ್ನು ಅಪಘಾತದಲ್ಲಿ ಮೃತಪಟ್ಟವರಿಗೆ ರಾಜಸ್ಥಾನ ಮಾಜಿ ಸಿಎಂ ಅಶೋಕ್​​ ಗೆಹ್ಲೋಟ್​​ ಸಂತಾಪ ಸೂಚಿಸಿದ್ದಾರೆ. ದೌಸಾ ಜಿಲ್ಲೆಯ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಮೃತಪಟ್ಟಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ. ಈ ದುರಂತದಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳನ್ನು ಸಲ್ಲಿಸುತ್ತೇನೆ. ಈ ಕಠಿಣ ಸಮಯವನ್ನು ಎದುರಿಸುವ ಶಕ್ತಿಯನ್ನು ಭಗವಂತ ಅವರು ಅವರಿಗೆ ನೀಡಲಿ ಹಾಗೂ ಅಗಲಿದ ಆತ್ಮಗಳಿಗೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸೋದಾಗಿ ಅವರು ಎಕ್ಸ್​​ ಪೋಸ್ಟ್​​ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:23 am, Wed, 1 July 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ರಾಮನಗರದಲ್ಲಿ ಕುಡಿಯುವ ನೀರಿನ ಬಿಲ್ ಶಾಕ್
ರಾಮನಗರದಲ್ಲಿ ಕುಡಿಯುವ ನೀರಿನ ಬಿಲ್ ಶಾಕ್
ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ವಿನೋದ್ ರಾಜ್ ಬೆಂಬಲ; ದಿನಸಿ ವಿತರಣೆ
ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ವಿನೋದ್ ರಾಜ್ ಬೆಂಬಲ; ದಿನಸಿ ವಿತರಣೆ
ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರಿಗೆ ನಟ ಅವಿನಾಶ್ ಬೆಂಬಲ
ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರಿಗೆ ನಟ ಅವಿನಾಶ್ ಬೆಂಬಲ
ಮತ್ತಿಬ್ಬರು ಆಶಾ ಕಾರ್ಯಕರ್ತೆಯರು ಆಸ್ಪತ್ರೆಗೆ:ಈವರೆಗೆ 20 ಮಂದಿ ಅಸ್ವಸ್ಥ
ಮತ್ತಿಬ್ಬರು ಆಶಾ ಕಾರ್ಯಕರ್ತೆಯರು ಆಸ್ಪತ್ರೆಗೆ:ಈವರೆಗೆ 20 ಮಂದಿ ಅಸ್ವಸ್ಥ
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ