ತಾಯಿಯ ಎದುರೇ ಐದು ವರ್ಷದ ಬಾಲಕನ ಶಿರಚ್ಛೇದ, ಆರೋಪಿಯನ್ನು ಥಳಿಸಿ ಕೊಂದ ಸ್ಥಳೀಯರು
ತಾಯಿಯ ಎದುರೇ ಐದು ವರ್ಷದ ಬಾಲಕನ ಶಿರಚ್ಛೇದ ಮಾಡಿರುವ ಘಟನೆ ಮಧ್ಯಪ್ರದೇಶದ ಧಾರ್ನಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ಬಾಲಕನ ತಲೆ ಕಡಿದಿದ್ದಾನೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಶುಕ್ರವಾರ ಈ ಘಟನೆ ನಡೆದಿದ್ದು, ಐದು ವರ್ಷದ ವಿಕಾಸ್ ತನ್ನ ತಾಯಿಯೊಂದಿಗೆ ಮನೆಯಲ್ಲಿದ್ದ. ಮಹೇಶ್ ಎಂಬ ಆರೋಪಿ ದ್ವಿಚಕ್ರ ವಾಹನದಲ್ಲಿ ಬಂದು ವಿಕಾಸ್ನ ಮನೆಗೆ ನುಗ್ಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಧಾರ್, ಸೆಪ್ಟೆಂಬರ್ 27: ತಾಯಿಯ ಎದುರೇ ಐದು ವರ್ಷದ ಬಾಲಕನ ಶಿರಚ್ಛೇದ ಮಾಡಿರುವ ಘಟನೆ ಮಧ್ಯಪ್ರದೇಶದ ಧಾರ್ನಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ಬಾಲಕನ ತಲೆ ಕಡಿದು ಹತ್ಯೆ(Murder) ಮಾಡಿದ್ದಾನೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಶುಕ್ರವಾರ ಈ ಘಟನೆ ನಡೆದಿದ್ದು, ಐದು ವರ್ಷದ ವಿಕಾಸ್ ತನ್ನ ತಾಯಿಯೊಂದಿಗೆ ಮನೆಯಲ್ಲಿದ್ದ. ಮಹೇಶ್ ಎಂಬ ಆರೋಪಿ ದ್ವಿಚಕ್ರ ವಾಹನದಲ್ಲಿ ಬಂದು ವಿಕಾಸ್ನ ಮನೆಗೆ ನುಗ್ಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮನೆಯಲ್ಲಿ ಬಿದ್ದಿದ್ದ ಹರಿತವಾದ ಕೊಡಲಿಯಿಂದ ವಿಕಾಸ್ ಮೇಲೆ ಹಲ್ಲೆ ನಡೆಸಿ, ಬಾಲಕನ ತಲೆಯನ್ನು ಕತ್ತರಿಸಿ ಹಾಕಿದ್ದಾನೆ. ನಂತರ ದಾಳಿಕೋರ ಬಾಲಕನ ಭುಜಕ್ಕೆ ಹೊಡೆದಿದ್ದರಿಂದ ಬಾಲಕನ ದೇಹವು ಛಿದ್ರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆರೋಪಿಯನ್ನು ಕುಟುಂಬವು ಹಿಂದೆಂದೂ ನೋಡಿರಲಿಲ್ಲ, ಮತ್ತು ಆತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಈ ಘಟನೆ ನೋಡಿ ಬಾಲಕನ ತಾಯಿ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಸ್ಥಳೀಯರು ಆತನನ್ನು ಹಿಡಿದಿದ್ದಾರೆ ಮತ್ತು ಪೊಲೀಸರು ಬರುವ ಮೊದಲೇ ಆತನ ಮೇಲೆ ಹಲ್ಲೆ ನಡೆಸಲಾಯಿತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆತ ಸಾವನ್ನಪ್ಪಿದ್ದಾನೆ.
ಮತ್ತಷ್ಟು ಓದಿ: ಅಪ್ಪನ ಜೇಬಿನಿಂದ ಹಣ ಕದ್ದಿದ್ದಕ್ಕೆ ಇಷ್ಟು ದೊಡ್ಡ ಶಿಕ್ಷೆಯೇ? ಅಪ್ರಾಪ್ತ ಮಗಳನ್ನು ಕೊಂದ ತಂದೆ
ಮರಣೋತ್ತರ ಪರೀಕ್ಷೆಯ ನಂತರ ಅವರ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ತನಿಖೆಯಿಂದ ಮಹೇಶ್ ಅಲಿರಾಜ್‌ಪುರ ಜಿಲ್ಲೆಯ ಜೋಬತ್ ಬಾಗ್ಡಿ ನಿವಾಸಿ ಎಂದು ತಿಳಿದುಬಂದಿದೆ . ವರದಿಯ ಪ್ರಕಾರ, ಆತ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಮತ್ತು ಕಳೆದ ಮೂರ್ನಾಲ್ಕು ದಿನಗಳಿಂದ ಮನೆಯಿಂದ ಕಾಣೆಯಾಗಿದ್ದ ಎಂದು ಅವರ ಕುಟುಂಬ ಪೊಲೀಸರಿಗೆ ತಿಳಿಸಿದೆ.
ಈ ಭೀಕರ ಹತ್ಯೆಗೆ ಕೇವಲ ಒಂದು ಗಂಟೆ ಮೊದಲು, ಅವನು ಹತ್ತಿರದ ಅಂಗಡಿಯಲ್ಲಿ ವಸ್ತುಗಳನ್ನು ಕದಿಯಲು ಪ್ರಯತ್ನಿಸಿದ್ದನು ಎಂದು ಆರೋಪಿಸಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಉತ್ತರ ಪ್ರದೇಶದ ಗೋರಖ್ಪುರದ ಸ್ಥಳೀಯರಿಗೆ ಹೊಲದ ಬಳಿ ರುಂಡವಿಲ್ಲದ ಮಹಿಳೆಯ ಶವ ಪತ್ತೆಯಾಗಿತ್ತು. ಮೃತರನ್ನು 60 ವರ್ಷದ ಕಲಾವತಿ ಯಾದವ್ ಎಂದು ಗುರುತಿಸಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




