AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ರಸ್ತೆಯಲ್ಲಿ ಕುದುರೆ ಗಾಡಿ ಓಟ, 10 ಮಂದಿ ಬಂಧನ, 4 ಕುದುರೆಗಳನ್ನು ವಶಕ್ಕೆ ಪಡೆದ ಪೊಲೀಸರು

ರಾಷ್ಟ್ರ ರಾಜಧಾನಿ ದೆಹಲಿಯ ರಸ್ತೆಯೊಂದರಲ್ಲಿ ಕುದುರೆ ಗಾಡಿ ಓಟ ನಡೆಸುತ್ತಿದ್ದ 10 ಮಂದಿಯನ್ನು ಪೊಲೀಸರು ಬಂಧಿಸಿ, 4 ಕುದುರೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ 2 ದ್ವಿಚಕ್ರ ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ದೆಹಲಿಯ ರಸ್ತೆಯಲ್ಲಿ ಕುದುರೆ ಗಾಡಿ ಓಟ, 10 ಮಂದಿ ಬಂಧನ, 4 ಕುದುರೆಗಳನ್ನು ವಶಕ್ಕೆ ಪಡೆದ ಪೊಲೀಸರು
ಕುದುರೆ ಗಾಡಿ ಓಟ
ನಯನಾ ರಾಜೀವ್
|

Updated on: Apr 24, 2023 | 8:27 AM

Share

ರಾಷ್ಟ್ರ ರಾಜಧಾನಿ ದೆಹಲಿಯ ರಸ್ತೆಯೊಂದರಲ್ಲಿ ಕುದುರೆ ಗಾಡಿ ಓಟ ನಡೆಸುತ್ತಿದ್ದ 10 ಮಂದಿಯನ್ನು ಪೊಲೀಸರು ಬಂಧಿಸಿ, 4 ಕುದುರೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ 2 ದ್ವಿಚಕ್ರ ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಕುದುರೆಗಳನ್ನು ಎಂಸಿಡಿಗೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 289/268/188/34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಂದು ಮುಂಜಾನೆ ರಾಜ್‌ಘಾಟ್‌ನಿಂದ ದೆಹಲಿ ಗೇಟ್, ಸಿವಿಕ್ ಸೆಂಟರ್ ಕಡೆಗೆ ಜವಾಹರಲಾಲ್ ನೆಹರು ಮಾರ್ಗದಲ್ಲಿ ಕುದುರೆ-ಗಾಡಿ ರೇಸಿಂಗ್‌ನಲ್ಲಿ ತೊಡಗಿದ್ದ ಹತ್ತು ಜನರನ್ನು ಬಂಧಿಸಲಾಗಿದೆ. ಉತ್ತರ ದೆಹಲಿಯ ಪ್ರಮುಖ ಶಾಪಿಂಗ್ ಸೆಂಟರ್ ಕಮಲಾ ಮಾರ್ಕೆಟ್‌ ಬಳಿ ಈ ಘಟನೆ ನಡೆದಿದೆ.

ವಿಡಿಯೋದಲ್ಲಿ ಹೆಲ್ಮೆಟ್​ ಇಲ್ಲದ ಇಬ್ಬರು ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಾ, ಕುದುರೆ ಗಾಡಿಯನ್ನು ವೇಗವಾಗಿ ಓಡಿಸುವಂತೆ ಪ್ರಚೋದನೆ ನೀಡುತ್ತಿರುವುದು ಕಂಡು ಬಂದಿದೆ.

ಮತ್ತಷ್ಟು ಓದಿ: Cheetah: ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದ್ದ ಮತ್ತೊಂದು ಚೀತಾ ಸಾವು

ನಿತ್ಯ ಸಾವಿರಾರು ವಾಹನಗಳು ಓಡಾಡುವ ರಸ್ತೆಯಲ್ಲಿ ಇಂತಹ ಸ್ಪರ್ಧೆಗಳನ್ನು ನಡೆಸುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತದೆ, ಅವರು ತಲುಪ ಬೇಕಾದ ಸ್ಥಳವನ್ನು ತಲುಪುವಲ್ಲಿ ವಿಳಂಬವಾಗುತ್ತದೆ. ಹಾಗೆಯೇ ಅನುಮತಿ ಇಲ್ಲದೆ ಹೀಗೆ ರಸ್ತೆಯಲ್ಲಿ ರೇಸ್​ಗಳನ್ನು ಯಾವುದೇ ಕಾರಣಕ್ಕೂ ನಡೆಸುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ