ಶಾರುಖ್ ಖಾನ್ ಯಾರು ಎಂದು ಕೇಳಿದ ಅಸ್ಸಾಂ ಸಿಎಂ ಹಿಮಂತ ಶರ್ಮಾ; ಹೇಳಿಕೆ ನೀಡಿದ ಬೆನ್ನಲ್ಲೇ ಬಂತು ಫೋನ್ ಕರೆ

Pathaan Movie ಪಠಾಣ್ ಸಿನಿಮಾ ವಿರುದ್ಧ ಬಲಪಂಥೀಯ ಕಾರ್ಯಕರ್ತರು ನಡೆಸುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಕುರಿತು ಪತ್ರಕರ್ತರು ಕೇಳಿದಾಗ, "ಶಾರುಖ್ ಖಾನ್ ಯಾರು? ಅವರ ಬಗ್ಗೆ ಅಥವಾ 'ಪಠಾಣ್' ಚಿತ್ರದ ಬಗ್ಗೆ ನನಗೆ ಏನೂ ತಿಳಿದಿಲ್ಲ ಎಂದು ನಿನ್ನೆ ಗುವಾಹಟಿಯಲ್ಲಿ ಮಾತನಾಡಿದ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದರು.

ಶಾರುಖ್ ಖಾನ್ ಯಾರು ಎಂದು ಕೇಳಿದ ಅಸ್ಸಾಂ ಸಿಎಂ ಹಿಮಂತ ಶರ್ಮಾ; ಹೇಳಿಕೆ ನೀಡಿದ ಬೆನ್ನಲ್ಲೇ ಬಂತು ಫೋನ್ ಕರೆ
ಶಾರುಖ್ ಖಾನ್- ಹಿಮಂತ ಬಿಸ್ವ ಶರ್ಮಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 22, 2023 | 1:12 PM

ಗುವಾಹಟಿ: ಬಾಲಿವುಡ್ ಬಾದ್​​ಶಾ ಶಾರುಖ್ ಖಾನ್ (Shah Rukh Khan) ಅವರೊಂದಿಗೆ ಮಾತನಾಡಿದ್ದೇನೆ. ಅವರಲ್ಲಿ ‘ಪಠಾಣ್’ (Pathaan)  ವಿರುದ್ಧದ ಪ್ರತಿಭಟನೆಗಳ ಬಗ್ಗೆ ಮಾತುಕತೆ ನಡೆಸಿರುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ. ರಾಜ್ಯದ ಥಿಯೇಟರ್‌ನಲ್ಲಿ ಸಂಭವಿಸಿದ “ಘಟನೆ” ಕುರಿತು ಮಾತನಾಡಲು ಖಾನ್ ಇಂದು(ಭಾನುವಾರ) ಮುಂಜಾನೆ ಕರೆ ಮಾಡಿರುವುದಾಗಿ ಶರ್ಮಾ ಹೇಳಿದ್ದಾರೆ. ಬಾಲಿವುಡ್ ನಟ ಶಾರುಖ್ ಖಾನ್ ನನಗೆ ಕರೆ ಮಾಡಿದ್ದು ನಾವು ಇಂದು ಬೆಳಿಗ್ಗೆ 2 ಗಂಟೆಗೆ ಮಾತನಾಡಿದ್ದೇವೆ. ತಮ್ಮ ಚಿತ್ರದ ಪ್ರದರ್ಶನದ ವೇಳೆ ಗುವಾಹಟಿಯಲ್ಲಿ ನಡೆದ ಘಟನೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ. ನಾವು ವಿಚಾರಣೆ ನಡೆಸುತ್ತೇವೆ ಮತ್ತು ಅಂತಹ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು ಶರ್ಮಾ ಟ್ವೀಟ್ ಮಾಡಿದ್ದಾರೆ.

ಪಠಾಣ್ ಸಿನಿಮಾ ವಿರುದ್ಧ ಬಲಪಂಥೀಯ ಕಾರ್ಯಕರ್ತರು ನಡೆಸುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಕುರಿತು ಪತ್ರಕರ್ತರು ಕೇಳಿದಾಗ, “ಶಾರುಖ್ ಖಾನ್ ಯಾರು? ಅವರ ಬಗ್ಗೆ ಅಥವಾ ‘ಪಠಾಣ್’ ಚಿತ್ರದ ಬಗ್ಗೆ ನನಗೆ ಏನೂ ತಿಳಿದಿಲ್ಲ ಎಂದು ನಿನ್ನೆ ಗುವಾಹಟಿಯಲ್ಲಿ ಮಾತನಾಡಿದ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದರು.

ಶಾರುಖ್ ಖಾನ್ ಬಾಲಿವುಡ್ ಸೂಪರ್‌ಸ್ಟಾರ್ ಎಂದು ಪತ್ರಕರ್ತರು ಹೇಳಿದಾಗ, ರಾಜ್ಯದ ಜನರು ಅಸ್ಸಾಮಿ ಚಲನಚಿತ್ರಗಳ ಬಗ್ಗೆ ಕಾಳಜಿ ವಹಿಸಬೇಕು ಮತ್ತು ಬಾಲಿವುಡ್‌ ಬಗ್ಗೆ ಅಲ್ಲ ಎಂದಿದ್ದರು ಶರ್ಮಾ.

ಇದನ್ನೂ ಓದಿ: Pathaan Review: ‘ಪಠಾಣ್​’ ಚಿತ್ರದ ನಕಲಿ ವಿಮರ್ಶೆ ಹಂಚಿಕೊಂಡ ಉಮೈರ್​ ಸಂಧು; ಸಾಕ್ಷಿ ಸಮೇತ ಬಯಲಿಗೆಳೆದ ತರಣ್​ ಆದರ್ಶ್​

ಗುವಾಹಟಿಯ ಥಿಯೇಟರ್‌ನಲ್ಲಿ ಚಲನಚಿತ್ರವನ್ನು ಪ್ರದರ್ಶಿಸಲು ಸಜ್ಜಾಗಿದ್ದಾಗ ಕೆಲವು ಕಾರ್ಯಕರ್ತರು ಚಿತ್ರದ ಪೋಸ್ಟರ್‌ಗಳನ್ನು ಹರಿದು ಹಾಕಿರುವ ಕುರಿತು ಕೇಳಿದ ಪ್ರಶ್ನೆಗಳಿಗೆ ಶಾರುಖ್ ಖಾನ್ ಯಾರು ಎಂದು ಅಸ್ಸಾಂ ಸಿಎಂ ಕೇಳಿದ್ದರು.ಖಾನ್ ಅವರಿಂದ ಯಾವುದೇ ಕರೆ ಬಂದಿಲ್ಲ. ಅವರು ನನ್ನಲ್ಲಿ ಒತ್ತಾಯಿಸಿದರೆ ವಿಷಯವನ್ನು ಪರಿಶೀಲಿಸುತ್ತೇನೆ. ಯಾವುದೇ ಪ್ರತಿಭಟನಾಕಾರರು ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಅವರು ಶನಿವಾರ ಭರವಸೆ ನೀಡಿದ್ದರು.

ಜನವರಿ 25 ರಂದು ಬಿಡುಗಡೆಯಾಗಲಿರುವ ಶಾರುಖ್ ಖಾನ್ ಅವರ ‘ಪಠಾಣ್’ ಚಿತ್ರದಲ್ಲಿ ನಾಯಕಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿರುವ ‘ಬೇಷರಂ ರಂಗ್’ ಹಾಡಿನ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಬಲಪಂಥೀಯ ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ನಾಯಕರು ಸಿನಿಮಾವನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Sun, 22 January 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್