Andhra Bus Tragedy: ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೊ ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೊ ಬಸ್ ಹೊತ್ತಿ ಉರಿದಿದ್ದು, 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಸ್ ಮೊದಲು ಬೈಕ್​​ಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ಬಳಿಕ ಅಲ್ಲೇ ಬಸ್ ನಿಂತಿದ್ದರೆ ಇಷ್ಟೊಂದು ಅನಾಹುತ ಸಂಭವಿಸುತ್ತಿರಲಿಲ್ಲ, ಬಸ್ ನಿಲ್ಲಿಸದೆ ಮುಂದಕ್ಕೆ ಹೋದ ಪರಿಣಾಮ ಬೈಕ್ ಬಸ್ ಅಡಿಯಲ್ಲಿ ಸಿಲುಕಿತ್ತು. ಬೈಕ್ ನೆಲಕ್ಕೆ ಉಜ್ಜಿದ ಪರಿಣಾಮ ಅದರಿಂದ ಬೆಂಕಿ ಹೊತ್ತಿಕೊಂಡಿತ್ತು.

Andhra Bus Tragedy: ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೊ ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?
ಬಸ್

Updated on: Oct 24, 2025 | 11:52 AM

ಹೈದರಾಬಾದ್, ಅಕ್ಟೋಬರ್ 24: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​​ನ ವೋಲ್ವೊ ಬಸ್(Volvo Bus) ಬೆಂಕಿಗಾಹುತಿಯಾಗಿದೆ. 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯ ಚಿನ್ನ ಟೆಕುರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಬಸ್ ಪ್ರಯಾಣ ಜನರನ್ನು ಅವ್ಯವಸ್ಥೆಗೆ ದೂಡಿದೆ.

ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?
ಬಸ್ ಮೊದಲು ಬೈಕ್​​ಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ಬಳಿಕ ಅಲ್ಲೇ ಬಸ್ ನಿಂತಿದ್ದರೆ ಇಷ್ಟೊಂದು ಅನಾಹುತ ಸಂಭವಿಸುತ್ತಿರಲಿಲ್ಲ, ಬಸ್ ನಿಲ್ಲಿಸದೆ ಮುಂದಕ್ಕೆ ಹೋದ ಪರಿಣಾಮ ಬೈಕ್ ಬಸ್ ಅಡಿಯಲ್ಲಿ ಸಿಲುಕಿತ್ತು. ಬೈಕ್ ನೆಲಕ್ಕೆ ಉಜ್ಜಿದ ಪರಿಣಾಮ ಅದರಿಂದ ಬೆಂಕಿ ಹೊತ್ತಿಕೊಂಡಿತ್ತು. ಅದು ಇಡೀ ಬಸ್ ಅನ್ನೇ ಆವರಿಸಿತ್ತು. ಬೈಕ್ ಸವಾರ ಕೂಡ ಸಾವನ್ನಪಿರಬಹುದು ಎಂದು ಅಂದಾಜಿಸಲಾಗಿದೆ. ಆ ಸಮಯದಲ್ಲಿ ಎಲ್ಲಾ ಪ್ರಯಾಣಿಕರು ಬಲಗಿದ್ದರು.

ಬಸ್ ಚಾಲಕ ಬದಲಿ ಚಾಕನನ್ನು ಎಬ್ಬಿಸಿ ಪ್ರಯಾಣಿಕರನ್ನು ಬಸ್​ನಿಂದ ಕೆಳಗೆ ಇಳಿಸುವ ಪ್ರಯತ್ನ ಮಾಡಿದ್ದಾರೆ. ವೋಲ್ವೊ ಬಸ್ ಆದ ಹಿನ್ನೆಲೆಯಲ್ಲಿ ಬೆಂಕಿ ಕೂಡ ಬೇಗ ಹತ್ತಿತ್ತು, ಜತೆಗೆ ಕಿಟಕಿಗಳು ಮುಚ್ಚಿದ್ದ ಪರಿಣಾಮ ಕಿಟಕಿಯನ್ನು ಒಡೆದು ಪ್ರಯಾಣಿಕರನ್ನು ಹೊರತರಲಾಯಿತು. ಅಷ್ಟರೊಳಗೆ ಹಲವು ಪ್ರಯಾಣಿಕರು ಉಸಿರುಚೆಲ್ಲಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: ಬೈಕ್- ಶಾಲಾ ಬಸ್ ನಡುವೆ ಭೀಕರ ಅಪಘಾತ: ಮಕ್ಕಳು ಸೇರಿ ನಾಲ್ವರು ದುರ್ಮರಣ

ಪ್ರತ್ಯಕ್ಷದರ್ಶಿಗಳು ಹೇಳುವಂತೆ ಬೆಂಕಿ ಎಷ್ಟು ಬೇಗನೆ ಹರಡಿತೆಂದರೆ, ಹೆಚ್ಚಿನ ಪ್ರಯಾಣಿಕರು ಏನಾಗುತ್ತಿದೆ ಎಂದು ಅರಿತುಕೊಳ್ಳುವ ಮೊದಲೇ ಬೆಂಕಿಯಲ್ಲಿ ಬೆಂದುಹೋದರು. ಕೆಲವರು ಸುಟ್ಟಗಾಯಗಳೊಂದಿಗೆ ಸಾವನ್ನಪ್ಪಿದ್ದಾರೆ, ಇನ್ನು ಕೆಲವರು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ಇದೆ.

ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳನ್ನು ಹೊರತೆಗೆಯಲು ಹೆಣಗಾಡಿದವು. ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ದೃಢಪಡಿಸಿಲ್ಲ, ಆದರೆ ವಿನಾಶದ ಪ್ರಮಾಣವು ಹೆಚ್ಚಿನ ಸಂಖ್ಯೆಯ ಸಾವುನೋವುಗಳನ್ನು ಸೂಚಿಸುತ್ತದೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರಿಗೆ ತ್ವರಿತ ಪರಿಹಾರ ಮತ್ತು ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದನ್ನು ಅವರು ಅತ್ಯಂತ ದುರಂತ ಘಟನೆ ಎಂದು ಕರೆದರು.

ಮೃತ ಹಾಗೂ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಆಂಧ್ರದಲ್ಲಿ ವೋಲ್ವೊ ಬಸ್​​ನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.ಬಾಗೇಪಲ್ಲಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳಿಗೆ ಹೇಳಿದ್ದೇನೆ.ಅಪಘಾತದಲ್ಲಿ ನಮ್ಮವರು ಇದ್ದಾರಾ ಎಂದು ಪರಿಶೀಲನೆ ಮಾಡಲಾಗುತ್ತಿದೆ. ಛತ್ತೀಸ್​ಗಢದಲ್ಲಿ ಈ ಬಸ್​​ನ ನೋಂದಣಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ಬಸ್ ಬೆಂಕಿ ಅವಘಡ ಸಂಭವಿಸಿ, ಮೂವರು ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ ಒಂದು ವಾರದ ನಂತರ ಕರ್ನೂಲ್ ಅಪಘಾತ ಸಂಭವಿಸಿದೆ. ಆ ಘಟನೆಯಲ್ಲಿ, ಅಕ್ಟೋಬರ್ 14 ರಂದು ಥೈಯಾತ್ ಗ್ರಾಮದ ಬಳಿ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಪ್ರಯಾಣಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ವಾಹನದ ಹವಾನಿಯಂತ್ರಣ ವ್ಯವಸ್ಥೆಯಲ್ಲಿನ ಶಾರ್ಟ್ ಸರ್ಕ್ಯೂಟ್ ಅನಿಲ ಸೋರಿಕೆಗೆ ಕಾರಣವಾಗಿದ್ದು, ಇದು ಬೆಂಕಿಗೆ ಕಾರಣ ಎಂದು ತನಿಖೆಯಿಂದ ತಿಳಿದುಬಂದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:41 am, Fri, 24 October 25