ಚುನಾವಣಾ ಬಾಂಡ್​ಗಳ ಮೂಲಕ ಯಾವ ಯಾವ ಪಕ್ಷಗಳಲ್ಲಿ ಎಷ್ಟು ಹಣ ಸಂದಾಯವಾಗಿದೆ? ಇಲ್ಲಿದೆ ಮಾಹಿತಿ

ಚುನಾವಣಾ ಬಾಂಡ್ ಅಥವಾ ಎಲೆಕ್ಟೋರಲ್ ಬಾಂಡ್ ಯೋಜನೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣವು 8 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಲ್ಲಿ ದಾನಿಗಳ ಗುರುತನ್ನು ಗೌಪ್ಯವಾಗಿಡುವ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿದೆ. ಇದರಿಂದ ಕಪ್ಪುಹಣಕ್ಕೆ ಉತ್ತೇಜನ ಸಿಗಬಹುದು ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಬಾಂಡ್​ಗಳ ಮೂಲಕ ಯಾವ ಯಾವ ಪಕ್ಷಗಳಲ್ಲಿ ಎಷ್ಟು ಹಣ ಸಂದಾಯವಾಗಿದೆ? ಇಲ್ಲಿದೆ ಮಾಹಿತಿ
ಬಿಜೆಪಿ, ಕಾಂಗ್ರೆಸ್​ Image Credit source: India Today
Follow us
ನಯನಾ ರಾಜೀವ್
|

Updated on: Nov 02, 2023 | 11:42 AM

ಚುನಾವಣಾ ಬಾಂಡ್ ಅಥವಾ ಎಲೆಕ್ಟೋರಲ್ ಬಾಂಡ್(Electoral  Bond) ಯೋಜನೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್(Supreme Court) ವಿಚಾರಣೆ ನಡೆಸುತ್ತಿದೆ. ಈ ಪ್ರಕರಣವು 8 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಲ್ಲಿ ದಾನಿಗಳ ಗುರುತನ್ನು ಗೌಪ್ಯವಾಗಿಡುವ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿದೆ. ಇದರಿಂದ ಕಪ್ಪುಹಣಕ್ಕೆ ಉತ್ತೇಜನ ಸಿಗಬಹುದು ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್​ ಎಷ್ಟು ಚುನಾವಣಾ ಬಾಂಡ್​ಗಳನ್ನು ಪಡೆದಿವೆ ಎಂಬುದನ್ನು ನೋಡೋಣ. ಎಡಿಆರ್​ ಅಂಕಿ ಅಂಶಗಳ ಪ್ರಕಾರ ಬಿಜೆಪಿಯು ಶೇ.57ರಷ್ಟು ಹಣವನ್ನು ಸ್ವೀಕರಿಸಿದೆ ಮತ್ತು ವಿರೋಧ ಪಕ್ಷವು ಕೇವಲ ಶೇ.10ರಷ್ಟು ಹಣವನ್ನು ದೇಣಿಗೆಯಾಗಿ ಪಡೆದಿವೆ.

ಎಡಿಆರ್ ಡೇಟಾದ ಪ್ರಕಾರ ಎಲೆಕ್ಟೋರಲ್ ಬಾಂಡ್​ಗಳು 2021-22ರವರೆಗೆ ಒಟ್ಟಾರೆಯಾಗಿ ಎಲ್ಲಾ ರಾಜಕೀಯ ಪಕ್ಷಗಳಿಗೆ 9,188 ಕೋಟಿ ರೂಪಾಯಿಗಿಂತ ಹೆಚ್ಚಿನ ದೇಣಿಗೆಯನ್ನು ನೀಡಿವೆ.

2016-17ರಿಂದ 2021-22ರವರೆಗೆ ಲಭ್ಯವಿರುವ ಅಂಕಿಅಂಶಗಳು, ಏಳು ರಾಷ್ಟ್ರೀಯ ಪಕ್ಷಗಳು ಮತ್ತು 24 ಪ್ರಾದೇಶಿಕ ಪಕ್ಷಗಳು ಒಟ್ಟಾರೆಯಾಗಿ ಒಟ್ಟು 9188.35 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್​ಗಳ ಮೂಲಕ ಪಡೆದಿವೆ.

ಮತ್ತಷ್ಟು ಓದಿ: 2024ರ ಚುನಾವಣೆಯಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಎನ್‌ಡಿಎಗೆ ಗೆಲುವು: ಅಮಿತ್ ಶಾ

ಪಕ್ಷಗಳು ಚುನಾವಣಾ ಆಯೋಗಕ್ಕೆ ನೀಡಿರುವ ಮಾಹಿತಿ ಪ್ರಕಾರ ಕಳೆದ ಐದು ವರ್ಷಗಳಲ್ಲಿ 10,000 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ, ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಚುನಾವಣಾ ಬಾಂಡ್‌ಗಳ ಮೂಲಕ ಈ ಮೊತ್ತವನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಡೆದಿದ್ದರೆ, ಕಾಂಗ್ರೆಸ್ ಕೇವಲ 952.29 ಕೋಟಿ ರೂ. ಈ ಡೇಟಾ 2017-2018 ಮತ್ತು 2021-2022 ಆಗಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಒಟ್ಟು 9,208.23 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು 2017-2018 ಮತ್ತು 2021-2022 ರ ಅವಧಿಯಲ್ಲಿ ಮಾರಾಟ ಮಾಡಲಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ಒಟ್ಟು 5,271.97 ಕೋಟಿ ರೂ. ಅದೇ ಸಮಯದಲ್ಲಿ ಕಾಂಗ್ರೆಸ್ 952.9 ಕೋಟಿ ದೇಣಿಗೆ ಪಡೆದಿದೆ.

ಸ್ಥಳೀಯ ಪಕ್ಷಗಳಿಗೂ ಉತ್ತಮ ಫಂಡಿಂಗ್ ಸಿಕ್ಕಿದೆ ರಾಜ್ಯಗಳಲ್ಲಿ ಸುದೀರ್ಘ ಕಾಲ ಅಧಿಕಾರದಲ್ಲಿರುವ ಟಿಎಂಸಿ, ಬಿಜೆಡಿ, ಡಿಎಂಕೆಯಂತಹ ರಾಜಕೀಯ ಪಕ್ಷಗಳೂ ಎಲೆಕ್ಟೋರಲ್ ಬಾಂಡ್ ಮೂಲಕ ಸಾಕಷ್ಟು ಹಣ ಪಡೆದಿವೆ.

ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) 767.88 ಕೋಟಿ ರೂ., ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಪಕ್ಷ ಬಿಜು ಜನತಾ ದಳ (ಬಿಜೆಡಿ) 622 ಕೋಟಿ ರೂ. ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) 50 ಕೋಟಿ ರೂ. ಸಂದಾಯವಾಗಿದೆ.

ಅದೇ ಸಮಯದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) 48.83 ಕೋಟಿ ರೂ. ಮತ್ತು ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ (ಜೆಡಿಯು) 24.40 ಕೋಟಿ ರೂ.ಗಳನ್ನು ಚುನಾವಣಾ ಬಾಂಡ್‌ಗಳ ಮೂಲಕ ಪಡೆದುಕೊಂಡಿದೆ. ಇದಲ್ಲದೇ ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ) 51.5 ಕೋಟಿ ರೂ. ಪಡೆದಿದೆ.

ಏನಿದು ಎಲೆಕ್ಟೋರಲ್ ಬಾಂಡ್ ಸ್ಕೀಮ್? ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು 2018 ರಲ್ಲಿ ಕಾನೂನುಬದ್ಧವಾಗಿ ಜಾರಿಗೊಳಿಸಲಾಗಿದೆ. ಯೋಜನೆಯನ್ನು ಅನುಷ್ಠಾನಗೊಳಿಸುವಾಗ, ರಾಜಕೀಯ ಪಕ್ಷಗಳ ನಿಧಿಯಲ್ಲಿ ಪಾರದರ್ಶಕತೆಯನ್ನು ತರುತ್ತದೆ ಎಂದು ಸರ್ಕಾರ ವಾದಿಸಿತ್ತು. ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಧನಸಹಾಯ ಮಾಡುವ ಹಣಕಾಸಿನ ಸಾಧನವಾಗಿದೆ.

ಪ್ರತಿ ವರ್ಷ, ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ 10 ದಿನಗಳ ಅವಧಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆಯ್ದ ಶಾಖೆಗಳಲ್ಲಿ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಲಾಗುತ್ತದೆ.

ಯಾವುದೇ ನಾಗರಿಕನು ಬಾಂಡ್‌ಗಳನ್ನು ಖರೀದಿಸಬಹುದು ಮತ್ತು ಅವರ ಇಚ್ಛೆಯಂತೆ ಯಾವುದೇ ಪಕ್ಷಕ್ಕೆ ನೀಡಬಹುದು. ಆದರೆ, ಆ ಪ್ರಜೆಯ ಗುರುತನ್ನು ಗೌಪ್ಯವಾಗಿಡಲಾಗಿದೆ. ಬಾಂಡ್ ಖರೀದಿಸಿದ 15 ದಿನಗಳಲ್ಲಿ ಇದನ್ನು ಬಳಸಬೇಕು. ವಿವಿಧ ಬೆಲೆಗಳ ಎಲೆಕ್ಟೋರಲ್ ಬಾಂಡ್‌ಗಳು ಲಭ್ಯವಿದೆ. ಅವುಗಳ ಬೆಲೆ 1000, 10,000, 1 ಲಕ್ಷ, 10 ಲಕ್ಷ ಮತ್ತು 1 ಕೋಟಿ ರೂ. ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್