AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಚುನಾವಣೆ ಸ್ಪರ್ಧಿಸಲು ಎಷ್ಟು ಹಣ ಬೇಕು? ನಿರ್ಮಲಾ ಹೇಳಿಕೆಯಿಂದ ಮೂಡಿದ ಪ್ರಶ್ನೆಗೆ ಇಲ್ಲಿದೆ ಉತ್ತರ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಷ್ಟು ಹಣ ಇಲ್ಲದ ಕಾರಣ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ. ದೇಶದ ಹಣಕಾಸು ಸಚಿವರ ಬಳಿಯೇ ಚುನಾವಣೆ ಸ್ಪರ್ಧಿಸುವಷ್ಟು ಹಣ ಇಲ್ಲ ಎಂದಾದರೆ ಚುನಾವಣೆಗೆ ಸ್ಪರ್ಧಿಸಲು ಅದೆಷ್ಟು ದುಡ್ಡು ಬೇಕಾಗುತ್ತದೆ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಉತ್ತರ ಇಲ್ಲಿದೆ.

ಭಾರತದಲ್ಲಿ ಚುನಾವಣೆ ಸ್ಪರ್ಧಿಸಲು ಎಷ್ಟು ಹಣ ಬೇಕು? ನಿರ್ಮಲಾ ಹೇಳಿಕೆಯಿಂದ ಮೂಡಿದ ಪ್ರಶ್ನೆಗೆ ಇಲ್ಲಿದೆ ಉತ್ತರ
ನಿರ್ಮಲಾ ಸೀತಾರಾಮನ್
ಗಣಪತಿ ಶರ್ಮಾ
|

Updated on: Mar 29, 2024 | 10:32 AM

Share

ನವದೆಹಲಿ, ಮಾರ್ಚ್ 29: ‘ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಸ್ಪರ್ಧಿಸಲು ಬೇಕಾದಷ್ಟು ಹಣ ನನ್ನ ಬಳಿ ಇಲ್ಲ. ಹಾಗಾಗಿ, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾಡಿರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ದೇಶದ ಹಣಕಾಸು ಸಚಿವರೇ ಚುನಾವಣೆ ಎದುರಿಸಲು ಬೇಕಾದಷ್ಟು ಹಣವಿಲ್ಲ ಎಂದು ಹೇಳುತ್ತಾರೆ ಎಂದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಎಷ್ಟು ದುಡ್ಡು ಬೇಕಾಗುತ್ತದೆ ಎಂಬ ಪ್ರಶ್ನೆ ಮೂಡುವುದು ಸಹಜ.

ಹಣಕಾಸು ಖಾತೆಯನ್ನೇ ಹೊಂದಿರುವ ಕೇಂದ್ರ ಸಚಿವರ ಬಳಿ ಚುನಾವಣೆಯಲ್ಲಿ ಸೆಣಸಲು ಬೇಕಾದಷ್ಟು ಹಣವಿಲ್ಲದಿದ್ದರೆ, ಭಾರತದಲ್ಲಿ ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಯ ಬಳಿ ಎಷ್ಟು ಹಣ ಬೇಕಾಗುತ್ತದೆ? ಈ ಬಗ್ಗೆ ತಿಳಿಯುವ ಪ್ರಯತ್ನ ಇಲ್ಲಿದೆ.

ಚುನಾವಣೆಗೆ ಸ್ಪರ್ಧಿಸುವ ವೆಚ್ಚವು ಅಭ್ಯರ್ಥಿಯ ಸಂಪತ್ತಿನ ಮೇಲೆ ಅವಲಂಬಿತವಾಗಿರುವುದೇನೋ ನಿಜ. ಆದರೆ ಭಾರತದ ಚುನಾವಣಾ ಆಯೋಗದ ಕೂಡ ಚುನಾವಣಾ ವೆಚ್ಚದ ಮೇಲೆ ಮಿತಿ ನಿಗದಿಪಡಿಸಿದೆ.

ಲೋಕಸಭೆಗೆ ಚುನಾವಣೆಗೆ 95 ಲಕ್ಷ ರೂ. ಮಿತಿ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯು ಹೆಚ್ಚು ಮತದಾರರನ್ನು ಹೊಂದಿರುವ ದೊಡ್ಡ ಕ್ಷೇತ್ರಗಳಲ್ಲಾದರೆ 95 ಲಕ್ಷ ರೂ.ವರೆಗೆ ಖರ್ಚು ಮಾಡಬಹುದು. ಅದಕ್ಕಿಂತ ಹೆಚ್ಚು ಮಾಡುವಂತಿಲ್ಲ. ಸಣ್ಣ ಕ್ಷೇತ್ರಗಳಲ್ಲಾದರೆ 75 ಲಕ್ಷ ರೂಪಾಯಿವರೆಗೆ ಖರ್ಚು ಮಾಡಬಹುದು.

ವಿಧಾನಸಭಾ ಚುನಾವಣೆ ವೇಳೆ ದೊಡ್ಡ ಕ್ಷೇತ್ರಗಳ ಅಭ್ಯರ್ಥಿಯ ಚುನಾವಣಾ ಖರ್ಚಿನ ಮಿತಿ 40 ಲಕ್ಷ ರೂ. ಇದ್ದರೆ, ಚಿಕ್ಕದಾದ ಮತ್ತು ಕಡಿಮೆ ಮತದಾರರಿರುವ ಕ್ಷೇತ್ರಗಳ ಅಭ್ಯರ್ಥಿಯ ಚುನಾವಣಾ ಖರ್ಚಿನ ಮಿತಿ 20 ಲಕ್ಷ ರೂ. ಆಗಿದೆ.

ಆದರೆ ವಾಸ್ತವದಲ್ಲಿ, ಈ ಮಿತಿಯನ್ನು ಅನುಸರಿಸುತ್ತಿರುವುದು ವಿರಳ ಎಂದೇ ಹೇಳಬೇಕಷ್ಟೆ. ಪ್ರಚಾರದ ವೆಚ್ಚದ ಹೊರತಾಗಿ, ಮತದಾರರಿಗೆ ಆಮಿಷವೊಡ್ಡಲು ಅಭ್ಯರ್ಥಿಗಳು ಉಚಿತ ಕೊಡುಗೆಗಳಿಗಾಗಿ ವಿಪರೀತ ಖರ್ಚು ಮಾಡುವುದು ಗುಟ್ಟಾಗಿ ಉಳಿದಿಲ್ಲ. ಚುನಾವಣಾ ಸಂದರ್ಭದಲ್ಲಿ ಆಯೋಗದ ಅಧಿಕಾರಿಗಳು ಅಪಾರ ಪ್ರಮಾಣದಲ್ಲಿ ವಶಪಡಿಸಿಕೊಳ್ಳುವ ನಗದು, ಆಭರಣ, ಗೃಹ ಬಳಕೆಯ ವಸ್ತುಗಳು ಹಾಗೂ ಇತರ ವಸ್ತುಗಳಿಂದ ಇದನ್ನು ತಿಳಿಯಬಹುದಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿಲ್ಲ. ಅವರು ರಾಜ್ಯಸಭಾ ಸದಸ್ಯರಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಲೋಕಸಭೆ ಚುನಾವಣೆಯಷ್ಟು ಹಣ ಖರ್ಚು ಮಾಡಬೇಕಾಗಿ ಬರುವುದಿಲ್ಲ ಎಂಬುದೇ ಇದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ಬಳಿ ಅಷ್ಟು ಹಣವಿಲ್ಲ ಎಂದ ನಿರ್ಮಲಾ ಸೀತಾರಾಮನ್

ನಿರ್ಮಲಾ ಸೀತಾರಾಮನ್ 2016 ರಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಅಫಿಡವಿಟ್‌ನಲ್ಲಿ ಸುಮಾರು 2.5 ಕೋಟಿ ರೂ. ನಿವ್ವಳ ಆಸ್ತಿ ಮೌಲ್ಯ ಘೋಷಿಸಿದ್ದರು.

ಡಿಕೆ ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಈವರೆಗೆ ಆಸ್ತಿ ವಿವರ ಘೋಷಿಸಿರುವವರಲ್ಲಿ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ 593 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಇವರು ಕಣದಲ್ಲಿರುವ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ.

ಇನ್ನುಳಿದಂತೆ, ಈರೋಡ್ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಅಶೋಕ್ ಕುಮಾರ್ 583 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಡಿಕೆ ಸುರೇಶ್‌ 593.04 ಕೋಟಿ ರೂ. ಒಡೆಯ, ಆದ್ರೂ ಒಂದು ಸ್ವಂತ ಕಾರು ಇಲ್ಲ!

ಪ್ರಸ್ತುತ ಚುನಾವಣೆಗಳು ಮತ್ತು ಹಣದ ನಡುವಣ ನಂಟು ಹೆಚ್ಚಾಗಿದೆ. ಅಭ್ಯರ್ಥಿಗಳು ಎಷ್ಟು ಶ್ರೀಮಂತರಾಗಿದ್ದಾರೆಯೋ, ಚುನಾವಣೆಯಲ್ಲಿ ಸ್ಪರ್ಧಿಸುವುದು ಅಷ್ಟು ಸುಲಭವಾಗುತ್ತದೆ. ಆದರೆ, ಶ್ರೀಮಂತರಾಗಿದ್ದ ಮಾತ್ರಕ್ಕೆ ಚುನಾವಣೆಯಲ್ಲಿ ಗೆಲುವು ಖಾತರಿಯಾಗದು. ಕಳೆದ ಚುನಾವಣೆಯಲ್ಲಿ ಕೆಲವು ಶ್ರೀಮಂತ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿರುವ ಉದಾಹರಣೆಗಳಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ