ಅಮಿತ್ ಶಾ, ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪ್ರಯೋಗಿಸಿದ್ದ ಅಸ್ತ್ರವೇ ರಾಹುಲ್, ಸೋನಿಯಾ ಗಾಂಧಿಗೆ ತಿರುಗುಬಾಣವಾಯಿತೇ?

ಕೇಂದ್ರ ಸರ್ಕಾರದ ವಿರುದ್ಧ ತನಿಖಾ ಏಜೆನ್ಸಿಗಳ ದುರುಪಯೋಗದ ಆರೋಪಗಳನ್ನು ಈಗ ಕಾಂಗ್ರೆಸ್ ಮಾಡುತ್ತಿದೆ. ಒಂದೇ ವ್ಯತ್ಯಾಸವೆಂದರೆ ಮೋದಿ ಮತ್ತು ಶಾ ಇಬ್ಬರೂ ಇಂತಹ ತನಿಖೆಗಳನ್ನು ಧೈರ್ಯದಿಂದ ಎದುರಿಸಿದ್ದರು. ಆದರೆ, ಕಾಂಗ್ರೆಸ್ ನಾಯಕರು ಗಲಾಟೆ ಮಾಡುತ್ತಿದ್ದಾರೆ.

ಅಮಿತ್ ಶಾ, ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪ್ರಯೋಗಿಸಿದ್ದ ಅಸ್ತ್ರವೇ ರಾಹುಲ್, ಸೋನಿಯಾ ಗಾಂಧಿಗೆ ತಿರುಗುಬಾಣವಾಯಿತೇ?
ಅಮಿತ್ ಶಾ- ನರೇಂದ್ರ ಮೋದಿImage Credit source: Reuters
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 21, 2022 | 12:38 PM

ನವದೆಹಲಿ: ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ (National Herald Case) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ಸಮನ್ಸ್​ ಜಾರಿ ಮಾಡಿದೆ. ನಾಲ್ಕು ದಿನಗಳ ವಿರಾಮದ ನಂತರ ರಾಹುಲ್ ಗಾಂಧಿ (Rahul Gandhi) ಮತ್ತೊಮ್ಮೆಇಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಇನ್ನೂ ನಿಂತಿಲ್ಲ. ಪಕ್ಷದ ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಹರಸಾಹಸ ಮಾಡಿದ್ದು ಮಾತ್ರವಲ್ಲದೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದರು. ಪಕ್ಷದ ಕೆಲವು ಹಿರಿಯ ನಾಯಕರು ಕೂಡ ಇದಕ್ಕೆ ದನಿಗೂಡಿಸಿದರು.

ಈ ಪ್ರತಿಭಟನೆಯಲ್ಲಿ ದೇಶದೆಲ್ಲೆಡೆಯಿಂದ ಕಾಂಗ್ರೆಸ್ ನಾಯಕರು ಭಾಗವಹಿಸುತ್ತಿದ್ದಾರೆ. ದೆಹಲಿಯ ಹೊರಗೆ ಹಿಂಸಾತ್ಮಕ ಪ್ರತಿಭಟನೆಗಳು ಕೂಡ ವರದಿಯಾಗಿವೆ. ದೇಶದ ಎಲ್ಲ ಭಾಗಗಳಿಂದ ಕಾಂಗ್ರೆಸ್ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಬಂದಿಳಿದಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಇಬ್ಬರೂ ತಮ್ಮ ತಮ್ಮ ರಾಜ್ಯಗಳಲ್ಲಿ ತಮ್ಮ ಕೆಲಸವನ್ನು ಬಿಟ್ಟು ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ದೆಹಲಿಯಲ್ಲಿ ಯಾವುದೇ ಸಂಸದ ಅಥವಾ ಶಾಸಕರು ಇಲ್ಲದ ಕಾರಣ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಜಧಾನಿಯ ಹೊರಗಿನ ನಾಯಕರನ್ನು ಇಲ್ಲಿಗೆ ಬರುವಂತೆ ಕೇಳಲಾಗುತ್ತಿದೆ. ಮೋದಿ ಸರ್ಕಾರ ಮತ್ತು ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರಲು ಹೇಗಾದರೂ ಅವ್ಯವಸ್ಥೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ಅಗ್ನಿಪಥ ಯೋಜನೆ ವಿರೋಧಿಸಿ ಕಾಂಗ್ರೆಸ್ ಮುಖಂಡರು ಕೂಡ ಕೈಜೋಡಿಸಿ ರೈಲು ತಡೆಗೆ ಮುಂದಾಗಿದ್ದಾರೆ. ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಪಾದಯಾತ್ರೆ ನಡೆಸಿ ಒತ್ತಡ ಹೇರುವ ಪ್ರಯತ್ನವನ್ನೂ ಮಾಡಿದ್ದಾರೆ.

ನ್ಯಾಷನಲ್ ಹೆರಾಲ್ಡ್- ಯಂಗ್ ಇಂಡಿಯನ್ ಪ್ರಕರಣವನ್ನು ಇಡಿ ತನಿಖೆ ಮಾಡುತ್ತಿರುವುದರಿಂದ ಕಾಂಗ್ರೆಸ್ ಪ್ರತಿಭಟನೆಯ ಮೊರೆ ಹೋಗಿದೆ. 2,000 ಕೋಟಿಗೂ ಅಧಿಕ ಮೌಲ್ಯದ ನ್ಯಾಷನಲ್ ಹೆರಾಲ್ಡ್ ಅನ್ನು ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಕಂಪನಿಯನ್ನು ಕೇವಲ 50 ಲಕ್ಷ ರೂ. ನೀಡಿ ಯಂಗ್ ಇಂಡಿಯನ್‌ನಂತಹ ಹೊಸ ಕಂಪನಿ ಸ್ವಾಧೀನಪಡಿಸಿಕೊಂಡಿರುವುದನ್ನು ಪ್ರಶ್ನಿಸಿ ಇಡಿ ವಿಚಾರಣೆ ನಡೆಸುತ್ತಿದೆ. ಈ ಕಂಪನಿಯ ಹೆಚ್ಚಿನ ಷೇರು ರಾಹುಲ್ ಮತ್ತು ಅವರ ತಾಯಿ ಸೋನಿಯಾ ಗಾಂಧಿಯವರ ಹೆಸರಲ್ಲಿದೆ. ಆದರೆ, ಮೋದಿ ಸರ್ಕಾರ ರಾಜಕೀಯ ಸೇಡಿಗಾಗಿ ಈ ರೀತಿ ಮಾಡುತ್ತಿದೆ ಎಂದು ಕಾಂಗ್ರೆಸ್ ಭಾವಿಸಿದೆ. (Source)

ಇದನ್ನೂ ಓದಿ
Image
ವ್ಯತ್ಯಾಸ ನೋಡಿ!; ED ನೋಟಿಸ್​ಗೆ ಹೋರಾಟಕ್ಕೆ ಕರೆ ಕೊಟ್ಟ ರಾಹುಲ್ ಗಾಂಧಿ: 2010ರಲ್ಲಿ SIT ತನಿಖೆಗೆ ಸಹಕರಿಸಿದ್ದ ಮೋದಿ
Image
Biotech Startup Expo 2022: ಬಯೋಟೆಕ್ ಸ್ಟಾರ್ಟ್​ಅಪ್ ಎಕ್ಸ್​ಪೋಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ
Image
ಜೂನ್ 13 ರಂದು ಇ.ಡಿ ಎದುರು ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ
Image
Rahul Gandhi Video: ನೇಪಾಳದ ಪಬ್​ನಲ್ಲಿ ರಾಹುಲ್ ಗಾಂಧಿ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್

ಕಾಂಗ್ರೆಸ್ ನಾಯಕರು ವಿಚಾರಣೆಗೆ ಹೆದರೋದೇಕೆ?:

ತನಿಖಾ ವರದಿ ಮತ್ತು ನ್ಯಾಯಾಲಯದ ಅಂತಿಮ ಮಾತುಗಳಿಗಾಗಿ ಕಾಯುವ ಬದಲು ಇಡಿ ತನಿಖೆಯನ್ನು ಎಲ್ಲ ರೀತಿಯಲ್ಲೂ ವಿರೋಧಿಸಲು ಕಾಂಗ್ರೆಸ್ ಮುಂದಾಗಿದೆ. ರಾಹುಲ್‌ ಗಾಂಧಿಯ ವಿಚಾರಣೆಯ ಮೊದಲ ಮೂರು ದಿನಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಲಾಯಿತು. ಪಕ್ಷದ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ಕಳೆದ ಬುಧವಾರ ರಾಹುಲ್ ಗಾಂಧಿ, ತನ್ನ ತಾಯಿಯ ಅನಾರೋಗ್ಯದ ನೆಪದಲ್ಲಿ ಇಡಿಯಿಂದ ನಾಲ್ಕು ದಿನಗಳ ವಿರಾಮವನ್ನು ಕೇಳಿದರು. ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಒಂದು ಹೆಜ್ಜೆ ಮುಂದೆ ಹೋಗಿ ಮೋದಿ ಸರ್ಕಾರವನ್ನು ಕಿತ್ತೊಗೆಯುವಂತೆ ಯುವಕರಿಗೆ ಕರೆ ನೀಡಿದರು.

ಸಂವಿಧಾನ ಮತ್ತು ಸಂಸ್ಥೆಗಳ ಸ್ವಾತಂತ್ರ್ಯದ ಬಗ್ಗೆ ನಿರಂತರವಾಗಿ ಮಾತನಾಡುವ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯನ್ನು ಇಡಿ ಪ್ರಶ್ನಿಸಿದ ಬಗ್ಗೆ ಏಕೆ ಗಲಾಟೆ ಮಾಡುತ್ತಿದ್ದಾರೆ? ನೆಹರೂ-ಗಾಂಧಿ ಕುಟುಂಬ ಸಂವಿಧಾನ ಮತ್ತು ಕಾನೂನಿಗೆ ಮೇಲಿದೆಯೇ? ಅವರ ವಿರುದ್ಧ ಪ್ರಾಥಮಿಕ ಹಂತದ ಭ್ರಷ್ಟಾಚಾರದ ಆರೋಪಗಳಿದ್ದರೂ ನೆಹರೂ-ಗಾಂಧಿ ಕುಟುಂಬಕ್ಕೆ ಸೇರಿದವರು ಎಂಬ ಕಾರಣಕ್ಕೆ ಯಾವುದೇ ತನಿಖೆ ನಡೆಸಬಾರದೇ?

12 ವರ್ಷಗಳ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಕೂಡ ಇದೇ ರೀತಿ ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಿದ್ದರು. ಆದರೆ, ಅವರು ಅದರ ಬಗ್ಗೆ ಯಾವುದೇ ಗಲಾಟೆ ಮಾಡಲಿಲ್ಲ. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಸಿಬಿಐ ಮಾತ್ರವಲ್ಲ, ಕಾಂಗ್ರೆಸ್ ಕೂಡ ಎನ್‌ಜಿಒ ಬ್ರಿಗೇಡ್ ಅನ್ನು ನಿಯೋಜಿಸಿತ್ತು. ಪ್ರಮುಖ ಗುಜರಾತ್ ಗಲಭೆಯ ಹಿಂದಿನ ಪಿತೂರಿಯ ಬಗ್ಗೆ ಝಕಿಯಾ ಜಾಫರಿ ಸಲ್ಲಿಸಿದ ಮನವಿಯ ವಿಚಾರಣೆಯನ್ನು ಸಹ ಎಸ್‌ಐಟಿಗೆ ಹಸ್ತಾಂತರಿಸಲಾಗಿತ್ತು.

ಇದನ್ನೂ ಓದಿ: ವ್ಯತ್ಯಾಸ ನೋಡಿ!; ED ನೋಟಿಸ್​ಗೆ ಹೋರಾಟಕ್ಕೆ ಕರೆ ಕೊಟ್ಟ ರಾಹುಲ್ ಗಾಂಧಿ: 2010ರಲ್ಲಿ SIT ತನಿಖೆಗೆ ಸಹಕರಿಸಿದ್ದ ಮೋದಿ

ತಮ್ಮ ವಿರುದ್ಧ ಕಾಂಗ್ರೆಸ್ ಕುತಂತ್ರ ನಡೆಸುತ್ತಿದ್ದರೂ ನರೇಂದ್ರ ಮೋದಿ ಎಸ್‌ಐಟಿ ವಿರುದ್ಧ ಯಾವುದೇ ಹೇಳಿಕೆ ನೀಡಲಿಲ್ಲ. ಎಸ್​ಐಟಿ ಮುಂದೆ ಹಾಜರಾಗಲು ನಿರಾಕರಿಸಲಿಲ್ಲ. 2010ರಲ್ಲಿ ನರೇಂದ್ರ ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದರು. SIT ಮಾರ್ಚ್ 2010ರ ಕೊನೆಯ ವಾರದಲ್ಲಿ ಮೋದಿಯನ್ನು ವಿಚಾರಣೆ ನಡೆಸಲು ನಿರ್ಧರಿಸಿತು. 1,000ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ 2002ರ ಗುಜರಾತ್ ಕೋಮು ಗಲಭೆಗಳನ್ನು ತಡೆಯಲು ಸೂಕ್ತ ಪ್ರಯತ್ನಗಳನ್ನು ಮಾಡದ ಆರೋಪದ ಮೇಲೆ ವಿಚಾರಣೆಗೆ ಹಾಜರಾಗಲು ಆಗ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರಿಗೆ 2010ರಲ್ಲಿ ಎಸ್​ಐಟಿ ಸಮನ್ಸ್​ ಜಾರಿ ಮಾಡಿತ್ತು. ಆ ವೇಳೆ ಯಾವುದೇ ತಗಾದೆ ತೆಗೆಯದೆ, ತಮ್ಮ ಕಾರ್ಯಕರ್ತರಿಗೆ ಶಾಂತರೀತಿಯಿಂದ ವರ್ತಿಸುವಂತೆ ಸೂಚನೆ ನೀಡಿದ್ದ ನರೇಂದ್ರ ಮೋದಿ ಖುದ್ದಾಗಿ ಎಸ್​ಐಟಿ ಕಚೇರಿಗೆ ಹಾಜರಾಗಿದ್ದರು. ನಿರಂತರವಾಗಿ 9 ಗಂಟೆಗಳ ಕಾಲ ಆಗ ನರೇಂದ್ರ ಮೋದಿ ಅವರನ್ನು ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಎಸ್​ಐಟಿ ಸಮನ್ಸ್​ ಜಾರಿ ಮಾಡಿದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ನರೇಂದ್ರ ಮೋದಿ, ಭಾರತೀಯ ಕಾನೂನು ಮತ್ತು ಸಂವಿಧಾನವು ಸರ್ವೋಚ್ಚವಾಗಿದೆ. ಒಬ್ಬ ನಾಗರಿಕನಾಗಿ ಮತ್ತು ಮುಖ್ಯಮಂತ್ರಿಯಾಗಿ ನಾನು ಸಂವಿಧಾನ ಮತ್ತು ಕಾನೂನಿಗೆ ಬದ್ಧನಾಗಿದ್ದೇನೆ. ಯಾರೂ ಕಾನೂನಿಗಿಂತ ಮೇಲಲ್ಲ. ನಾನು ಎಸ್​ಐಟಿ ವಿಚಾರಣೆಗೆ ಸಹಕರಿಸುತ್ತೇನೆ ಎಂದು ಹೇಳಿದ್ದರು.

ಬಳಿಕ 2012ರ ಫೆಬ್ರವರಿ ತಿಂಗಳಲ್ಲಿ ಗುಜರಾತ್​ ಗಲಭೆ ಪ್ರಕರಣದಲ್ಲಿ SIT ಮುಚ್ಚಿದ ವರದಿಯನ್ನು ಸಲ್ಲಿಸಿತ್ತು. ಅಲ್ಲದೆ, ನರೇಂದ್ರ ಮೋದಿ ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳು ಸೇರಿದಂತೆ 63 ಇತರರಿಗೆ ಕ್ಲೀನ್ ಚಿಟ್ ನೀಡಿತ್ತು. ಅವರ ವಿರುದ್ಧ ಯಾವುದೇ ಪ್ರಾಸಿಕ್ಯೂಟಬಲ್ ಸಾಕ್ಷ್ಯಗಳಿಲ್ಲ ಎಂದು ವರದಿಯಲ್ಲಿ ಹೇಳಲಾಗಿತ್ತು. 2002ರಲ್ಲಿ ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿ 59 ಜನರನ್ನು ಬಲಿತೆಗೆದುಕೊಂಡ ನಂತರ ಗುಜರಾತ್‌ನಲ್ಲಿ ಸಂಭವಿಸಿದ 2002ರ ವ್ಯಾಪಕ ಹಿಂಸಾಚಾರದಲ್ಲಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಭಾಗಿಯಾಗಿದ್ದರು ಎಂದು ಗಲಭೆಯಲ್ಲಿ ಕೊಲ್ಲಲ್ಪಟ್ಟ ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಅವರ ಹೆಂಡತಿ ಝಕಿಯಾ ಜಾಫ್ರಿ ಅವರ ದೂರಿನ ಮೇರೆಗೆ ನರೇಂದ್ರ ಮೋದಿಯನ್ನು ತನಿಖೆ ನಡೆಸಲಾಗಿತ್ತು. ಈಗ ರಾಹುಲ್ ಗಾಂಧಿ ಯಾವುದೇ ರಾಜ್ಯದ ಮುಖ್ಯಮಂತ್ರಿಯೂ ಅಲ್ಲ. ಆದರೂ ಅವರು ಇಡಿ ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ. ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಅದಾದ ಬಳಿಕ ಮೋದಿ ಮತ್ತು ಅವರ ಆಪ್ತರಾದ ಹಾಲಿ ಗೃಹ ಸಚಿವ ಅಮಿತ್ ಶಾಗೆ ಮತ್ತೊಂದು ದೊಡ್ಡ ಪರೀಕ್ಷೆ ಎದುರಾಗಿತ್ತು. 2006ರಲ್ಲಿ ಸೋಹರಾಬುದ್ದೀನ್ ಶೇಖ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿದ್ದರು. ಈ ವಿಷಯದ ಬಗ್ಗೆ ಸಿಬಿಐ ತನಿಖೆ ನಡೆಸಿತ್ತು. ಆಗ ಕೇಂದ್ರದಲ್ಲಿ ಯುಪಿಎ ನೇತೃತ್ವದ ಸರ್ಕಾರ ಅಧಿಕಾರದಲ್ಲಿತ್ತು. ಸ್ವತಃ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ್ದರು. 2007ರಲ್ಲಿ ಚುನಾವಣಾ ರ್ಯಾಲಿಯಲ್ಲಿ ಅವರು ಮೋದಿಯ ಹೆಗಲಿಗೆ ಸೊಹ್ರಾಬುದ್ದೀನ್ ಎನ್‌ಕೌಂಟರ್‌ನ ಹೊಣೆಯನ್ನು ಹೊರಿಸಿದರು. ಅಲ್ಲದೆ, ಮೋದಿಯನ್ನು ಸಾವಿನ ವ್ಯಾಪಾರಿ ಎಂದು ಕರೆದರು. ಆದರೂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡು, ಕಾಂಗ್ರೆಸ್ ಹೀನಾಯವಾಗಿ ಸೋತಿತು. ಈ ಸೋಲು ಕಾಂಗ್ರೆಸ್ಸಿಗರನ್ನು ಕೆರಳಿಸಿತು. ಸಿಬಿಐ ಮೇಲೆ ಒತ್ತಡ ಹೆಚ್ಚಾಯಿತು. ಸಿಬಿಐ ಅನ್ನು ಪಂಜರದ ಗಿಳಿ ಎಂದು ಸುಪ್ರೀಂ ಕೋರ್ಟ್ ಬಣ್ಣಿಸಿದ ಸಮಯವದು.

ಇದನ್ನೂ ಓದಿ: Rahul Gandhi: ನ್ಯಾಷನಲ್ ಹೆರಾಲ್ಡ್ ಪ್ರಕರಣ; ಜಾರಿ ನಿರ್ದೇಶನಾಲಯದಿಂದ ಇಂದು ಮತ್ತೆ ರಾಹುಲ್ ಗಾಂಧಿ ವಿಚಾರಣೆ

ಆ ಸಮಯದಲ್ಲಿ, ಸಿಬಿಐ ದಾಖಲೆಗಳು ಸೋರಿಕೆಯಾಯಿತು. ಸಿಬಿಐ ಅಮಿತ್ ಶಾ ಮೇಲೆ ಮತ್ತು ನರೇಂದ್ರ ಮೋದಿ ಅವರ ಮೇಲೆ ಆರೋಪ ಹೊರಿಸಲು ನಿರ್ಧರಿಸಿತ್ತು. ಬಳಿಕ ಸಿಬಿಐ ತನಿಖೆಯನ್ನು ನಡೆಸಿತು. ಒಬ್ಬರ ನಂತರ ಒಬ್ಬರಂತೆ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಯಿತು. ಹಾಗೇ, ಸಿಬಿಐ ಮೇಲೆ ಮೋದಿ ಮತ್ತು ಶಾ ಅವರನ್ನು ಬಂಧಿಸುವಂತೆ ಒತ್ತಡ ಹೇರಲಾಯಿತು. ಸಿಬಿಐನ ರಾಜಕೀಯ ಒತ್ತಡಗಳು ಮತ್ತು ಅದರ ಯೋಜನೆಗಳ ಬಗ್ಗೆ ಮೋದಿ ಮತ್ತು ಶಾ ಅವರಿಗೆ ತಿಳಿದಿತ್ತು. ಆದರೂ ಅವರು ಸುಮ್ಮನಿದ್ದರು.

ನಂತರ ಸಿಬಿಐ ಮೋದಿ ಮತ್ತು ಅಮಿತ್ ಶಾಗೆ ಒಂದೆರಡು ಬಾರಿ ಸಮನ್ಸ್ ಕಳುಹಿಸಿ, ಬಂಧಿಸಲು ವಿಫಲವಾದ ನಂತರ, 2010ರಲ್ಲಿ ವ್ಯವಹಾರಗಳ ರಾಜ್ಯ ಸಚಿವ ಅಮಿತ್ ಶಾ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಯಿತು. ಇದಾದ ನಂತರ ಅಮಿತ್ ಶಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2010ರ ಜುಲೈ 24ರಂದು ಮುಂಜಾನೆ ಅವರು ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರಿಗೆ ತಮ್ಮ ರಾಜೀನಾಮೆ ಪತ್ರ ಕಳುಹಿಸಿದರು. ಅಮಿತ್ ಶಾ ರಾಜೀನಾಮೆ ನೀಡಿದ್ದಾರೆ ಎಂದು ಸ್ವತಃ ಮೋದಿಯೇ ಘೋಷಿಸಿದರು. ಆ ವೇಳೆ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ಭಾಗವಹಿಸಲು ಮೋದಿ ದೆಹಲಿಗೆ ಬಂದಿದ್ದರು. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ವಿರುದ್ಧದ ಆರೋಪಗಳು ಸುಳ್ಳು. ಆದರೆ ರಾಜಕೀಯ ಸಂಪ್ರದಾಯದ ಉನ್ನತ ಸಂಪ್ರದಾಯವನ್ನು ಅನುಸರಿಸಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ ಎಂದು ಹೇಳಿದರು.

2010ರ ಜುಲೈ 25ರಂದು ಅಮಿತ್ ಶಾ ಸಿಬಿಐ ನ್ಯಾಯಾಲಯದ ಮುಂದೆ ಶರಣಾದರು. ಅಂದು ಮಧ್ಯಾಹ್ನ ಗಾಂಧಿನಗರದಲ್ಲಿರುವ ಸಿಬಿಐ ಕಚೇರಿ ತಲುಪಿದಾಗ ಬೆರಳೆಣಿಕೆಯಷ್ಟು ಕಾರ್ಯಕರ್ತರು ಮಾತ್ರ ಜೊತೆಗಿದ್ದರು. ಸಿಬಿಐ ವಿರುದ್ಧ ಯಾವುದೇ ಘೋಷಣೆಗಳನ್ನು ಎತ್ತಲಿಲ್ಲ. ಆದರೆ, ರಾಹುಲ್ ಗಾಂಧಿಯನ್ನು ಇನ್ನೂ ಬಂಧಿಸಿಲ್ಲ. ಅವರನ್ನು ವಿಚಾರಣೆಗೆ ಬರಲು ಹೇಳಿದ್ದಕ್ಕೆ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದೆ.

ಇದನ್ನೂ ಓದಿ: National Herald Case: ಏನಿದು ನ್ಯಾಷನಲ್ ಹೆರಾಲ್ಡ್​ ಪ್ರಕರಣ? ಈ ಕೇಸಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪಾತ್ರವೇನು?

ಗುಜರಾತ್‌ನಲ್ಲಿ ಕಾರಾಗೃಹ ಇಲಾಖೆಯ ಸಚಿವರಾಗಿದ್ದ ಅಮಿತ್ ಶಾ ಅವರನ್ನು ಎರಡು ತಿಂಗಳಿಗೂ ಹೆಚ್ಚು ಕಾಲ ಅದೇ ರಾಜ್ಯದ ಸಾಬರಮತಿ ಜೈಲಿನಲ್ಲಿ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ನಂತರ ಗುಜರಾತ್ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಎಸ್‌ಐಟಿ ಪ್ರಕರಣದಲ್ಲಿ ಮೋದಿ ಅವರನ್ನು ಗೌರವಯುತವಾಗಿ ದೋಷಮುಕ್ತಗೊಳಿಸಿದಂತೆ, ಸುದೀರ್ಘ ನ್ಯಾಯಾಲಯದ ಹೋರಾಟದ ನಂತರ ಅಮಿತ್ ಶಾ ಅವರನ್ನು ಖುಲಾಸೆಗೊಳಿಸಲಾಯಿತು. 2012ರ ವಿಧಾನಸಭಾ ಚುನಾವಣೆಯ ಮೊದಲು ರಾಜ್ಯವನ್ನು ಪ್ರವೇಶಿಸಲು ನ್ಯಾಯಾಲಯವು ಅವರಿಗೆ ಅನುಮತಿ ನೀಡುವ ಮೊದಲು ಅವರು ಸುಮಾರು 2 ವರ್ಷಗಳ ಕಾಲ ಗುಜರಾತ್‌ನ ಹೊರಗೆ ತಂಗಿದ್ದರು.

ಇದು ಕಾಂಗ್ರೆಸ್ ಪಾಲಿಗೆ ಕೆಟ್ಟ ಕಾಲ. 2014ರಿಂದ ಮೋದಿ ಪ್ರಧಾನಿಯಾಗಿದ್ದಾರೆ. 2019ರಿಂದ ಅಮಿತ್ ಶಾ ಅವರು ಗೃಹ ವ್ಯವಹಾರಗಳ ಸಚಿವರಾಗಿದ್ದಾರೆ. ಇಂದು ಕಾಂಗ್ರೆಸ್‌ನ ಹಲವು ಉನ್ನತ ನಾಯಕರು ಸೋನಿಯಾ ಮತ್ತು ರಾಹುಲ್ ಗಾಂಧಿ ಸೇರಿದಂತೆ ತನಿಖೆಗಳನ್ನು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತನಿಖಾ ಏಜೆನ್ಸಿಗಳ ದುರುಪಯೋಗದ ಆರೋಪಗಳನ್ನು ಈಗ ಕಾಂಗ್ರೆಸ್ ಮಾಡುತ್ತಿದೆ. ಒಂದೇ ವ್ಯತ್ಯಾಸವೆಂದರೆ ಮೋದಿ ಮತ್ತು ಶಾ ಇಬ್ಬರೂ ಇಂತಹ ತನಿಖೆಗಳನ್ನು ಪೂರ್ಣ ಧೈರ್ಯದಿಂದ ಎದುರಿಸಿದರು ಮತ್ತು ಕಾಂಗ್ರೆಸ್ ನಾಯಕರು ಗಲಾಟೆ ಮಾಡುತ್ತಿದ್ದಾರೆ. ಈಗ ಪ್ರಶ್ನೆ ಏನೆಂದರೆ, ಕಾಂಗ್ರೆಸ್​ನವರು ಶುದ್ಧರಾಗಿದ್ದರೆ ತನಿಖೆಗೆ ಏಕೆ ಹೆದರುತ್ತಿದ್ದಾರೆ?

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Tue, 21 June 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್