15-18 ವಯಸ್ಸಿನ ಮಕ್ಕಳಿಗೆ ಕೊವಿಡ್ ಲಸಿಕೆಗಾಗಿ CoWIN ಫ್ಲಾಟ್​​ಫಾರ್ಮ್‌ನಲ್ಲಿ ನೋಂದಣಿ ಹೇಗೆ?

15-18 ವಯಸ್ಸಿನ ಮಕ್ಕಳಿಗೆ ಕೊವಿಡ್ ಲಸಿಕೆಗಾಗಿ CoWIN ಫ್ಲಾಟ್​​ಫಾರ್ಮ್‌ನಲ್ಲಿ ನೋಂದಣಿ ಹೇಗೆ?
ಪ್ರಾತಿನಿಧಿಕ ಚಿತ್ರ

ಜನವರಿ 1 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಪಡೆಯಲು CoWIN ಆ್ಯಪ್‌ನಲ್ಲಿ ನೋಂದಾಯಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು CoWIN ಪ್ಲಾಟ್‌ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್.ಶರ್ಮಾ ತಿಳಿಸಿದ್ದಾರೆ.

TV9kannada Web Team

| Edited By: Rashmi Kallakatta

Dec 27, 2021 | 1:55 PM

ದೆಹಲಿ: 15-18 ವರ್ಷ ವಯಸ್ಸಿನ ಮಕ್ಕಳಿಗೆ ಕೊವಿಡ್-19 (Covid-19) ಲಸಿಕೆಗಳನ್ನು ಅನುಮತಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi)ಘೋಷಿಸಿದ ಎರಡು ದಿನಗಳ ನಂತರ ಕೊವಿನ್ ( CoWIN) ಪ್ಲಾಟ್‌ಫಾರ್ಮ್‌ನಲ್ಲಿ  ಲಸಿಕೆಗಳಿಗಾಗಿ ಹೇಗೆ ನೋಂದಾಯಿಸಬೇಕು ಎಂಬುದನ್ನು ಸರ್ಕಾರ ಸೋಮವಾರ ವಿವರಿಸಿದೆ. ಜನವರಿ 1 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಪಡೆಯಲು CoWIN ಆ್ಯಪ್‌ನಲ್ಲಿ ನೋಂದಾಯಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು CoWIN ಪ್ಲಾಟ್‌ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್.ಶರ್ಮಾ ತಿಳಿಸಿದ್ದಾರೆ.  “ನಾವು ನೋಂದಣಿಗಾಗಿ ಹೆಚ್ಚುವರಿ 10 ನೇ ಗುರುತಿನ ಚೀಟಿಯನ್ನು ಸೇರಿಸಿದ್ದೇವೆ. ವಿದ್ಯಾರ್ಥಿ ಗುರುತಿನ ಚೀಟಿ ಏಕೆಂದರೆ ಕೆಲವರು ಆಧಾರ್ ಅಥವಾ ಇತರ ಗುರುತಿನ ಕಾರ್ಡ್‌ಗಳನ್ನು ಹೊಂದಿಲ್ಲದಿರಬಹುದು (ಕೊವಿನ್ ಅಪ್ಲಿಕೇಶನ್‌ನಲ್ಲಿ ಲಸಿಕೆಗಾಗಿ ಮಕ್ಕಳ ನೋಂದಣಿಯನ್ನು ಖಚಿತಪಡಿಸಿಕೊಳ್ಳಲು) ಎಂದು ಅವರು ಹೇಳಿದರು.

ಆರಂಭಿಕ ವರದಿಗಳ ಪ್ರಕಾರ ಕೊವಿನ್ ಅಪ್ಲಿಕೇಶನ್‌ನಲ್ಲಿ ಮಕ್ಕಳ ನೋಂದಣಿ ವೇದಿಕೆಯು ವಯಸ್ಕರ ನೋಂದಣಿ ವೇದಿಕೆಗೆ ಹೋಲುತ್ತದೆ. 15-18 ವರ್ಷದೊಳಗಿನ ಮಕ್ಕಳು CoWIN ಆ್ಯಪ್‌ನಲ್ಲಿ ಅಪಾಯಿಂಟ್‌ಮೆಂಟ್ ಕಾಯ್ದಿರಿಸಲು ಅಥವಾ ಯಾವುದೇ ಲಸಿಕೆ ಕೇಂದ್ರಕ್ಕೆ ತೆರಳಲು ಮತ್ತು ಅಗತ್ಯ ಪೋಷಕ ದಾಖಲೆಗಳನ್ನು ಒದಗಿಸಿದ ನಂತರ ಲಸಿಕೆಯನ್ನು ಪಡೆಯಲು ಸಾಧ್ಯವಾಗುತ್ತದೆ.

ವಾರಾಂತ್ಯದಲ್ಲಿ 15-18 ವರ್ಷದೊಳಗಿನ ಮಕ್ಕಳು ಸಹ ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದರು. ಒಮಿಕ್ರಾನ್‌ನ ಆತಂಕದ ಮಧ್ಯೆಯೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಬದಲಾದ ನಿಯಮಗಳೊಂದಿಗೆ 2007 ರ ಮೊದಲು ಜನಿಸಿದ ಎಲ್ಲರಿಗೂ ಜನವರಿ 1 ರಿಂದ ಲಸಿಕೆಯನ್ನು ಪಡೆಯಲು ಸಾಧ್ಯವಾಗುತ್ತದೆ.

15ರಿಂದ 18 ವರ್ಷದ ಮಕ್ಕಳಿಗೆ ದೇಶದಲ್ಲಿ ಲಸಿಕೆ ನೀಡುತ್ತೇವೆ. 3ನೇ ಜನವರಿ ಸೋಮವಾರದಿಂದ ಮಕ್ಕಳಿಗೆ ಲಸಿಕೆ ವಿತರಣೆ ಆರಂಭವಾಗಲಿದೆ. ಆರೋಗ್ಯ ಕಾರ್ಯಕರ್ತರಿಗೆ ಜನವರಿ 10ರಿಂದ ಬೂಸ್ಟರ್​ ಡೋಸ್ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಡಿಸೆಂಬರ್ 25ರಂದು  ದೇಶವನ್ನು ಉದ್ದೇಶಿಸಿ ತುರ್ತು ಭಾಷಣ ಮಾಡಿದ ಪ್ರಧಾನಿ, ಒಮಿಕ್ರಾನ್ ಬಗ್ಗೆ ಆತಂಕಿತರಾಗಬೇಡಿ, ಆದರೆ ಎಚ್ಚರ ವಹಿಸಿ ಎಂದು ಕಿವಿಮಾತು ಹೇಳಿದರು.

ಶಾಲಾ, ಕಾಲೇಜುಗಳಿಗೆ ತೆರಳಿ ಮಕ್ಕಳಿಗೆ ವ್ಯಾಕ್ಸಿನ್‌ ನೀಡುತ್ತೇವೆ. ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ ಪ್ರಿಕಾಶನ್ ಡೋಸ್ (ಮುಂಜಾಗರೂಕತೆ ಲಸಿಕೆ) ನೀಡುತ್ತೇವೆ. ದೇಶದಲ್ಲಿ ಲಸಿಕಾಕರಣ ಪ್ರಕ್ರಿಯೆ ಆರಂಭವಾಗಿ 11 ತಿಂಗಳಾಗಿದೆ. ಸಾಮೂಹಿಕ ಇಚ್ಛಾಶಕ್ತಿಯಿಂದ ಕೊರೊನಾ ವಿರುದ್ಧ ನಾವು ಹೋರಾಟ ಮುಂದುವರಿಸಬೇಕಿದೆ. ಕೊವಿಡ್, ಒಮಿಕ್ರಾನ್ ಬಗ್ಗೆ ಆತಂಕಬೇಡ, ಎಚ್ಚರಿಕೆ ಇರಲಿ. ದೇಶದಲ್ಲಿ ಈವರೆಗೆ 141 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಶೇ 61ರಷ್ಟು ಯುವಕರಿಗೆ ಲಸಿಕೆ ನೀಡಲಾಗಿದೆ. ಜನರನ್ನು ಆರೋಗ್ಯವಾಗಿ ಇರಿಸಲು ನಿರಂತರ ಶ್ರಮಿಸುತ್ತಿದ್ದೇವೆ. ಲಸಿಕಾ ಅಭಿಯಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ:   15ರಿಂದ 18 ವರ್ಷದ ಮಕ್ಕಳಿಕೆ ಲಸಿಕೆ; ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್

ಇದನ್ನೂ ಓದಿ: PM Narendra Modi Speech: 15 ವರ್ಷ ದಾಟಿದ ಮಕ್ಕಳಿಗೆ ಲಸಿಕೆ, ಜನವರಿ 3ರಿಂದ ಜಾರಿ: ನರೇಂದ್ರ ಮೋದಿ

Follow us on

Related Stories

Most Read Stories

Click on your DTH Provider to Add TV9 Kannada