Howrah Tragedy: ಕಳ್ಳಭಟ್ಟಿ ಸೇವಿಸಿ ಹೌರಾದಲ್ಲಿ 7 ಮಂದಿ ಸಾವು, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
ಮಂಗಳವಾರ ರಾತ್ರಿ ಅಕ್ರಮ ಬಾರ್‌ನಲ್ಲಿ ಇವರೆಲ್ಲರೂ ಆಲ್ಕೋಹಾಲ್ ಸೇವಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅದಾದ ಬಳಿಕ ಅನೇಕರು ಅಸ್ವಸ್ಥಗೊಂಡಿದ್ದರು. ಇಂದು ಬೆಳಿಗ್ಗೆ 7 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೌರಾ: ಪಶ್ಚಿಮ ಬಂಗಾಳದ ಹೌರಾದಲ್ಲಿ ಕಳ್ಳಭಟ್ಟಿ (country liquor) ಸೇವಿಸಿ 7 ಮಂದಿ ಮೃತಪಟ್ಟಿರುವ ಘಟನೆ ಇಂದು (ಬುಧವಾರ) ಬೆಳಗ್ಗೆ ನಡೆದಿದೆ. ಈ ದುರಂತದಲ್ಲಿ 20 ಜನರು ಅಸ್ವಸ್ಥರಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಮಂಗಳವಾರ ರಾತ್ರಿ ಅಕ್ರಮ ಬಾರ್‌ನಲ್ಲಿ ಇವರೆಲ್ಲರೂ ಆಲ್ಕೋಹಾಲ್ ಸೇವಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅದಾದ ಬಳಿಕ ಅನೇಕರು ಅಸ್ವಸ್ಥಗೊಂಡಿದ್ದರು. ಇಂದು ಬೆಳಿಗ್ಗೆ 7 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ವರ್ಗಾಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.
ಇಂದು ಬೆಳಗ್ಗೆ ನಡೆದ ಈ ಭೀಕರ ಘಟನೆಯ ನಂತರ ಘುಸುರಿ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮಾಲಿಪಂಚ್ಘೋರಾ ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ರೈಲ್ವೆ ಮಾರ್ಗದ ಪಕ್ಕದಲ್ಲಿ ಹುಕ್ಕಾ ಪಾಯಿಂಟ್ ಇದೆ ಎಂದು ಸ್ಥಳೀಯರು ಹೇಳಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂದಿಯ ಸಹಕಾರದಲ್ಲೇ ಹುಕ್ಕಾ ಪಾಯಿಂಟ್ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಆದರೆ, ಪೊಲೀಸರು ಆ ಆರೋಪವನ್ನು ನಿರಾಕರಿಸಿದ್ದಾರೆ.
WB | 7 people dead, several others ill allegedly after consuming country liquor in Howrah
7 people have died, 6 people under medical treatment in a hospital; Cause of death can be ascertained after post-mortem, says Howrah Police Commissioner Praveen Kumar Tripathi pic.twitter.com/R9ty65k3EC
— ANI (@ANI) July 20, 2022
ಇಂದು ಬೆಳಗ್ಗೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಸ್ಥಳೀಯರು, ಮಹಿಳೆಯರು ಅಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಮೀಪದ ಮದ್ಯದಂಗಡಿಯನ್ನೂ ಧ್ವಂಸಗೊಳಿಸಲಾಗಿದೆ.