Visakhapatnam Fire: ವಿಶಾಖಪಟ್ಟಣಂ ಬಂದರಿನಲ್ಲಿ ಭಾರಿ ಅಗ್ನಿ ಅವಘಡ, 40 ಹಡಗುಗಳು ಸುಟ್ಟು ಭಸ್ಮ
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 40 ಮೀನುಗಾರಿಕಾ ಹಡಗುಗಳು ಸುಟ್ಟು ಭಸ್ಮವಾಗಿವೆ. ರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40 ಹಡಗುಗಳಿಗೆ ವ್ಯಾಪಿಸಿತ್ತು.
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 40 ಮೀನುಗಾರಿಕಾ ಹಡಗುಗಳು ಸುಟ್ಟು ಭಸ್ಮವಾಗಿವೆ. ರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40 ಹಡಗುಗಳಿಗೆ ವ್ಯಾಪಿಸಿತ್ತು.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ತಕ್ಷಣವೇ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿಪರೀತ ಶಾಖದ ಕಾರಣ ಬೋಟ್ನಲ್ಲಿ ಇರಿಸಲಾಗಿದ್ದ ಎಲ್ಪಿಜಿ ಸಿಲಿಂಡರ್ಗಳು ಸ್ಫೋಟಗೊಂಡಿದ್ದು, ಬೆಂಕಿ ಹರಡಲು ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಮತ್ತಷ್ಟು ಓದಿ:ಬೆಂಗಳೂರು: ಕಟ್ಟಡದ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ, ಆರನೇ ಮಹಡಿಗೂ ಹಬ್ಬಿದ ಬೆಂಕಿ
ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಯಾವುದೇ ಪ್ರಾಣಹಾನಿ ಅಥವಾ ಗಾಯದ ವರದಿಯಾಗಿಲ್ಲ.
#WATCH | Andhra Pradesh: A massive fire broke out in Visakhapatnam fishing harbour. The fire that started with the first boat eventually spread to 40 boats. Several fire tenders reached the spot to control the fire. Police have registered a case and are investigating the matter.… pic.twitter.com/1ZYgiWInOz
— ANI (@ANI) November 20, 2023
ಕೆಲವು ವಿರೋಧಿಗಳು ಹಡುಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಮೀನುಗಾರರು ಶಂಕಿಸಿದ್ದಾರೆ. ರಾತ್ರಿ 11:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಆನಂದ ರೆಡ್ಡಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:48 am, Mon, 20 November 23