Visakhapatnam Fire: ವಿಶಾಖಪಟ್ಟಣಂ ಬಂದರಿನಲ್ಲಿ ಭಾರಿ ಅಗ್ನಿ ಅವಘಡ, 40 ಹಡಗುಗಳು ಸುಟ್ಟು ಭಸ್ಮ

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 40 ಮೀನುಗಾರಿಕಾ ಹಡಗುಗಳು ಸುಟ್ಟು ಭಸ್ಮವಾಗಿವೆ. ರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40 ಹಡಗುಗಳಿಗೆ ವ್ಯಾಪಿಸಿತ್ತು.

Visakhapatnam Fire: ವಿಶಾಖಪಟ್ಟಣಂ ಬಂದರಿನಲ್ಲಿ ಭಾರಿ ಅಗ್ನಿ ಅವಘಡ, 40 ಹಡಗುಗಳು ಸುಟ್ಟು ಭಸ್ಮ
ಹಡಗುಗಳು
Edited By:

Updated on: Nov 20, 2023 | 9:49 AM

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 40 ಮೀನುಗಾರಿಕಾ ಹಡಗುಗಳು ಸುಟ್ಟು ಭಸ್ಮವಾಗಿವೆ. ರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40 ಹಡಗುಗಳಿಗೆ ವ್ಯಾಪಿಸಿತ್ತು.

ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ತಕ್ಷಣವೇ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿಪರೀತ ಶಾಖದ ಕಾರಣ ಬೋಟ್​ನಲ್ಲಿ ಇರಿಸಲಾಗಿದ್ದ ಎಲ್​ಪಿಜಿ ಸಿಲಿಂಡರ್​ಗಳು ಸ್ಫೋಟಗೊಂಡಿದ್ದು, ಬೆಂಕಿ ಹರಡಲು ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಓದಿ:ಬೆಂಗಳೂರು: ಕಟ್ಟಡದ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ, ಆರನೇ ಮಹಡಿಗೂ ಹಬ್ಬಿದ ಬೆಂಕಿ

ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಯಾವುದೇ ಪ್ರಾಣಹಾನಿ ಅಥವಾ ಗಾಯದ ವರದಿಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:48 am, Mon, 20 November 23