ರಾಜಸ್ಥಾನ: ವಿದ್ಯಾರ್ಥಿನಿಯ ನೀರಿನ ಬಾಟಲಿಯಲ್ಲಿ ಮೂತ್ರ ತುಂಬಿಸಿದ ಸಹಪಾಠಿಗಳು; ಗ್ರಾಮಸ್ಥರಿಂದ ಪ್ರತಿಭಟನೆ, ಪೊಲೀಸರಿಂದ ಲಾಠಿ ಪ್ರಹಾರ

ಸರ್ಕಾರಿ ಹಿರಿಯ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಬಾಲಕಿ ಶುಕ್ರವಾರ ತರಗತಿಯಲ್ಲಿ ತನ್ನ ಬ್ಯಾಗ್ ಮತ್ತು ಬಾಟಲಿಯನ್ನು ಬಿಟ್ಟು ಊಟಕ್ಕೆಂದು ತನ್ನ ಮನೆಗೆ ಹೋಗಿದ್ದಳು.ಅವಳು ಹಿಂತಿರುಗಿ ಬಾಟಲಿಯಿಂದ ಕುಡಿಯುತ್ತಿದ್ದಾಗ ದುರ್ವಾಸನೆ ಬಂತು. ಕೆಲವು ಹುಡುಗರು ಬಾಟಲಿಯಲ್ಲಿ ಮೂತ್ರ ಬೆರೆಸಿದ್ದಾರೆ ಎಂದು ಪತ್ತೆಯಾಯಿತು...

ರಾಜಸ್ಥಾನ: ವಿದ್ಯಾರ್ಥಿನಿಯ ನೀರಿನ ಬಾಟಲಿಯಲ್ಲಿ ಮೂತ್ರ ತುಂಬಿಸಿದ ಸಹಪಾಠಿಗಳು; ಗ್ರಾಮಸ್ಥರಿಂದ ಪ್ರತಿಭಟನೆ, ಪೊಲೀಸರಿಂದ ಲಾಠಿ ಪ್ರಹಾರ
ರಾಜಸ್ಥಾನದಲ್ಲಿ ಗ್ರಾಮಸ್ಥರ ನಡುವೆ ಹೊಡೆದಾಟ
Follow us
ರಶ್ಮಿ ಕಲ್ಲಕಟ್ಟ
|

Updated on:Jul 31, 2023 | 8:24 PM

ಜೈಪುರ ಜುಲೈ31: ರಾಜಸ್ಥಾನದ (Rajasthan) ಹಳ್ಳಿಯೊಂದರಲ್ಲಿ ಕೆಲವು ಶಾಲಾ ವಿದ್ಯಾರ್ಥಿಗಳು ಬೇರೊಂದು ಸಮುದಾಯದ ಬಾಲಕಿಯ ನೀರಿನ ಬಾಟಲಿಗೆ ಮೂತ್ರವನ್ನು ತುಂಬಿಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಸೋಮವಾರ ಇಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಹುಡುಗರು ತಮ್ಮ ಸಹಪಾಠಿಯ ಬ್ಯಾಗ್‌ನೊಳಗೆ ಪ್ರೇಮ ಪತ್ರವನ್ನೂ ಹಾಕಿದ್ದಾರೆ. ಇದರಿಂದ ಕೋಪಗೊಂಡ ಗ್ರಾಮಸ್ಥರು ಬಾಲಕನ ಮನೆಗೆ ನುಗ್ಗಿದ್ದಾರೆ. ಈ ವೇಳೆ ತಡೆದ ಪೊಲೀಸರ ಮೇಲೆಯೂ ಹಲ್ಲೆ ನಡೆದಿದೆ. ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಕೆಲವು ಪುರುಷರು ದೊಣ್ಣೆಗಳನ್ನು ಹಿಡಿದು ನಿಂತಿದ್ದು, ಪೊಲೀಸರ ತಂಡ ಗುಂಪನ್ನು ಚದುರಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಸರ್ಕಾರಿ ಹಿರಿಯ ಪ್ರೌಢಶಾಲೆಯ ವಿದ್ಯಾರ್ಥಿನಿ ಶುಕ್ರವಾರ ತರಗತಿಯಲ್ಲಿ ತನ್ನ ಬ್ಯಾಗ್ ಮತ್ತು ಬಾಟಲಿಯನ್ನು ಬಿಟ್ಟು ಊಟಕ್ಕೆಂದು ತನ್ನ ಮನೆಗೆ ಹೋಗಿದ್ದಳು.ಅವಳು ಹಿಂತಿರುಗಿ ಬಾಟಲಿಯಿಂದ ಕುಡಿಯುತ್ತಿದ್ದಾಗ ದುರ್ವಾಸನೆ ಬಂತು. ಕೆಲವು ಹುಡುಗರು ಬಾಟಲಿಯಲ್ಲಿ ಮೂತ್ರ ಬೆರೆಸಿದ್ದಾರೆ ಎಂದು ಪತ್ತೆಯಾಯಿತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಘನಶ್ಯಾಮ್ ಶರ್ಮಾ ಹೇಳಿದ್ದಾರೆ.

ಈ ಬಗ್ಗೆ ಬಾಲಕಿ ಪ್ರಾಂಶುಪಾಲರಿಗೆ ದೂರು ನೀಡಿದ್ದು, ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಇಂದು ಶಾಲೆ ತೆರೆದಾಗ ತಹಸೀಲ್ದಾರ್, ಲುಹಾರಿಯಾ ಪೊಲೀಸ್ ಠಾಣೆಯ ಉಸ್ತುವಾರಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರ ಬಳಿ ಸಮಸ್ಯೆ ತೋಡಿಕೊಂಡರು. ಆದರೆ, ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದ ಕಾರಣ ಗ್ರಾಮಸ್ಥರು ಬಾಲಕರ ಜಾಗಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿದರು.

ಇದನ್ನೂ ಓದಿ: ಹರ್ಯಾಣದ ನುಹ್‌ನಲ್ಲಿ ಹಿಂದೂ ಸಂಘಟನೆ ಆಯೋಜಿಸಿದ ಯಾತ್ರೆ ವೇಳೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಬಾಲಕಿ ಪೊಲೀಸರಿಗೆ ಔಪಚಾರಿಕವಾಗಿ ದೂರು ನೀಡದ ಕಾರಣ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:23 pm, Mon, 31 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್