AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ನಿಂದ ಹೊಡೆದು ಗಂಡನನ್ನು ಕೊಂದ ಹೆಂಡತಿ! ಅಚ್ಚರಿಯಾದರೂ ಇದು ಸತ್ಯ

ಜಗಳವೇ ಆಡದ ಗಂಡ-ಹೆಂಡತಿ ಈ ಭೂಮಿಯ ಮೇಲೆ ಇರಲು ಸಾಧ್ಯವೇ ಇಲ್ಲ. ಸಂಸಾರ ಎಂದಮೇಲೆ ಒಂದು ಮಾತು ಬರುತ್ತದೆ, ಒಂದು ಮಾತು ಹೋಗುತ್ತದೆ. ಹಿಂದಿನ ಕಾಲದಲ್ಲಾದರೆ ಈ ಒಂದೋ ಎರಡೋ ಮಾತು ದೊಡ್ಡ ವಿಷಯವಾಗುತ್ತಿರಲಿಲ್ಲ. ಆದರೆ, ಈಗಿನ ಕಾಲದಲ್ಲಿ ಸಣ್ಣ ಪುಟ್ಟ ವಿಷಯಗಳೂ ದೊಡ್ಡ ಜಗಳಕ್ಕೆ ನಾಂದಿ ಹಾಡಿ, ಕೊಲೆಯವರೆಗೂ ತಂದು ನಿಲ್ಲಿಸಿದ ಉದಾಹರಣೆಗಳು ಸಾಕಷ್ಟಿವೆ. ಒಡಿಶಾದಲ್ಲಿ ನೀವು ಇದುವರೆಗೂ ಕಂಡು-ಕೇಳಿರದ ರೀತಿಯ ಘಟನೆಯೊಂದು ನಡೆದಿದೆ. ಜಗಳವಾಡಿದ ನಂತರ ಕೋಪದಿಂದ ಹೆಂಡತಿ ತನ್ನ ಗಂಡನಿಗೆ ಮೊಬೈಲ್​ನಿಂದ ಹೊಡೆದಿದ್ದಾಳೆ. ಆ ಹೊಡೆತಕ್ಕೆ ಆತ ಸತ್ತುಹೋಗಿದ್ದಾನೆ!

ಮೊಬೈಲ್​ನಿಂದ ಹೊಡೆದು ಗಂಡನನ್ನು ಕೊಂದ ಹೆಂಡತಿ! ಅಚ್ಚರಿಯಾದರೂ ಇದು ಸತ್ಯ
Wife Killed Husband By Hitting Head With MobileImage Credit source: x
ಸುಷ್ಮಾ ಚಕ್ರೆ
|

Updated on: Jul 13, 2026 | 4:32 PM

Share

ಮುಖ್ಯಾಂಶಗಳು

  • ಜಗಳದ ವೇಳೆ ಮೊಬೈಲ್​ನಿಂದ ಗಂಡನ ತಲೆಗೆ ಹೊಡೆದ ಹೆಂಡತಿ
  • ಹೆಂಡತಿಯ ಏಟಿಗೆ ಮೃತಪಟ್ಟ ಗಂಡ
  • ಮೊಬೈಲ್​ನಿಂದ ಪ್ರಾಣ ಕಳೆದುಕೊಂಡ ಗಂಡ

ಬೋಲಾಂಗೀರ್, ಜುಲೈ 13: ಯಾರ ಸಾವು ಹೇಗಾಗಬೇಕೆಂದು ದೇವರು ನಿರ್ಧರಿಸಿರುತ್ತಾನೋ ಯಾರಿಗೂ ಗೊತ್ತಿಲ್ಲ. ಕೆಲವೊಮ್ಮೆ ಕಲ್ಲುಬಂಡೆಯೇ ಮೈಮೇಲೆ ಬಿದ್ದರೂ ಅದೃಷ್ಟವಶಾತ್ ಪಾರಾಗಿಬಿಡುತ್ತಾರೆ. ಇನ್ನು ಕೆಲವೊಮ್ಮೆ ತಲೆಗೆ ಮೊಬೈಲ್ (Mobile) ತಾಗಿದರೂ ಸಾವನ್ನಪ್ಪಿಬಿಡುತ್ತಾರೆ! ನಂಬಲು ಕಷ್ಟವಾದರೂ ಇದು ಸತ್ಯ. ಒಡಿಶಾದಲ್ಲಿ ಕೌಟುಂಬಿಕ ಕಲಹದ ವೇಳೆ ಪತ್ನಿ ತನ್ನ ಮೊಬೈಲ್ ಫೋನ್‌ನಿಂದ ಗಂಡನ ತಲೆಗೆ ಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

ಜಗಳದ ವೇಳೆ ಮೊಬೈಲ್‌ನಿಂದ ಹಲ್ಲೆ:

ಪ್ರಾಥಮಿಕ ವರದಿಗಳ ಪ್ರಕಾರ, ಶನಿವಾರ ದಂಪತಿಯ ನಡುವೆ ತಮ್ಮ ಮನೆಯಲ್ಲಿ ಸಣ್ಣದಾಗಿ ಆರಂಭವಾದ ಕೌಟುಂಬಿಕ ಜಗಳ ತಾರಕಕ್ಕೇರಿತ್ತು. ಈ ತೀವ್ರ ಮಾತಿನ ಚಕಮಕಿಯ ನಡುವೆ, ಕೋಪಗೊಂಡ ಪತ್ನಿ ತನ್ನ ಕೈಯಲ್ಲಿದ್ದ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಬಲವಾಗಿ ಹೊಡೆದಿದ್ದಾಳೆ. ಇದರಿಂದಾಗಿ ಪತಿಯ ತಲೆಗೆ ಗಂಭೀರ ಪೆಟ್ಟಾಗಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಗುಟ್ಟಾಗಿ ಮದುವೆಯಾಗಿದ್ದಳಾ ಸಿಯಾ? ಕೇತನ್ ಕೊಲೆ ಪ್ರಕರಣದಲ್ಲಿ ಹೊಸ ರಹಸ್ಯ ಬಯಲು

ಆಸ್ಪತ್ರೆಯಿಂದ ಡಿಸ್ಚಾರ್ಜ್:

ಗಾಯಗೊಂಡಿದ್ದ ವ್ಯಕ್ತಿಯನ್ನು ಕುಟುಂಬಸ್ಥರು ತಕ್ಷಣವೇ ಬೋಲಾಂಗೀರ್‌ನಲ್ಲಿರುವ ಜಿಲ್ಲಾ ಕೇಂದ್ರ ಆಸ್ಪತ್ರೆಗೆ (DHH) ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದನ್ನು ಗಮನಿಸಿದ ವೈದ್ಯರು, ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದರು. ಆದರೆ, ಆಸ್ಪತ್ರೆಯಿಂದ ಮನೆಗೆ ತಲುಪಿದ ಕೆಲವೇ ದಿನಗಳಲ್ಲಿ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿತ್ತು. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಅವರನ್ನು ಮತ್ತೆ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: Haryana Shootout: ಗುರುಗ್ರಾಮ್​ನಲ್ಲಿ ಉದ್ಯಮಿ ಬಂಗಲೆ ಮೇಲೆ ಗುಂಡಿನ ಸುರಿಮಳೆ! ಪೊಲೀಸರ ಕೌಂಟರ್​ ಅಟ್ಯಾಕ್​ಗೆ ನಾಲ್ವರು ಬಲಿ

ಚಿಕಿತ್ಸೆ ಫಲಿಸದೆ ಸಾವು:

ವೈದ್ಯರು ಅವರನ್ನು ಉಳಿಸಲು ತಮ್ಮ ಅತ್ಯುತ್ತಮ ಪ್ರಯತ್ನಗಳನ್ನು ನಡೆಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಘಟನೆಯ ನಂತರ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪತ್ನಿ ಮೊಬೈಲ್‌ನಿಂದ ತಲೆಗೆ ಹೊಡೆದ ಆಘಾತದಿಂದಲೇ ಆಂತರಿಕ ರಕ್ತಸ್ರಾವವಾಗಿ ವ್ಯಕ್ತಿ ಮೃತಪಟ್ಟಿದ್ದಾರೆಯೇ ಅಥವಾ ಸಾವಿಗೆ ಬೇರೆನಾದರೂ ಕಾರಣವಿದೆಯೇ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ವರದಿ ಬಂದ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us