AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hydel Project Case: ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಮೇಲೆ ಸಿಬಿಐ ದಾಳಿ

Satya Pal Malik: ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ. ಹಾಗೂ 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಜಮ್ಮು - ಕಾಶ್ಮೀರದ ಪ್ರದೇಶದಲ್ಲಿ ಹೈಡಲ್ ಯೋಜನೆಗೆ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ಈ ದಾಳಿಯನ್ನು ನಡೆಸಲಾಗಿದೆ.

Hydel Project Case: ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಮೇಲೆ ಸಿಬಿಐ ದಾಳಿ
ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್
ಅಕ್ಷಯ್​ ಪಲ್ಲಮಜಲು​​
|

Updated on:Feb 22, 2024 | 11:31 AM

Share

ಜಮ್ಮು – ಕಾಶ್ಮೀರದ ಪ್ರದೇಶದಲ್ಲಿ ಹೈಡಲ್ ಯೋಜನೆಗೆ (hydel project ) ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ (Satya Pal Malik) ಅವರ ಮೇಲೆ ದಾಳಿ ನಡೆಸಿದೆ. ಹಾಗೂ 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್‌ನ (ಎಚ್‌ಇಪಿ) 2,200 ಕೋಟಿ ರೂ. ಮೊತ್ತದ ಸಿವಿಲ್ ಕಾಮಗಾರಿಗಳನ್ನು ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಿರು ಯೋಜನೆ, ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯ ಯೋಜನೆಯಾಗಿದ್ದು, ಇದಕ್ಕಾಗಿ ಆಗಸ್ಟ್ 23, 2018 ಮತ್ತು ಅಕ್ಟೋಬರ್ 30, 2019ರ ನಡುವೆ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿ ಸೇವೆ ಸಲ್ಲಿಸಿದ ಸತ್ಯ ಪಾಲ್ ಮಲಿಕ್ ಅವರು 624 ಮೆಗಾವ್ಯಾಟ್‌ಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಸಿಬಿಐ ತನ್ನ ದಾಖಲೆಯಲ್ಲಿ ತಿಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕಳೆದ ತಿಂಗಳು ದೆಹಲಿ ಮತ್ತು ಜಮ್ಮು – ಕಾಶ್ಮೀರದ ಸುಮಾರು ಎಂಟು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಹಾಗೂ 21 ಲಕ್ಷ ರೂ. ಗೂ ಅಧಿಕ ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ಆಸ್ತಿ ದಾಖಲೆಗಳು ಮತ್ತು ದೋಷಾರೋಪಣೆ ದಾಖಲೆಗಳನ್ನು ಸಿಬಿಐ ವಶಪಡಿಸಿಕೊಂಡಿದೆ .

ಇನ್ನು ಖಾಸಗಿ ಕಂಪನಿಯ ಅಂದಿನ ಅಧ್ಯಕ್ಷ, ಎಂಡಿ ಮತ್ತು ನಿರ್ದೇಶಕರು ಹಾಗೂ ಇತರರ ವಿರುದ್ಧ ಜಮ್ಮು-ಕಾಶ್ಮೀರ ಸರ್ಕಾರದಿಂದ ಪಡೆದ ಉಲ್ಲೇಖದ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಕಿರು ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಈ ಕಂಪನಿ ಕಾಮಗಾರಿಗಳ ಇ-ಟೆಂಡರ್ ಮಾಡುವ ಕುರಿತು ಮಾರ್ಗಸೂಚಿಗಳನ್ನು ಅನುಸರಿಸಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಿಲಯನ್ಸ್ ವಿಮಾ ಭ್ರಷ್ಟಾಚಾರ ಪ್ರಕರಣ: ಜಮ್ಮು, ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್​ಗೆ ಸಿಬಿಐ ಸಮನ್ಸ್

ಇನ್ನು ಈ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಿದ ನಂತರ ಇ-ಟೆಂಡರ್ ಮೂಲಕ ಮರು ಟೆಂಡರ್ ಮಾಡಲು CVPPPL (ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್) ನ 47ನೇ ಬೋರ್ಡ್ ಸಭೆಯಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು, ಅದರೂ ಅದನ್ನು ಕಾರ್ಯಗತಗೊಳಿಸಲಾಗಿಲ್ಲ. ನಂತರ 48ನೇ ಬೋರ್ಡ್ ಮೀಟಿಂಗ್​​ನಲ್ಲಿ ಈ ಟೆಂಡರ್​​ನ್ನು ಅಂತಿಮವಾಗಿ ಪಟೇಲ್ ಇಂಜಿನಿಯರಿಂಗ್ ಲಿಮಿಟೆಡ್‌ಗೆ ನೀಡಲಾಯಿತು ಎಂದು ಎಫ್‌ಐಆರ್​​ನಲ್ಲಿ ಆರೋಪಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:48 am, Thu, 22 February 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​