Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಸ್ಸಿನಡಿಗಾದ ವ್ಯಕ್ತಿ

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ಸಾವ್ನನ್ನಪ್ಪಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಬಾಲನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ವ್ಯಕ್ತಿಯನ್ನು ಸಂಚಾರ ಪೊಲೀಸ ತಪಾಸಣೆಗಾಗಿ ತಡೆದರು. ಬೈಕ್ ಸವಾರ ಪರಾರಿಯಾಗಲು ಯತ್ನಿಸಿದ್ದ ಆಗ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾನೆ, ಕೂಡಲೇ ಹಿಂದಿನಿಂದ ಬಸ್ ಆತನ ಮೇಲೆ ಹರಿದಿದೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯ ನಂತರ, ಸ್ಥಳೀಯ ನಿವಾಸಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಸ್ಸಿನಡಿಗಾದ ವ್ಯಕ್ತಿ
ಮೃತ ವ್ಯಕ್ತಿ
Follow us
ನಯನಾ ರಾಜೀವ್
|

Updated on: Apr 14, 2025 | 10:39 AM

ಹೈದರಾಬಾದ್, ಏಪ್ರಿಲ್ 14: ಟ್ರಾಫಿಕ್ ಪೊಲೀಸ(Traffic Police)ರಿಂದ ತಪ್ಪಿಸಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಜೀವವನ್ನೇ ಬೆಲೆಯಾಗಿ ತೆತ್ತಿರುವ ಘಟನೆ ಹೈದರಾಬಾದ್(Hyderabad)​ನಲ್ಲಿ ನಡೆದಿದೆ. ಎಂದಿನಿಂದ ಟ್ರಾಫಿಕ್ ಪೊಲೀಸರು ಅವರ ಕೆಲಸ ಮಾಡುತ್ತಿದ್ದರು. ವಾಹನಗಳ ತಪಾಸಣೆ ನಡೆಸುತ್ತಿದ್ದರು. ಸಿಗ್ನಲ್ ಬಳಿ ಹೋಗುತ್ತಿದ್ದ ಬೈಕ್ ಸವಾರನನ್ನು ತಡೆದಿದ್ದಾರೆ ಆತ ತಪ್ಪಿಸಿಕೊಳ್ಳಲು ಹೋಗಿ ಹಿಂದೆ ಬರುತ್ತಿದ್ದ ಬಸ್ಸಿನಡಿಗಾಗಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಬಾಲನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ವ್ಯಕ್ತಿಯನ್ನು ಸಂಚಾರ ಪೊಲೀಸ ತಪಾಸಣೆಗಾಗಿ ತಡೆದರು. ಬೈಕ್ ಸವಾರ ಪರಾರಿಯಾಗಲು ಯತ್ನಿಸಿದ್ದ ಆಗ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾನೆ, ಕೂಡಲೇ ಹಿಂದಿನಿಂದ ಬಸ್ ಆತನ ಮೇಲೆ ಹರಿದಿದೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯ ನಂತರ, ಸ್ಥಳೀಯ ನಿವಾಸಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಮತ್ತು ಅಪಘಾತಕ್ಕೆ ಸಂಚಾರಿ ಕಾನ್‌ಸ್ಟೆಬಲ್ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪ ಹೊರಿಸಿದರು. ಕಾನ್‌ಸ್ಟೆಬಲ್ ಕುಡಿದಿದ್ದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಬೈಕ್ ಸವಾರನೇ ಸ್ಕಿಡ್ ಆಗಿರುವುದು ಬೆಳಕಿಗೆ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ
Image
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
Image
ಬೆಂಗಳೂರು: ಫ್ಲೈಓವರ್​ಗಳಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ
Image
ಹಣಕ್ಕೆ ಒತ್ತಾಯಿಸಿ ಬೈಕ್​ ಸವಾರನ ಮೇಲೆ ಟ್ರಾಫಿಕ್​ ಪೊಲೀಸ್​ ಹಲ್ಲೆ ಆರೋಪ
Image
ಫೋನ್ ಪೇ, ಗೂಗಲ್​ ಪೇಯಲ್ಲೇ ಲಂಚ ತಗೊಳ್ತಾರೆ ಬೆಂಗಳೂರು ಟ್ರಾಫಿಕ್ ಪೊಲೀಸ್!

ಮತ್ತಷ್ಟು ಓದಿ: ಶಿವಮೊಗ್ಗ: ಮಠದಲ್ಲಿ 300 ಕೋಟಿ ರೂ ದರೋಡೆಗೆ ಸ್ಕೇಚ್, ಸಿಕ್ಕಿದ್ದು 50 ಸಾವಿರ ರೂ, 12 ಜನರ ಬಂಧನ

ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಬಾಲನಗರ ಪೊಲೀಸ್ ಠಾಣೆಯಲ್ಲಿ ಸಂಚಾರ ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರು ಮಧ್ಯಪ್ರವೇಶಿಸಿ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ಈ ಪ್ರಕ್ರಿಯೆಯಲ್ಲಿ ಹಲವಾರು ಜನರು ಗಾಯಗೊಂಡರು. ಪೊಲೀಸರ ನಿರ್ಲಕ್ಷ್ಯವನ್ನು ಆರೋಪಿಸಿ ನ್ಯಾಯಕ್ಕಾಗಿ ಒತ್ತಾಯಿಸುತ್ತಾ ಬೋಸುಬಾಬು ಅವರ ಕುಟುಂಬವೂ ಪ್ರತಿಭಟನೆಯಲ್ಲಿ ಸೇರಿಕೊಂಡಿತು.

ಡಿಸಿಪಿ ಮತ್ತು ಎಸಿಪಿ ಕೂಡ ಭಾಗಿಯಾಗಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು, ಈ ಪ್ರದೇಶದಲ್ಲಿ ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್