AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮುಕರ ಹೆಡೆ ಮುರಿ ಕಟ್ಟಿದ ಕನ್ನಡಿಗ, ಅತ್ಯಾಚಾರ ನಡೆದ ಸ್ಥಳದಲ್ಲೇ ಆರೋಪಿಗಳ ಎನ್‌ಕೌಂಟರ್

ಹೈದರಾಬಾದ್‌: ಹೈದರಾಬಾದ್‌ನಲ್ಲಿ ದಿಶಾ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಎನ್‌ಕೌಂಟರ್ ಮಾಡಲಾಗಿದೆ. ಹೈದರಾಬಾದ್‌ನ ಶಾದ್‌ನಗರದಲ್ಲಿರುವ ಚಟಾನ್‌ಪಲ್ಲಿ ಬ್ರಿಡ್ಜ್ ಬಳಿ ಬೆಳಗ್ಗೆ 3.30ರ ಸುಮಾರಿಗೆ ಆರೋಪಿಗಳಾದ ಆರಿಫ್, ಶಿವ, ಚನ್ನಕೇಶವುಲು, ನವೀನ್ ಎನ್‌ಕೌಂಟರ್ ಮಾಡಲಾಗಿದೆ. ಆರೋಪಿಗಳನ್ನು ಸ್ಥಳ ಪರಿಶೀಲನೆಗೆ ಎಂದು ಅತ್ಯಾಚಾರವೆಸಗಿದ್ದ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾರೆ. ಆತ್ಮರಕ್ಷಣೆಗಾಗಿ ಪೊಲೀಸರು ನಾಲ್ವರು ಆರೋಪಿಗಳ ಮೇಲೆ ಗುಂಡುಹಾರಿಸಿದ್ದಾರೆ. ಕರ್ನಾಟಕದ ಹುಬ್ಬಳ್ಳಿ ಮೂಲದ ಸೈಬರಾದಾಬ್ ಪೊಲೀಸ್ ಆಯುಕ್ತ […]

ಕಾಮುಕರ ಹೆಡೆ ಮುರಿ ಕಟ್ಟಿದ ಕನ್ನಡಿಗ, ಅತ್ಯಾಚಾರ ನಡೆದ ಸ್ಥಳದಲ್ಲೇ ಆರೋಪಿಗಳ ಎನ್‌ಕೌಂಟರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 06, 2019 | 12:34 PM

Share

ಹೈದರಾಬಾದ್‌: ಹೈದರಾಬಾದ್‌ನಲ್ಲಿ ದಿಶಾ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಎನ್‌ಕೌಂಟರ್ ಮಾಡಲಾಗಿದೆ. ಹೈದರಾಬಾದ್‌ನ ಶಾದ್‌ನಗರದಲ್ಲಿರುವ ಚಟಾನ್‌ಪಲ್ಲಿ ಬ್ರಿಡ್ಜ್ ಬಳಿ ಬೆಳಗ್ಗೆ 3.30ರ ಸುಮಾರಿಗೆ ಆರೋಪಿಗಳಾದ ಆರಿಫ್, ಶಿವ, ಚನ್ನಕೇಶವುಲು, ನವೀನ್ ಎನ್‌ಕೌಂಟರ್ ಮಾಡಲಾಗಿದೆ.

ಆರೋಪಿಗಳನ್ನು ಸ್ಥಳ ಪರಿಶೀಲನೆಗೆ ಎಂದು ಅತ್ಯಾಚಾರವೆಸಗಿದ್ದ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾರೆ. ಆತ್ಮರಕ್ಷಣೆಗಾಗಿ ಪೊಲೀಸರು ನಾಲ್ವರು ಆರೋಪಿಗಳ ಮೇಲೆ ಗುಂಡುಹಾರಿಸಿದ್ದಾರೆ. ಕರ್ನಾಟಕದ ಹುಬ್ಬಳ್ಳಿ ಮೂಲದ ಸೈಬರಾದಾಬ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡದಿಂದ ಆರೋಪಿಗಳ ಮೇಲೆ ಎನ್‌ಕೌಂಟರ್ ಆಗಿದೆ.

ಘಟನೆ ಹಿನ್ನೆಲೆ: ನವೆಂಬರ್ 27ರಂದು ದಿಶಾ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ ನಡೆದಿತ್ತು. ನವೆಂಬರ್ 28ರಂದು ಪೊಲೀಸರು ಈ ಪ್ರಕರಣ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಅದೇ ತಿಂಗಳ 29ರಂದು ಶಾದ್‌ನಗರ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಸಿ 30ರಂದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಬಳಿಕ ಡಿಸೆಂಬರ್ 4ರಂದು ಪೊಲೀಸ್ ಕಸ್ಟಡಿಗೆ ನೀಡಿವಂತೆ ಆದೇಶ ನೀಡಲಾಗಿತ್ತು.

ನಿನ್ನೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು ಚರ್ಲಪಲ್ಲಿ ಜೈಲಿನಲ್ಲಿ ನಾಲ್ವರು ಆರೋಪಿಗಳ ವಿಚಾರಣೆ ಮಾಡಿದ್ದಾರೆ ಈ ವೇಳೆ ಆರೋಪಿಗಳು ನೀಡಿದ ಮಾಹಿತಿಯಂತೆ ದಿಶಾ ಫೋನ್ ವಶಕ್ಕೆ ಪಡೆದು ಘಟನಾ ಸ್ಥಳದಲ್ಲಿ ಮಹತ್ವದ ಸಾಕ್ಷ್ಯಗಳು ವಶಕ್ಕೆ ಪಡೆದಿದ್ದರು.

ಬೆಳಗ್ಗೆ ಸ್ಥಳ ಮಹಜರು ಮಾಡಲು ಆರೋಪಿಗಳನ್ನು ಸ್ಥಳಕ್ಕೆ ಕರೆದೊಯ್ಯಲಾಗಿತ್ತು ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಪರಾರಿಯಾಗ್ತಿದ್ದ ಆರೋಪಿಗಳ ಮೇಲೆ ಪೊಲೀಸರು ದಿಶಾ ಹತ್ಯೆ ನಡೆದ 300 ಮೀಟರ್ ದೂರದಲ್ಲಿ ಎನ್‌ಕೌಂಟರ್ ಮಾಡಿದ್ದಾರೆ.

ನಾಲ್ವರು ಆರೋಪಿಗಳ ಎನ್‌ಕೌಂಟರ್​ನಿಂದ ದಿಶಾಗೆ ನ್ಯಾಯ ಸಿಕ್ಕಿದೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಿದೆ. ದೇವರೇ ತಕ್ಕ ಶಿಕ್ಷೆಯನ್ನು ನೀಡಿದ್ದಾನೆ. ನನ್ನ ಪುತ್ರಿ ದಿಶಾ ಮೃತಪಟ್ಟು 10 ದಿನಗಳು ಕಳೆದಿವೆ ಈಗ ನನ್ನ ಪುತ್ರಿ ಆತ್ಮಕ್ಕೆ ಶಾಂತಿ ಸಿಕ್ಕಂತಾಗಿದೆ ಎಂದು ಎನ್‌ಕೌಂಟರ್ ಬಗ್ಗೆ ಮೃತ ದಿಶಾ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ.

Published On - 9:04 am, Fri, 6 December 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ