AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಮದ್ಯದ ಅಮಲಿನಲ್ಲಿ ಬಸ್​ ಕಂಡಕ್ಟರ್ ಮೇಲೆ ಮಹಿಳೆಯಿಂದ ಹಲ್ಲೆ

ಮದ್ಯದ ಅಮಲಿನಲ್ಲಿದ್ದ ಮಹಿಳೆಯೊಬ್ಬರು ಬಸ್​ ಕಂಡಕ್ಟರ್​ ಒಬ್ಬರನ್ನು ನಿಂದಿಸಿ ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಸಹ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​ನಲ್ಲಿ ಮಹಿಳೆ ಕೆಟ್ಟದಾಗಿ ವರ್ತಿಸಿರುವ ಘಟನೆ ನಡೆದಿದೆ. ಬಸ್ ಕಂಡಕ್ಟರ್ ಮೇಲೆ ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ದೈಹಿಕ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ.

ಹೈದರಾಬಾದ್: ಮದ್ಯದ ಅಮಲಿನಲ್ಲಿ ಬಸ್​ ಕಂಡಕ್ಟರ್ ಮೇಲೆ ಮಹಿಳೆಯಿಂದ ಹಲ್ಲೆ
ಮಹಿಳೆ
ನಯನಾ ರಾಜೀವ್
|

Updated on:Feb 01, 2024 | 8:09 AM

Share

ಮದ್ಯದ ಅಮಲಿನಲ್ಲಿದ್ದ ಮಹಿಳೆಯೊಬ್ಬರು ಬಸ್​ ಕಂಡಕ್ಟರ್​ ಒಬ್ಬರನ್ನು ನಿಂದಿಸಿ ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಸಹ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​ನಲ್ಲಿ ಮಹಿಳೆ ಕೆಟ್ಟದಾಗಿ ವರ್ತಿಸಿರುವ ಘಟನೆ ನಡೆದಿದೆ. ಬಸ್ ಕಂಡಕ್ಟರ್ ಮೇಲೆ ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ದೈಹಿಕ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ.

ಕುಡಿದ ಮತ್ತಿನಲ್ಲಿ ಮಹಿಳೆ ವಾಗ್ವಾದದ ವೇಳೆ ಕಂಡಕ್ಟರ್‌ಗೆ ಒದ್ದಿದ್ದಾಳೆ. ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರೊಂದಿಗೆ ಮಹಿಳೆ ಅಸಭ್ಯವಾಗಿ ವರ್ತಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಯಾಣ ದರ ಅಥವಾ ಟಿಕೆಟ್‌ಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

TSRTC ಮಹಿಳೆಯ ವಿರುದ್ಧ ದೂರು ದಾಖಲಿಸಿದೆ ಮತ್ತು ಕಾನೂನು ಜಾರಿ ಸಂಸ್ಥೆಗಳು ಈ ವಿಷಯದ ಬಗ್ಗೆ ಸಕ್ರಿಯವಾಗಿ ತನಿಖೆ ನಡೆಸುತ್ತಿವೆ.

ಮತ್ತೊಂದು ಘಟನೆ ಮದ್ಯದ ಅಮಲಿನಲ್ಲಿ ಬಟ್ಟೆ ಬಿಚ್ಚಿ ವ್ಯಕ್ತಿಯಿಂದ ಅಸಭ್ಯ ವರ್ತನೆ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮದಲ್ಲಿ ನಡೆದಿತ್ತು. ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯರೆದುರು ವ್ಯಕ್ತಿ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ. ವ್ಯಕ್ತಿಯ ಅಸಭ್ಯ ವರ್ತನೆ ಪ್ರಶ್ನಿಸಿದವರಿಗೆ ಆತನ ಮಕ್ಕಳಿಂದ ಹಲ್ಲೆ ನಡೆದಿದೆ.

ಎನ್ಆರ್​ಇಜಿನಲ್ಲಿ ಸುಮಾರು 60ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕೆಲಸ ಮಾಡುವ ವೇಳೆ ಮೂರ್ತಿ ಎಂಬ ವ್ಯಕ್ತಿ ಮಹಿಳೆಯರ ಎದುರು ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ಮೂರ್ತಿಯ ವರ್ತನೆಯನ್ನು ಪ್ರಶ್ನಿಸಿದ ಕಾಂತರಾಜು, ಮಣಿ, ಹಾಲಮ್ಮನವರ ಮೇಲೆ ಮೂರ್ತಿ ಮಕ್ಕಳಾದ ಮಹೇಂದ್ರ, ಸಂತೋಷ್‌ ಹಲ್ಲೆ ನಡೆಸಿದ್ದರು.

ಬಳಿಕ ಆರೋಪಿ ಮೂರ್ತಿಗೆ ಮುಳ್ಳಿನ ಪೊರಕೆಯಿಂದ ಜನರು ಥಳಿಸಿದ್ದಾರೆ. ಸದ್ಯ ಘಟನೆಯಲ್ಲಿ ಕಾಂತರಾಜುರ ಒಂದು ಕಣ್ಣು ಸಂಪೂರ್ಣ ಕುರುಡಾಗಿದೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:08 am, Thu, 1 February 24