ಆಟೋ ಹತ್ತಿದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌.. ಕೃತ್ಯ ಎಸಗಿ ರಸ್ತೆ ಬದಿ ಬೆತ್ತಲೆ ಬಿಸಾಡಿ ಹೋದ ಕೀಚಕರು

Hyderabad Gang Rape: ಮುತ್ತಿನ ನಗರಿ ಹೈದರಾಬಾದ್‌ ಮತ್ತೊಮ್ಮೆ ಬೆಚ್ಚಿಬಿದ್ದಿದೆ. ಕಾಲೇಜು ಮುಗಿಸಿ ಮನೆಗೆ ಹೊರಟಿದ್ದ ವಿದ್ಯಾರ್ಥಿನಿ ಮೇಲೆರಗಿದ ಕಾಮುಕರ ಪಡೆ, ಅಬಲೆಯನ್ನ ಹಿಂಸಿಸಿದೆ. ಕಾಮುಕರ ಕೈಯಲ್ಲಿ ನರಳಿರುವ ಯುವತಿ, ಈಗ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ. ಹೀಗೆ ಪೈಶಾಚಿಕ ಕೃತ್ಯ ನಡೆಸಿರುವ ಕ್ರಿಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಆಟೋ ಹತ್ತಿದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌.. ಕೃತ್ಯ ಎಸಗಿ ರಸ್ತೆ ಬದಿ ಬೆತ್ತಲೆ ಬಿಸಾಡಿ ಹೋದ ಕೀಚಕರು
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
| Updated By: Digi Tech Desk

Updated on:Feb 11, 2021 | 9:12 AM

ಹೈದರಾಬಾದ್‌ನ ದಿಶಾ ಗ್ಯಾಂಗ್‌ ರೇಪ್‌ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ಕಾಮುಕರನ್ನ ಎನ್‌ಕೌಂಟರ್‌ ಮಾಡಲಾಗಿತ್ತು. ಇದು ಒಳ್ಳೆಯ ಪಾಠವಾಗುತ್ತೆ ಅಂತಲೇ ಹೇಳಲಾಗಿತ್ತು. ಆದ್ರೆ, ದಿಶಾ ಪ್ರಕರಣ ಮರೆಯಾಗುವ ಮುನ್ನವೇ ಹೈದರಾಬಾದ್​ನಲ್ಲಿ ಕಾಮುಕರು ಮತ್ತೊಮ್ಮೆ ಪೈಶಾಚಿಕ ಕೃತ್ಯ ನಡೆಸಿದ್ದಾರೆ. ಘಟ್ಕೇಸರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ.ಮೆಡ್ಚಲ್‌ನ ಕಾಲೇಜು ವಿದ್ಯಾರ್ಥಿನಿ ನಿನ್ನೆ ಸಂಜೆ ಕಾಲೇಜು ಮುಗಿಸಿ ಕಾಲೇಜ್‌ ಬಸ್‌ನಲ್ಲೇ ಬಂದಿಳಿದಿದ್ದಳು. ಮನೆಗೆ ತೆರಳಲು ಆಟೋ ಹತ್ತಿದ್ಳು. ಆದ್ರೆ, ಮನೆಗೆ ಕರೆದೊಯ್ಯಬೇಕಿದ್ದ ಆಟೋ ಚಾಲಕ ವಿದ್ಯಾರ್ಥಿನಿಯನ್ನು ಓಮ್ನಿಗೆ ಶಿಫ್ಟ್ ಮಾಡಿ ತನ್ನ ಮೂವರು ಸಂಗಡಿಗರ ಜೊತೆಗೆ ಯಾನಂಪೇಟೆಯ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಪಾಪಕೃತ್ಯ ನಡೆಸಿದ್ದಾರೆ.

ಈ ವೇಳೆ ವಿದ್ಯಾರ್ಥಿನಿಯನ್ನು ದೊಣ್ಣೆ, ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ನಿರ್ಜನ ಪ್ರದೇಶದಲ್ಲೇ ಆಕೆಯನ್ನ ಬೆತ್ತಲೆಯಾಗಿ ಬಿಟ್ಟು ಪರಾರಿಯಾಗಿದ್ದಾರೆ. ಅಲ್ಲಿಂದ ನರಳುತ್ತಾ ಸ್ಥಳೀಯರ ನೆರವು ಪಡೆದ ಯುವತಿ, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ವಿದ್ಯಾರ್ಥಿನಿ ಕೋಮಾ ಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಒಟ್ನಲ್ಲಿ ಕೇಳುವುದಕ್ಕೆ ಇಷ್ಟು ಭಯಾನಕವಾಗಿರುವ ಈ ಘಟನೆ ಹೈದರಾಬಾದ್ ನಗರವನ್ನೇ ಬೆಚ್ಚಿಬೀಳಿಸಿದೆ. ಪೊಲೀಸ್ರು ಕೂಡ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದು, ಕಾಮುಕ ಕ್ರಿಮಿಗಳ ಹೆಡೆಮುರಿ ಕಟ್ಟಲು ಸಜ್ಜಾಗಿದ್ದಾರೆ. ಪೊಲೀಸರ 10 ತಂಡ ರಚಿಸಿ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹತ್ರಾಸ್​ ಗ್ಯಾಂಗ್​ರೇಪ್: ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್

Published On - 7:52 am, Thu, 11 February 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ