Hyderabad Gangrape: ವಾರದ ಬಳಿಕ ಅತ್ಯಾಚಾರಕ್ಕೆ ಬಳಸಲಾಗಿದ್ದ ಕಾರು ಪತ್ತೆ

| Updated By: ನಯನಾ ರಾಜೀವ್

Updated on: Jun 06, 2022 | 1:00 PM

Hyderabad Gangrape: ಇಲ್ಲಿನ ಜಿಬಿಲಿ ಹಿಲ್ಸ್​ನಲ್ಲಿ ನಡೆದ 17 ವರ್ಷ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದ ಬಳಿಕ ಕಾರನ್ನು ಪತ್ತೆ ಮಾಡಲಾಗಿದೆ.

Hyderabad Gangrape: ವಾರದ ಬಳಿಕ ಅತ್ಯಾಚಾರಕ್ಕೆ ಬಳಸಲಾಗಿದ್ದ ಕಾರು ಪತ್ತೆ
Car
Image Credit source: NDTV
Follow us on

ಹೈದರಾಬಾದ್: ಇಲ್ಲಿನ ಜಿಬಿಲಿ ಹಿಲ್ಸ್​ನಲ್ಲಿ ನಡೆದ 17 ವರ್ಷ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದ ಬಳಿಕ ಕಾರನ್ನು ಪತ್ತೆ ಮಾಡಲಾಗಿದೆ. ಐವರು ಆರೋಪಿಗಳು ಈ ಕಾರಿನಲ್ಲೇ ಅತ್ಯಾಚಾರ ಎಸಗಿದ್ದರು ಎಂದು ಹೇಳಲಾಗಿದೆ. ಫಾರ್ಮ್​ಹೌಸ್ ಒಂದರಲ್ಲಿ ಈ ಕಾರು ಪತ್ತೆಯಾಗಿದೆ. ಅತ್ಯಾಚಾರದ ಬಳಿಕ ಈ ಕಾರ್​ ಅನ್ನು ಸ್ವಚ್ಛಗೊಳಿಸಲಾಗಿದೆ ಎನ್ನುವ ಅನುಮಾನ ಮೂಡಿದೆ.

ರಾಜಕಾರಣಿಯೊಬ್ಬರಿಗೆ ಸೇರಿದ ಕಾರು ಇದಾಗಿದ್ದು, ಇತ್ತೀಚೆಗಷ್ಟೇ ಖರೀದಿಸಲಾಗಿದ್ದು, ಇನ್ನೂ ನೋಂದಣಿಯೂ ಆಗಿಲ್ಲವೆಂಬುದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್​ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರ ಮಗ , ರಾಜಕಾರಿ ಮಗ ಸೇರಿದಂತೆ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದ್ದು. ಐದನೇ ಆರೋಪಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ನಡೆದಿದ್ದೇನು?

ಜುಬಿಲಿ ಹಿಲ್ಸ್​​ನಲ್ಲಿ ಮೇ 31ರಂದು ಪಬ್​​ಗೆ ಹೋಗಿದ್ದ 17 ವರ್ಷದ ಬಾಲಕಿ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಲಾಗಿತ್ತು. ಐವರು ಆರೋಪಿಗಳು ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಈ ಕೃತ್ಯದಲ್ಲಿ ಮೂವರು ಅಪ್ರಾಪ್ತ ಬಾಲಕರು ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಐವರು ಆರೋಪಿಗಳ ಪೈಕಿ ಸಾದುದ್ದೀನ್​ ಮಲಿಕ್​ ಮತ್ತು ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು. ಉಮರ್​ಖಾನ್​ ಹಾಗೂ ಮತ್ತಿಬ್ಬರು ಅಪ್ತಾಪ್ತರನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್​​ ನಾಯಕ ಭಟ್ಟಿ ಕೂಡ ಟಿಆರ್​​ಎಸ್​​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಬ್​​ಗಳು ನಿಯಮ ಉಲ್ಲಂಘಿಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದ ಈ ನಿರ್ಲಕ್ಷ್ಯದಿಂದಲೇ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಟೀಕೆ: ಈ ಅತ್ಯಾಚಾರ ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಕಾಂಗ್ರೆಸ್​, ಬಿಜೆಪಿ ಮತ್ತು ಜನಸೇನಾ ಪಕ್ಷಗಳು ವಾಗ್ದಾಳಿ ನಡೆಸಿವೆ. ಈ ಕೃತ್ಯಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್​ ಒತ್ತಾಯಿಸಿದ್ದಾರೆ.

 

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 1:00 pm, Mon, 6 June 22